Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಪುಸ್ತಕಗಳು ಬದುಕಿಗೆ...

Kalaburagi | ಪುಸ್ತಕಗಳು ಬದುಕಿಗೆ ದಾರಿದೀಪ: ಡಾ.ಸ್ವಾಮಿರಾವ್ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ24 Sept 2026 8:23 PM IST
share
Kalaburagi | ಪುಸ್ತಕಗಳು ಬದುಕಿಗೆ ದಾರಿದೀಪ: ಡಾ.ಸ್ವಾಮಿರಾವ್ ಕುಲಕರ್ಣಿ

ಕಲಬುರಗಿ: ಪುಸ್ತಕಗಳು ವ್ಯಕ್ತಿಗೆ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವು ಮೂಡಿಸುವುದರ ಜೊತೆಗೆ ಜೀವನದಲ್ಲಿ ಸಾಧನೆಯತ್ತ ಸಾಗಲು ಮಾರ್ಗದರ್ಶನ ನೀಡುತ್ತವೆ. ಜೀವಂತ ಆದರ್ಶಗಳ ಪಾಠ ಕಲಿಸುವ ಪುಸ್ತಕಗಳು ಬದುಕಿಗೆ ದಾರಿದೀಪವಾಗುತ್ತವೆ ಎಂದು ಹಿರಿಯ ಸಾಹಿತಿ ಡಾ. ಸ್ವಾಮಿರಾವ್ ಕುಲಕರ್ಣಿ ಹೇಳಿದರು.

ನಗರದ ರಾಮಮಂದಿರ ಸಮೀಪದ ವಿವೇಕಾನಂದ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಮತಿ ಬಾಲಮ್ಮ ಮಹಾದೇವಪ್ಪ ಕಡೇಚೂರ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಸಾಹಿತಿ ದಿ. ಮಹಾದೇವಪ್ಪ ಕಡೇಚೂರ್ ಅವರ ‘ಅಯ್ಯನ ಕಥೆಗಳು’ ಪುಸ್ತಕ ವಿತರಣಾ ಅಭಿಯಾನದ ಮೂರನೇ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮಹಾದೇವಪ್ಪ ಕಡೇಚೂರ್ ಅವರು ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟದಲ್ಲಿ ಭಾಗವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಚಿಂತನೆಗಳು ಮತ್ತು ಬದುಕಿನ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಟ್ರಸ್ಟ್‌ನ ಈ ಅಭಿಯಾನ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಹಿರಿಯ ಪತ್ರಕರ್ತ ಬಾಬುರಾವ್ ಯಡ್ರಾಮಿ ಮಾತನಾಡಿ, ಪುಸ್ತಕ ವಿತರಣಾ ಅಭಿಯಾನವನ್ನು ಕಲ್ಯಾಣ ಕರ್ನಾಟಕದಾದ್ಯಂತ ವಿಸ್ತರಿಸಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಬೇಕು ಎಂದು ಕರೆ ನೀಡಿದರು.

ಮಹಾದೇವಪ್ಪ ಕಡೇಚೂರ್ ಅವರ ಬದುಕು, ಬರಹ ಮತ್ತು ಆದರ್ಶಗಳು ಯುವಜನರಿಗೆ ಸ್ಫೂರ್ತಿದಾಯಕವಾಗಿವೆ. ಸ್ವಾತಂತ್ರ್ಯ ಹೋರಾಟಗಾರರು, ತಂದೆ-ತಾಯಿ ಮತ್ತು ಗುರುಗಳನ್ನು ಆದರ್ಶವಾಗಿಟ್ಟುಕೊಂಡು ಮುನ್ನಡೆದರೆ ಉತ್ತಮ ಸಾಧನೆ ಸಾಧ್ಯ. ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಮಿತಿ ಹಾಕಿಕೊಂಡು ಅಧ್ಯಯನಶೀಲರಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾನಿಕೇತನ ಸಂಸ್ಥೆಯ ಪ್ರಾಂಶುಪಾಲ ಸಿದ್ದಪ್ಪ ಭಗವತಿ ವಹಿಸಿದ್ದರು.

ಟ್ರಸ್ಟ್ ಸದಸ್ಯ ಮಹೇಶ್ ಕಡೇಚೂರ್ ಅತಿಥಿಗಳನ್ನು ಶಾಲು, ಕೃತಿ ಹಾಗೂ ಪುಷ್ಪ ನೀಡಿ ಗೌರವಿಸಿದರು. ಆಕಾಶವಾಣಿಯ ವಿಶ್ರಾಂತ ಕಾರ್ಯಕ್ರಮ ಮುಖ್ಯಸ್ಥ ಡಾ. ಸದಾನಂದ ತರ್ಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ತಿಂಗಳ 24ರಂದು ಶಾಲಾ ಗ್ರಂಥಾಲಯಗಳಿಗೆ ಪುಸ್ತಕ ವಿತರಿಸುವ ಯೋಜನೆ ಮುಂದುವರಿಯಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿನಿ ಅನನ್ಯ ಪ್ರಾರ್ಥನಾ ಗೀತೆ ಹಾಡಿದರು. ವಿದ್ಯಾರ್ಥಿನಿಯರಾದ ಸಾನ್ವಿ ಕುಲಕರ್ಣಿ, ಕಾವ್ಯ ಬಸಮೆ ಹಾಗೂ ಅನುಷಾ ಆನಂದ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ರತ್ನಾ ಅಳ್ಳದ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ‘ಅಯ್ಯನ ಕಥೆಗಳು’ ಪುಸ್ತಕ ಹಾಗೂ ಸಿಹಿ ವಿತರಿಸಲಾಯಿತು.

Tags

BooksKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X