Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿಯಲ್ಲಿ...

Kalaburagi | ಶರಣಬಸವ ವಿವಿಯಲ್ಲಿ ಸಂಶೋಧನಾ, ನಾವೀನ್ಯತೆ, ಉದ್ಯಮಶೀಲತಾ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2026 8:50 PM IST
share
Kalaburagi | ಶರಣಬಸವ ವಿವಿಯಲ್ಲಿ ಸಂಶೋಧನಾ, ನಾವೀನ್ಯತೆ, ಉದ್ಯಮಶೀಲತಾ ಕೇಂದ್ರ ಉದ್ಘಾಟನೆ

ಕಲಬುರಗಿ: ಮುಗುಳಖೋಡ ಜಿಡಗಾ ಮಠದ ಪೀಠಾಧಿಪತಿ ಡಾ.ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರು ಶರಣಬಸವ ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ಡಾ.ಶರಣಬಸವಪ್ಪ ಅಪ್ಪಾಜಿ ಸಂಶೋಧನಾ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿದರು.

ಇದೇ ವೇಳೆ 200ಕ್ಕೂ ಅಧಿಕ ಅತ್ಯಾಧುನಿಕ ಕಂಪ್ಯೂಟರ್‌ಗಳು ಹಾಗೂ ಉನ್ನತ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ನವೀಕೃತ ಕಂಪ್ಯೂಟರ್ ಕೇಂದ್ರಗಳಿಗೂ ಚಾಲನೆ ನೀಡಲಾಯಿತು.

ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್‌ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಮುರುಘರಾಜೇಂದ್ರ ಮಹಾಸ್ವಾಮೀಜಿ, ಈ ನೂತನ ಸೌಲಭ್ಯಗಳು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಂಶೋಧನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿವೆ ಎಂದು ಹೇಳಿದರು.

ಸಂಶೋಧನಾ ಉತ್ಕೃಷ್ಟತಾ ಕೇಂದ್ರಕ್ಕೆ ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಹೆಸರಿಡುವುದು ಸೂಕ್ತವಾಗಿದೆ. ಕಲಬುರಗಿ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ದೂರದೃಷ್ಟಿಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಿದೆ ಎಂದು ಶ್ಲಾಘಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳು ಮತ್ತು ಶರಣಬಸವ ವಿಶ್ವವಿದ್ಯಾಲಯದ ಮೂಲಕ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಹಾಗೂ ಸಂಶೋಧನೆಗೆ ಹೊಸ ಅವಕಾಶಗಳು ಸೃಷ್ಟಿಯಾಗಿವೆ. ಜ್ಞಾನ ದಾಸೋಹದ ಪರಂಪರೆಯನ್ನು ಸಂಘ ಯಶಸ್ವಿಯಾಗಿ ಮುಂದುವರಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ದಾಕ್ಷಾಯಿಣಿ ಅವ್ವಾಜಿ ಮಾತನಾಡಿ, ಡಾ.ಅಪ್ಪಾಜಿ ಅವರು ಸಂಶೋಧನೆ ಮತ್ತು ನಾವೀನ್ಯತೆಗೆ ಸದಾ ಆದ್ಯತೆ ನೀಡುತ್ತಿದ್ದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಜ್ಞಾನ ಹಾಗೂ ಕೌಶಲ್ಯ ವೃದ್ಧಿಗಾಗಿ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುದು ಅವರ ಆಶಯವಾಗಿತ್ತು ಎಂದು ಸ್ಮರಿಸಿದರು.

ವಿಶ್ವವಿದ್ಯಾಲಯದಲ್ಲಿ ಆರಂಭಗೊಂಡಿರುವ ಈ ನೂತನ ಸಂಶೋಧನಾ ಕೇಂದ್ರವು ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರಿಗೆ ಸಲ್ಲಿಸುವ ಅರ್ಥಪೂರ್ಣ ಗೌರವವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಸ್ವಾಗತಿಸಿದರು. ಪ್ರೊ. ನಿರುಪಮಾ ವಂದನಾರ್ಪಣೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ನಿರ್ದೇಶಕ ಪ್ರೊ. ವಿ.ಡಿ. ಮೈತ್ರಿ, ಸಂಶೋಧನಾ ಡೀನ್ ಡಾ. ಸುಜಾತಾ ಮಲ್ಲಾಪುರ, ಡಾ. ಮಲ್ಲಿಕಾರ್ಜುನ ದೇಶಮುಖ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Sharanabasava UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X