ಕಲಬುರಗಿ | ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಲಬುರಗಿ : ರಾಜ್ಯ ಬಾಲ ಭವನ ಸೊಸೈಟಿ, ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಕಲಬುರಗಿ ರಂಗಾಯಣ ಇವರ ಸಹಯೋಗದೊಂದಿಗೆ ರಂಗಾಯಣದಲ್ಲಿ ಶುಕ್ರವಾರ ಆಯೋಜಿಸಿದ 2025-26ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ ಅವರು ಉದ್ಘಾಟಿಸಿದರು.
5 ರಿಂದ16 ವರ್ಷವರೆಗಿನ ಮಕ್ಕಳಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುಚಟಿಕೆಯಲ್ಲಿ ಭಾಗವಹಿಸಲು ಈ ಶಿಬಿರ ಸಹಕಾರಿಯಾಗಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಿವಶರಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಬಾಲಕರ ಬಾಲ ಮಂದಿರದ ಅಧೀಕ್ಷಕಿ ನಾಜ್ಮೀನ್ ಬೇಗಂ ಸೇರಿದಂತೆ ಮುದ್ದು ಮಕ್ಕಳು, ಪೋಷಕರು ಭಾಗಿಯಾಗಿದ್ದರು. ಅಧೀಕ್ಷಕಿ ಹಾಗೂ ಸಂಪನ್ಮೂಲ ವ್ಯಕ್ತಿ ಶೋಭಾ ಬನ್ನಿಗೋಳ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
Next Story





