Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶೂನ್ಯ ಲಿಂಗ ವಿವೇಚನೆ...

Kalaburagi | ಶೂನ್ಯ ಲಿಂಗ ವಿವೇಚನೆ ಭಾಗ-5 ಕೃತಿ ಬಿಡುಗಡೆ ಸಮಾರಂಭ

ಯುವ ಪೀಳಿಗೆಗೆ ವಚನ ಸಾಹಿತ್ಯ ಪರಿಚಯಿಸಬೇಕು: ಅಲ್ಲಮಪ್ರಭು ನಾವದಗೆರೆ

ವಾರ್ತಾಭಾರತಿವಾರ್ತಾಭಾರತಿ8 Sept 2026 12:40 PM IST
share
Kalaburagi | ಶೂನ್ಯ ಲಿಂಗ ವಿವೇಚನೆ ಭಾಗ-5 ಕೃತಿ ಬಿಡುಗಡೆ ಸಮಾರಂಭ

ಕಲಬುರಗಿ : ಕಾಯಕದ ಮೂಲಕ ಉತ್ಪಾದನೆ ಮಾಡಿ ಸಮಾಜದ ಎಲ್ಲರಿಗೂ ಹಂಚುವ ಶರಣ ಸಂಸ್ಕೃತಿಯನ್ನು ಇಂದಿನ ಸಮಾಜದಲ್ಲಿ ಬಿತ್ತಿ ಬೆಳೆಸುವ ಅಗತ್ಯವಿದ್ದು, ಯುವ ಪೀಳಿಗೆಗೆ ವಚನ ಸಾಹಿತ್ಯದ ಪರಿಚಯ ಮಾಡಿಕೊಡಬೇಕು ಎಂದು ಬೀದರ್ ವಚನ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಲ್ಲಮಪ್ರಭು ನಾವದಗೆರೆ ಹೇಳಿದರು.

ಶಹಾಬಾದ್‌ ಬಸವ ಸಮಿತಿ (ಅಲ್ ಸ್ಟಾಮ್ ಕಾಲೋನಿ) ವತಿಯಿಂದ ಭಂಕೂರಿನ ಶಾಂತನಗರ ಬಸವ‌ ಮಂಟಪದಲ್ಲಿ ಸೋಮವಾರ ನಡೆದ ಬಸವರಾಜ ವೆಂಕಟಾಪುರ ಶರಣರು ರಚಿಸಿದ ʼಶೂನ್ಯಲಿಂಗ ವಿವೇಚನೆʼ (ಫ.ಗು. ಹಳಕಟ್ಟಿ ಸಂಪಾದಿತ ವಚನಶಾಸ್ತ್ರ ಸಾರ ಭಾಗ-1ರ ವಚನ ವಿವೇಚನೆ ಭಾಗ-5) ಕೃತಿ ಬಿಡುಗಡೆ ಸಮಾರಂಭ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃತಿ ಕುರಿತು ಮಾತನಾಡಿದ ಬಸವ ಚಿಂತಕ ಡಾ. ಶಿವರಂಜನ ಸತ್ಯಂಪೇಟೆ, ವಚನಶಾಸ್ತ್ರ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಪಾದಿತ ವಚನಶಾಸ್ತ್ರ ಸಾರ ಮೊದಲ ಸಂಪುಟದ ವಚನಗಳನ್ನು ಸರಳ ಭಾಷೆಯಲ್ಲಿ ಅರ್ಥವತ್ತಾಗಿ ವಿಶ್ಲೇಷಿಸಿರುವ ಈ ಕೃತಿ ವಚನ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ಎಂದರು. ವಚನಗಳ ಒಳಾರ್ಥವನ್ನು ಗ್ರಹಿಸಲು ನಿರಂತರ ಅಧ್ಯಯನ ಮತ್ತು ಅನುಭಾವ ಅಗತ್ಯ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕೃತಿ ಬಿಡುಗಡೆ ಮಾಡಿ ಮಾತನಾಡಿ, ವಚನಗಳು ಬದುಕಿಗೆ ಬೆಳಕು ನೀಡುವ ದಾರಿದೀಪಗಳಾಗಿವೆ. ಹಣಕ್ಕಿಂತ ಹೃದಯ ಶ್ರೀಮಂತಿಕೆ ಬೆಳೆಸುವ ಸಂದೇಶವನ್ನು ವಚನಗಳು ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಕೂರ ಬಸವ ಸಮಿತಿ ಅಧ್ಯಕ್ಷ ಅಶೋಕ ವಿ. ಘೂಳಿ ವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷ ಆರ್.ಜಿ. ಶೆಟಗಾರ, ರಾಜೋಳ ಬಸವ ಭಾರತಿ ಯೋಗಧಾಮದ ಲೋಕೇಶ ಗುರೂಜಿ ಹಾಗೂ ಬಸವರಾಜ ವೆಂಕಟಾಪುರ ಶರಣರು ಸಾನ್ನಿಧ್ಯ ವಹಿಸಿದ್ದರು.

ಪಂಪಾಪತಿ ಮೇಟಿ ಕಾರ್ಯಕ್ರಮ ನಿರೂಪಿಸಿದರು. ಬಸವ ಸಮಿತಿ ಕಾರ್ಯದರ್ಶಿ ಮಲ್ಲಿಕಾರ್ಜುನ ಎಸ್. ಪದ್ಮಾಜಿ ಸ್ವಾಗತಿಸಿದರು. ಎಚ್.ಬಿ. ತೀರ್ಥೆ ವಂದಿಸಿದರು. ರೇವಣಸಿದ್ದಪ್ಪ ಮುಸ್ತಾರಿ, ಕಂಟೆಪ್ಪ ಬಿರಾದಾರ, ಶಿವಪುತ್ರ ಕುಂಬಾರ, ಅಮೃತ ಮಾನಕರ್, ಶಿವಶರಣಪ್ಪ ಜಟ್ಟೂರಕರ, ಗುರುಲಿಂಗಪ್ಪ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಚನ ಸಮೂಹ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ಪಾದನೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಯೋಜನೆ ರೂಪಿಸಲಾಗಿದ್ದು, ಅದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ.

-ಅಲ್ಲಮಪ್ರಭು ನಾವದಗೆರೆ, ಬೀದರ್

Tags

BookKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X