Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಪಾಲಿಕೆಯ 2026-27ನೇ ಸಾಲಿನ...

ಕಲಬುರಗಿ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಮಂಡನೆ

ವಾರ್ತಾಭಾರತಿವಾರ್ತಾಭಾರತಿ31 March 2026 11:42 PM IST
share
ಕಲಬುರಗಿ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಮಂಡನೆ
► 234.44 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 2026-27ನೇ ಸಾಲಿನ 234.44 ಕೋಟಿ ರೂ. ಮೊತ್ತದ ಮುಂಗಡ ಪತ್ರ ಮಂಗಳವಾರ ಮಂಡಿಸಲಾಗಿದ್ದು, ನಾರಿಯರಿಗೆ ಪಿಂಕ್ ಆಟೋ, ಪ್ರತಿ ವಾರ್ಡ್ ಗೆ ತುರ್ತು ಅಭಿವೃದ್ದಿ ಕಾರ್ಯ ಕೈಗೊಳ್ಳಲು ತಲಾ‌ 10 ಲಕ್ಷ‌ ರೂ. ಗಳ ಅನುದಾನದಂತಹ ಹಲವು ನೂತನ ಯೋಜನೆಗಳನ್ನು ನಗರದ ನಿವಾಸಿಗಳಿಗೆ ಪಾಲಿಕೆ ಘೋಷಣೆ ಮಾಡಿದೆ.

ನಗರದ ಇಂದಿರಾ ಸ್ಮಾರಕ (ಟೌನ್ ಹಾಲ್) ಭವನದಲ್ಲಿ ಮಹಾಪೌರರಾದ ವರ್ಷಾ ರಾಜೀವ ಜಾನೆ ಅಧ್ಯಕ್ಷತೆಯಲ್ಲಿ ಜರುಗಿದ ವಿಶೇಷ ತುರ್ತು ಮುಂಗಡ ಪತ್ರ ಮಂಡನೆ ಸಭೆಯಲ್ಲಿ ತೆರಿಗೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಪಮಾ ರಮೇಶ್ ಕಮಕನೂರು ಅವರು ವಿವಿಧ ಮೂಲದಿಂದ 227.08 ಕೋಟಿ ರೂ. ಆದಾಯ ನಿರೀಕ್ಷೆಯೊಂದಿಗೆ ಮೂಲಸೌಕರ್ಯ, ಜನಕಲ್ಯಾಣ, ನೂತನ ಯೋಜನೆ ಅನುಷ್ಠಾನಕ್ಕೆ 234.44 ಕೋಟಿ ರೂ. ವೆಚ್ಚದ ಅಂದಾಜುದೊಂದಿಗೆ ಸುಮಾರು 7.35 ಕೋಟಿ ರೂ.ಗಳ ಕೊರತೆಯ ಬಜೆಟ್ ಮಂಡಿಸಿದೆ.

