Kalaburagi | ಮರಕ್ಕೆ ಕಾರು ಢಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

ಚಿತ್ತಾಪುರ : ಮತಕ್ಷೇತ್ರದ ವಚ್ಚಾ ಗ್ರಾಮದ ಸಮೀಪ ಸ್ವಿಫ್ಟ್ ಡಿಜೈರ್ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಚಿಂಚೋಳಿಯಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರನ್ನು ಶಿವರಾಜ್ (28) ಹಾಗೂ ಸಚೀನ್ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಎಂಬವರು ಕಾರಿನಲ್ಲಿ ಇದ್ದರು ಎಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಜಗದೇವಪ್ಪ ಪಾಳಾ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story




