Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೀತಾಫಲ ಕಾಯಿಗಳಲ್ಲಿ...

Kalaburagi | ಸೀತಾಫಲ ಕಾಯಿಗಳಲ್ಲಿ ಕಪ್ಪು ಕೊಳೆ : ಹವಾಮಾನ ವೈಪರೀತ್ಯದಿಂದ ರೈತರಿಗೆ ಆತಂಕ

ವಾರ್ತಾಭಾರತಿವಾರ್ತಾಭಾರತಿ8 Sept 2026 10:21 AM IST
share
Kalaburagi | ಸೀತಾಫಲ ಕಾಯಿಗಳಲ್ಲಿ ಕಪ್ಪು ಕೊಳೆ : ಹವಾಮಾನ ವೈಪರೀತ್ಯದಿಂದ ರೈತರಿಗೆ ಆತಂಕ

ಕಲಬುರಗಿ: ಹವಾಮಾನ ವೈಪರೀತ್ಯದ ಪರಿಣಾಮವಾಗಿ ಸೀತಾಫಲ (ಕಸ್ಟರ್ಡ್ ಆಪಲ್) ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರಂಭಿಕ ಹಂತದ ಮಿನಿ ಕಾಯಿಗಳು ಹಾಗೂ ಹಣ್ಣುಗಳು ಕಂದು ಬಣ್ಣಕ್ಕೆ ತಿರುಗಿ, ಬಳಿಕ ಕಪ್ಪಾಗಿ ಕೊಳೆತು ಉದುರುತ್ತಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಈ ವರ್ಷ ಮುಂಗಾರು ಆರಂಭವಾದರೂ ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಸುಮಾರು 55 ದಿನಗಳಿಂದ ಮಳೆ ಮೋಡಗಳು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದು, 29 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ಉಷ್ಣಾಂಶ ಕಂಡುಬರುತ್ತಿದೆ. ಇದರಿಂದ ಮಣ್ಣಿನ ತೇವಾಂಶ ಕಡಿಮೆಯಾಗುತ್ತಿದ್ದು, ಬಾವಿ ಹಾಗೂ ಬೋರ್‌ವೆಲ್‌ಗಳಲ್ಲಿಯೂ ನೀರಿನ ಲಭ್ಯತೆ ಕುಸಿಯುತ್ತಿದೆ. ಬೇರುಗಳ ವ್ಯಾಪ್ತಿಯಲ್ಲಿ ಕನಿಷ್ಠ ತೇವಾಂಶವನ್ನು ಕಾಪಾಡಿಕೊಂಡರೆ ನೆಲ್ಲಿ, ಬಾರೆ ಹಾಗೂ ಸೀತಾಫಲದಂತಹ ತೋಟಗಾರಿಕಾ ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಕೃಷಿ ತಜ್ಞರು ಸಲಹೆ ನೀಡಿದ್ದಾರೆ.

ಸೀತಾಫಲ ಕಾಯಿಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಪ್ಪು ಕೊಳೆ ರೋಗದ ಹತೋಟಿಗೆ ಕಾರ್ಬೆಂಡಜಿಮ್ 2 ಗ್ರಾಂ ಅಥವಾ ಟ್ರೈಕೋಡರ್ಮ 5 ಗ್ರಾಂ ಅನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬಹುದು. ರೋಗಬಾಧಿತ ಹಾಗೂ ಕೊಳೆತು ಒಣಗಿ ಬಿದ್ದಿರುವ ಹಣ್ಣುಗಳನ್ನು ತೋಟದಲ್ಲೇ ಬಿಡದೆ ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ನಾಶಪಡಿಸುವುದು ಅತ್ಯಂತ ಅಗತ್ಯ ಎಂದು ಸಸ್ಯ ರೋಗ ತಜ್ಞರು ತಿಳಿಸಿದ್ದಾರೆ.

ಈ ಕುರಿತು ಕೃಷಿ ವಿಜ್ಞಾನಿ ಹಾಗೂ ಸಹ ಪ್ರಾಧ್ಯಾಪಕ ಡಾ.ಜಹೀರ್ ಅಹಮದ್ ರೈತರಿಗೆ ಸಲಹೆ ನೀಡಿದ್ದು, ಸದ್ಯದ ಹವಾಮಾನ ಪರಿಸ್ಥಿತಿಯಲ್ಲಿ ತೋಟದಲ್ಲಿ ತೇವಾಂಶ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X