ನಗರದ ರಸ್ತೆ ಸ್ವಚ್ಛತೆ, ಘನತ್ಯಾಜ್ಯ ವಿಲೇವಾರಿ, ವಿದ್ಯುಚ್ಛಕ್ತಿ ಮತ್ತು ಇಂಧನ ನೈರ್ಮಲ್ಯ ಕಾಮಗಾರಿಗೆ ಅತಿ ಹೆಚ್ಚು 40 ಕೋಟಿ ರೂ. ಹಣ ಮೀಸಲಿಡಲಾಗಿದೆ. ಹೊಸ ರಸ್ತೆಗಳ ನಿರ್ಮಾಣಕ್ಕೆ 13 ಕೋಟಿ ರೂ., ನೀರು ಸರಬರಾಜು ಮತ್ತು ತೆರೆದ ಭಾವಿ ಅಭಿವೃದ್ಧಿಗೆ 9 ಕೋಟಿ ರೂ., ದೊಡ್ಡ ಚರಂಡಿಗಳ ನಿರ್ಮಾಣಕ್ಕೆ 7 ಕೋಟಿ ರೂ., ರಸ್ತೆ ಪಕ್ಕದ ಡ್ರೇನ್ ನಿರ್ಮಾಣಕ್ಕೆ 2 ಕೋಟಿ ರೂ., ನಗರದ ಹೊರವಲಯದಲ್ಲಿ ಸ್ವಾಗತ ಕಮಾನು ನಿರ್ಮಾಣಕ್ಕೆ 2 ಕೋಟಿ ರೂ., ಉದ್ಯಾನವನಗಳ ಅಭಿವೃದ್ದಿಗೆ 2.84 ಕೋಟಿ ರೂ., ನರ್ಸರಿ ಅಭಿವೃದ್ಧಿಗೆ 25 ಲಕ್ಷ‌ ರೂ., ಮಳೆ ನೀರು ಕೊಯ್ಲು ಪದ್ದತಿ ಅಲವಡಿಕೆಗೆ 50 ಲಕ್ಷ‌ ರೂ. ಹಂಚಿಕೆ ಮಾಡಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ 86 ಲಕ್ಷ ರೂ., ಶೇ.7.25 ಯೋಜನೆಯಡಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ 20 ಲಕ್ಷ ರೂ. ಹಾಗೂ ಅಂಗವಿಕಲರ ಕಲ್ಯಾಣಕ್ಕೆ ಶೇ.5 ನಿದಿಯಡಿ 10 ಲಕ್ಷ ರೂ. ಅನುದಾನ ಕಾಯ್ದಿರಿಸಲಾಗಿದೆ. ಬೀದಿ ದೀಪಗಳ ನಿರ್ವಹಣೆಗಾಗಿ 303.73 ಲಕ್ಷ ರೂ. ಮತ್ತು ವಿಸ್ತರಣೆಗೆ 50 ಲಕ್ಷ ರೂ., ಶೌಚಾಲಯ ಮತ್ತು ಮೂತ್ರಾಲಯ ನಿರ್ಮಾಣಕ್ಕೆ 76.74 ಲಕ್ಷ‌ ರೂ., ತೃತೀಯ ಲಿಂಗಿಗಳಿಗೆ ವಿಶೇಷ ಶೌಚಾಲಯ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ. ಇದಲ್ಲದೆ ಹೊಸ ಬಡಾವಣೆಗಳ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ತೆಗೆದಿರಿಸಲಾಗಿದೆ.

ಹಿರಿಯ ನಾಗರಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಹೊಸ ಯೋಜನೆಗಳನ್ನು ರೂಪಿಸಲಾಗಿದೆ. ಸುಂದರ ನಗರದ ಪರಿಕಲ್ಪನೆಯೊಂದಿಗೆ ಬಜೆಡ್ ಮಂಡಿಸಿರುವೆ ಎಂದು ಅನುಪಮಾ ರಮೇಶ ಕಮಕನೂರ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.

ನಗರ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್:

ಬಜೆಟ್ ಮಂಡನೆ ನಂತರ ನಡೆದ ಚರ್ಚೆಯಲ್ಲಿ ಮಹಾಪೌರರಾದ ವರ್ಷಾ ರಾಜೀವ ಜಾನೆ ಮಾತನಾಡಿ, ಕಲಬುರಗಿಯನ್ನು ಸುಂದರ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಸರ್ವಾಂಗೀಣ ಅಭಿವೃದ್ದಿಯ ವಿಶಾಲ ದೃಷ್ಟಿಕೋನವುಳ್ಳ ಬಜೆಟ್ ಇದಾಗಿದೆ. ಸುಸ್ಥಿರ ಅಭಿವೃದ್ಧಿ, ನಾರಿಯರ ಸಬಲೀಕರಣಕ್ಕೆ ಹಲವು ವಿನೂತನ ಯೋಜನೆ ಘೋಷಿಸಿದೆ. ನಗರದ ಅಭಿವೃದ್ಧಿಗೆ ಪೂರಕ ಬಜೆಟ್ ಇದಾಗಿದೆ ಎಂದು ಬಜೆಟ್ ಕುರಿತು ಹರ್ಷ ವ್ಯಕ್ತಪಡಿಸಿದರು.

