ಕಲಬುರಗಿ| ಬಸ್‌ಗೆ ಕಾರು ಢಿಕ್ಕಿ : ಸ್ಥಳದಲ್ಲೇ ತಂದೆ, ಮಗ ಮೃತ್ಯು

ಕಲಬುರಗಿ: ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ತಂದೆ ಮತ್ತು ಮಗ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಬಳಿ ರವಿವಾರ ನಡೆದಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಬಿಳಗಿ ಮೂಲದವಾರದ ಸೋಮಶೇಖರ್ ಭಾಸಗಿ (58), ಅವರ ಮಗ ಪ್ರಕಾಶ್ (28) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರಗಿಯಿಂದ ಬಿಳಗಿಗೆ ಹೋಗುತ್ತಿದ್ದಾಗ ಎದುರಿಗೆ ಬಂದ ಎನ್‌ಈಕೆಆರ್‌ಟಿಸಿ ಬಸ್‌ಗೆ ಕಾರು ಢಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ದೇವಲ ಗಾಣಗಾಪುರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





