ಕಲಬುರಗಿ | ಜೆಡಿಎಸ್ ಮುಖಂಡನಿಗೆ ಬೆದರಿಕೆ ಆರೋಪ : ಲೋಕೋಪಯೋಗಿ ಸುಪರಿಂಟೆಂಡೆಂಟ್ ಎಂಜಿನಿಯರ್ ವಿರುದ್ಧ ಪ್ರಕರಣ ದಾಖಲು

ಕೃಷ್ಣಾ ರೆಡ್ಡಿ, ಅಮೀನ್ ಮುಕ್ತಾರ್
ಕಲಬುರಗಿ: ಜೆಡಿಎಸ್ ಮುಖಂಡ ಕೃಷ್ಣಾ ರೆಡ್ಡಿ ಅವರಿಗೆ ಜೀವ ಬೆದರಿಕೆ ಒಡ್ಡಿರುವ ಆರೋಪದಲ್ಲಿ ಜಿಲ್ಲಾ ನ್ಯಾಯಾಲಯದ ಅನುಮತಿಯ ಮೇರೆಗೆ ಕಲಬುರಗಿ ಲೋಕೋಪಯೋಗಿ ಇಲಾಖೆಯ ಸುಪರಿಂಟೆಂಡೆಂಟ್ ಎಂಜಿನಿಯರ್ ವಿರುದ್ಧ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.
ಲೋಕೋಪಯೋಗಿ ಇಲಾಖೆಯ ಸುಪರಿಂಟೆಂಡೆಂಟ್ ಎಂಜಿನಿಯರ್ ಅಮೀನ್ ಮುಕ್ತಾರ್ ಅಹ್ಮದ್ ವಿರುದ್ಧ ಕೃಷ್ಣಾ ರೆಡ್ಡಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 147/2025ರಡಿ ಕಲಂ 352, 351(2) ಬಿ.ಎನ್.ಎಸ್. ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
Next Story