ನಾರಿಯರಿಗೆ ಪಿಂಕ್ ಆಟೋ:

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ನಗರದ 55 ವಾರ್ಡ್ ಗಳಿಗೆ ತಲಾ ಒಂದು “ಪಿಂಕ್ ಆಟೋ” ಒದಗಿಸುವ ಯೋಜನೆಯನ್ನು ಬಜೆಟ್‌ನಲ್ಲಿ ಘೊಷಿಸಲಾಗಿದೆ. ನಗರದ ನಾರಿಯರು ಸ್ವಯಂ ಉದ್ಯೋಗಕ್ಕೆ ಮುಂದಾಗಲು ಇದು ಮುನ್ನುಡಿ ಬರೆಯಲಿದೆ. ಇದಲ್ಲದೆ ಮಹಿಳೆಯರಿಗೆ ದ್ವಿಚಕ್ತ, ತ್ರಿಚಕ್ರ, ನಾಲ್ಕು ಚಕ್ರ ವಾಹನ ಚಾಲನಾ ತರಬೇತಿ ನೀಡಲು ಸಹ ಆಯವ್ಯಯದಲ್ಲಿ 3 ಕೋಟಿ ರೂ. ಹಣ ಮೀಸಲಿಟ್ಟಿದ್ದು, ನಿರುದ್ಯೋಗಿ ಯುವತಿಯರಿಗೆ ಇದು ಸಹಿ ಸುದ್ದಿಯಾಗಿದೆ.

ಮೇಯರ್ ವಿವೇಚನಾ‌ ನಿಧಿ ಹೆಚ್ಚಳ:

ಇನ್ನು ಆಯವ್ಯಯದಲ್ಲಿ ಮೇಯರ್ ವಿವೇಚನಾ ನಿಧಿ 200 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ. ಈ ಹಿಂದೆಲ್ಲ‌100 ಲಕ್ಷ‌ ರೂ. ಇತ್ತು. ಹೊಸದಾಗಿ ಉಪ ಮೇಯರ್ ವಿವೇಚನಾ ನಿಧಿ ಸೃಷ್ಟಿಸಿದ್ದು, 100 ಲಕ್ಷ ರೂ. ಮೀಸಲಿಡಲಾಗಿದೆ. ಅದೇ‌ ರೀತಿ ಆಯುಕ್ತರಿಗೆ 100 ಲಕ್ಷ‌ ರೂ.‌ವಿವೇಚನಾ ನಿಧಿ ಬಳಕೆಗೆ ಆಯವ್ಯಯದಲ್ಲಿ ಅವಕಾಶ ಕಲ್ಪಿಸಿದೆ.

ಬಜೆಟ್ ವಿಶೇಷ ಸಭೆಯಲ್ಲಿ ಪಾಲಿಕೆಯ ಉಪಮಹಾಪೌರರಾದ ತೃಪ್ತಿ ಎಸ್. ಅಲ್ಲದ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಯಾಜ್ ಖಾನ್, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಶೇಖ್ ಹುಸೇನ್, ಲೆಕ್ಕ ಸ್ಥಾಯಿ ಸಮಿತಿ ಅಧ್ಯಕ್ಷೆ ಪುತಲಿ ಬೇಗಂ, ಆಡಳಿತ ಪಕ್ಷದ ನಾಯಕ ಶೇಖ್ ಅಜ್ಮಲ ಅಹ್ಮದ್ ಅಫ್ಜಲ ಗೋಲಾ, ವಿರೋಧ ಪಕ್ಷದ ನಾಯಕಿ ಶೋಭಾ ಗುರುರಾಜ ದೇಸಾಯಿ, ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಉಪ ಆಯುಕ್ತೆ(ಅಭಿವೃದ್ದಿ) ಪ್ರಮೀಳಾ ಎಂ.ಕೆ., ಮುಖ್ಯ ಹಣಕಾಸು ಅಧಿಕಾರಿ ಸಂತೋಷ ಸೇರಿದಂತೆ ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

Tags

budgetKalaburagi City Corporation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X