Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಂವಿಧಾನದಿಂದ ಪ್ರಬುದ್ಧ ಭಾರತ...

ಕಲಬುರಗಿ | ಸಂವಿಧಾನದಿಂದ ಪ್ರಬುದ್ಧ ಭಾರತ ನಿರ್ಮಾಣ : ಬಿ.ವೆಂಕಟ ಸಿಂಗ್

ವಾರ್ತಾಭಾರತಿವಾರ್ತಾಭಾರತಿ27 Nov 2025 7:20 PM IST
share
ಕಲಬುರಗಿ | ಸಂವಿಧಾನದಿಂದ ಪ್ರಬುದ್ಧ ಭಾರತ ನಿರ್ಮಾಣ : ಬಿ.ವೆಂಕಟ ಸಿಂಗ್

ಕಲಬುರಗಿ: ಹಲವು ಜಾತಿ ಧರ್ಮಗಳಿಂದ ಕೂಡಿದ ದೇಶದಲ್ಲಿ ಸಮಾನತೆ ಮೌಲ್ಯಗಳನ್ನು ಕೊಟ್ಟಿರುವ ಸಂವಿಧಾನದಿಂದ ಭಾರತ ಇಂದು ಪ್ರಬುದ್ಧ ರಾಷ್ಟ್ರವಾಗಿ ಬೆಳೆಯುತ್ತಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಹೇಳಿದರು.

ಕರ್ನಾಟಕ ರಾಜ್ಯೋತ್ಸವ ಹಾಗೂ ಭಾರತೀಯ ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಏರ್ಪಡಿಸಿದ ಮಕ್ಕಳ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಬಿ. ವೆಂಕಟ ಸಿಂಗ್, ರಾಷ್ಟ್ರದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ , ಅಖಂಡತೆ, ಜಾತ್ಯತೀತ ಹಾಗೂ ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಡಾ. ಬಿ.ಆರ್. ಅಂಬೇಡ್ಕರ್ ರವರು ಮಾದರಿ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಂವಿಧಾನ ದೂರದೃಷ್ಟಿ, ಸಮನ್ವಯತೆಯಿಂದ ಕೂಡಿದೆ. ಈ ನೆಲದಲ್ಲಿ ವಾಸಿಸುವವರಿಗೆ ಹಕ್ಕುಗಳನ್ನು ಕಲ್ಪಿಸಿದ್ದಾರೆ. ಇಂಥ ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಹಾಗೂ ಸಂವಿಧಾನದ ಆಶಯಗಳನ್ನು ಇಂದಿನ ಮಕ್ಕಳಿಗೆ ತಿಳಿಸಿ ಕೊಡುವ ನಿಟ್ಟಿನಲ್ಲಿ ಪರಿಷತ್ತು ಉತ್ತಮ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ್‌ ಪಾಟೀಲ್‌ ತೇಗಲತಿಪ್ಪಿ ಮಾತನಾಡಿ, ಸಂವಿಧಾನದಡಿ ಪ್ರಾಚೀನ ಭಾಷೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿದೆ. ನಾಡಿನ ನೆಲ-ಜಲ, ಭಾಷೆ-ಸಂಸ್ಕೃತಿಗಳ ಉನ್ನತಿಯನ್ನು ಕಂಡಿದ್ದೇವೆ. ನಾಡಿನ ನೆಲದ ಇತಿಹಾಸ ಪರಂಪರೆ ಮತ್ತು ಸಮಗ್ರತೆಯನ್ನು ಸಂವಿಧಾನ ಎತ್ತಿ ಹಿಡಿದಿದೆ ಎಂದು ಹೇಳಿದರು.

ಈ ವೇಳೆ ಜಿಪಂ ಮಾಜಿ ಸದಸ್ಯೆ ಸುನಂದಾ ರವಿರಾಜ ಕೊರವಿ, ಯುವ ಮುಖಂಡ ಅಶ್ವಿನ ಸಂಕಾ, ವಿಶ್ವಖ್ಯಾತಿಯ ಚಿತ್ರಕಲಾವಿದ ಮಹಮ್ಮದ್‌ ಅಯಾಝೋದ್ದಿನ್ ಪಟೇಲ್, ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಝೀರುದ್ದಿನ್ ಮುತ್ತವಲ್ಲಿ, ಕಸಾಪ ಜಿಲ್ಲಾ ಕಾರ್ಯದರ್ಶಿ ಶಿವರಾಜ ಅಂಡಗಿ, ರಾಜೇಂದ್ರ ಮಾಡಬೂಳ, ಎಂ.ಎನ್. ಸುಗಂಧಿ, ಶಕುಂತಲಾ ಪಾಟೀಲ್‌, ಧರ್ಮರಾಜ ಜವಳಿ, ರವೀಂದ್ರಕುಮಾರ್‌ ಭಂಟನಳ್ಳಿ, ಚಂದ್ರಕಾoತ ಸೂರನ್, ಪ್ರಭವ ಪಟ್ಟಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X