ಕಲಬುರಗಿ | ಬಸ್-ಸೈಕಲ್ ಢಿಕ್ಕಿ : ವಿದ್ಯಾರ್ಥಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ
ಕಲಬುರಗಿ: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿಗೆ ಕೆಎಸ್ಆರ್ಟಿಸಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.
ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೆಯ ತರಗತಿಯಲ್ಲಿ ಓದುತ್ತಿರುವ ಇರ್ಫಾನ್ ದವಲಸಾಬ್ ಗಾಯಗೊಂಡಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ವಿದ್ಯಾರ್ಥಿಗೆ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆ ಜೇವರ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Next Story





