Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗಾಣಗಾಪುರದಲ್ಲಿ ಸ್ವಚ್ಛತಾ...

Kalaburagi | ಗಾಣಗಾಪುರದಲ್ಲಿ ಸ್ವಚ್ಛತಾ ಅಭಿಯಾನ: 800 ಕೆ.ಜಿ. ತ್ಯಾಜ್ಯ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ3 Oct 2026 6:56 PM IST
share
Kalaburagi | ಗಾಣಗಾಪುರದಲ್ಲಿ ಸ್ವಚ್ಛತಾ ಅಭಿಯಾನ: 800 ಕೆ.ಜಿ. ತ್ಯಾಜ್ಯ ಸಂಗ್ರಹ

ಕಲಬುರಗಿ: ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛ ಭಾರತ ಅಭಿಯಾನದಡಿ ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲಗಾಣಗಾಪುರದಲ್ಲಿ ಶುಕ್ರವಾರ ಸತ್ಸಂಗ್ ಫೌಂಡೇಶನ್‌ನ ಸ್ವಯಂಸೇವಕರ ತಂಡವು ಸ್ಥಳೀಯ ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಸೇರಿ ನರಸಿಂಹ ತೀರ್ಥ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.

ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯ ಯತಿರಾಜ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೂ ಕೈಜೋಡಿಸಿದ್ದು, ನರಸಿಂಹ ತೀರ್ಥ ಪ್ರದೇಶದಿಂದ ಸುಮಾರು 700ರಿಂದ 800 ಕೆ.ಜಿ. ಘನ ತ್ಯಾಜ್ಯವನ್ನು ಸಂಗ್ರಹಿಸಲಾಯಿತು.

ಸತ್ಸಂಗ್ ಫೌಂಡೇಶನ್ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಆಡಳಿತ ಮಂಡಳಿ ಸಹಯೋಗದಲ್ಲಿ ನಡೆದ ಪರಿಸರ ಜಾಗೃತಿ ಮತ್ತು ಸ್ವಚ್ಛತಾ ಅಭಿಯಾನವನ್ನು ಕಲಬುರಗಿ ಉಪವಿಭಾಗದ ಸಹಾಯಕ ಆಯುಕ್ತೆ ರಿತಿಕಾ ವರ್ಮಾ ಉದ್ಘಾಟಿಸಿ ಮಾತನಾಡಿದರು.

ಪ್ರದೇಶದ ಸ್ವಚ್ಛತೆ ಆ ನೆಲದ ಭವ್ಯತೆಯನ್ನು ಸಾರುತ್ತದೆ. ಹೀಗಾಗಿ ಮಕ್ಕಳು, ಯುವಜನರು ಹಾಗೂ ಸಮುದಾಯದ ಜನರಲ್ಲಿ ಪರಿಸರದ ಜವಾಬ್ದಾರಿ, ಸ್ವಚ್ಛತೆ ಮತ್ತು ಸಮಾಜಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಗಾಣಗಾಪುರ ಸಂಗಮ ಕ್ಷೇತ್ರದ ಪಾವಿತ್ರ್ಯತೆ ಹೆಚ್ಚಿಸಲು ನದಿ ಪಾತ್ರದಲ್ಲಿ ಕಡ್ಡಾಯವಾಗಿ ಸ್ವಚ್ಛತಾ ಕ್ರಮಗಳನ್ನು ಅನುಸರಿಸಬೇಕು. ಸತ್ಸಂಗ್ ಫೌಂಡೇಶನ್‌ನ ಹಿಮಾಲಯನ್ ಗುರುಗಳು ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಪೂಜ್ಯ ಶ್ರೀ ಎಂ. ಅವರು ತಮ್ಮ ಸತ್ಸಂಗಿಗಳ ಶಿಷ್ಯ ಬಳಗಕ್ಕೆ ಇಂತಹ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆಯಾಗಿದ್ದಾರೆ. ಸತ್ಸಂಗ್ ಫೌಂಡೇಶನ್‌ನ ಸಮಾಜಮುಖಿ ಕಾರ್ಯಗಳು ಮಾದರಿಯಾಗಿವೆ ಎಂದು ರಿತಿಕಾ ವರ್ಮಾ ಶ್ಲಾಘಿಸಿದರು.

ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕ ಹಾಗೂ ವಿದ್ಯಾರ್ಥಿಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಶೌಚಾಲಯವಿದೆಯೇ ಹಾಗೂ ಅದನ್ನು ಬಳಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಮುಕ್ತ ಬಹಿರ್ದೆಸೆಗೆ ತೆರಳದೆ ಶೌಚಾಲಯವನ್ನೇ ಬಳಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯವಿದ್ದರೂ ಅದನ್ನು ಬಳಸದೆ ಇರುವುದು ಅನಾರೋಗ್ಯಕ್ಕೆ ಎಡೆಮಾಡಿಕೊಡುತ್ತದೆ. ಉತ್ತಮ ಆರೋಗ್ಯಕ್ಕಾಗಿ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.

ಗಾಣಗಾಪುರ ದೇವಸ್ಥಾನದ ನೋಡಲ್ ಅಧಿಕಾರಿಯಾಗಿರುವ ಐಎಎಸ್ ಪ್ರೊಬೇಷನರಿ ಅಧಿಕಾರಿ ಶಿಖರ್ ಮೊಘಾ ಮಾತನಾಡಿ, ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಕೈಗೊಂಡ ಸ್ವಚ್ಛತಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸುವುದು ಹಾಗೂ ಜೈವಿಕವಾಗಿ ವಿಘಟಿಸಬಹುದಾದ ಉತ್ಪನ್ನಗಳನ್ನು ಬಳಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಸ್ವಚ್ಛತಾ ಶ್ರಮದಾನ ಕಾರ್ಯದಲ್ಲಿ ಸತ್ಸಂಗ್ ಫೌಂಡೇಶನ್‌ನ ಸ್ವಯಂಸೇವಕರು, ಗಾಣಗಾಪುರ ಪಿಡಿಒ ಅನುಸೂಯಾ, ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿ, ಯತಿರಾಜ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.




Tags

GanagapuraKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X