Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸೋಷಿಯಲ್ ಮೀಡಿಯಾದ ಗುಂಗಿನಿಂದ...

ಕಲಬುರಗಿ | ಸೋಷಿಯಲ್ ಮೀಡಿಯಾದ ಗುಂಗಿನಿಂದ ಹೊರ ಬನ್ನಿ: ನಟ ಪ್ರಕಾಶ್‌ ರಾಜ್

ವಾರ್ತಾಭಾರತಿವಾರ್ತಾಭಾರತಿ20 Dec 2025 10:31 PM IST
share
ಕಲಬುರಗಿ | ಸೋಷಿಯಲ್ ಮೀಡಿಯಾದ ಗುಂಗಿನಿಂದ ಹೊರ ಬನ್ನಿ: ನಟ ಪ್ರಕಾಶ್‌ ರಾಜ್
ಗುಲ್ಬರ್ಗಾ ವಿ.ವಿ. ಅಂತರ ಮಹಾವಿದ್ಯಾಲಯ ಯುವಜನೋತ್ಸವಕ್ಕೆ ಚಾಲನೆ

ಕಲಬುರಗಿ: ಇಂದಿನ ಯುವ ಸಮುದಾಯ ಸೋಷಿಯಲ್ ಮೀಡಿಯಾ ಎಂಬ ಗುಂಗಿನಿಂದ ಹೊರಬರಬೇಕಿದೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಯುವ ಸಮುದಾಯಕ್ಕೆ ಕರೆ ನೀಡಿದರು.

ಶನಿವಾರ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ 2025-26ನೇ ಶೈಕ್ಷಣಿಕ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವಕ್ಕೆ ಡೊಳ್ಳು ಬಾರಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಅವರು, ಲೈಕ್, ಡಿಸ್‌ಲೈಕ್ ನಿಂದ ಭವಿಷ್ಯ-ಬದುಕು ಕಟ್ಟಿಕೊಳ್ಳಲಾಗಲ್ಲ. ಕುಟುಂಬಸ್ಥರು, ನೆರ ಹೊರೆಯವರೊಂದಿಗೆ ಬೆರೆಯಿರಿ. ನಾವು ನಾವಾಗಿರೋಣ. ಆ ನಿಟ್ಟಿನಲ್ಲಿ ಸಾಗೋಣ ಎಂದರು.

ಯುವ ಜನೋತ್ಸವ ಕಾರ್ಯಕ್ರಮ ಒಳ್ಳೆಯ ಕವಿ, ನಟ, ಕಲಾವಿದನನ್ನು ಮಾಡಲು ಸಾಧ್ಯವಿಲ್ಲ. ಆದರೆ ಒಬ್ಬ ಪರಿಪಕ್ವತೆಯ ಮನುಷ್ಯನಾಗಿ ಮಾಡಬಹುದುದು. ಸರ್ವಾಂಗೀಣ ಅಭಿವೃದ್ಧಿಗೆ ವ್ಯಕ್ತಿತ್ವ ವಿಕಸನ ತುಂಬಾ ಅವಶ್ಯಕ. ಅದು ಇಂತಹ ಯುವಜನೋತ್ಸವದಲ್ಲಿ ಸರ್ವರೊಂದಿಗೆ ಬೆರೆಯುವಿಕೆಯಿಂದ ಸಿಗುತ್ತದೆ ಎಂಬುದನ್ನು ಮರೆಯದಿರಿ ಎಂದು ಯುವ ಸಮುದಾಯಕ್ಕೆ ಕಿವಿಮಾತು ಹೇಳಿದರು.

ಇಂದು ಸುಳ್ಳಿನ ಮಾರುಕಟ್ಟೆಯ ಪ್ರಪಂಚದಲ್ಲಿ ನಾವಿದ್ದೇವೆ. ಬಡವ-ಶ್ರೀಮಂತನನ್ನು ಕೇವಲ “ಬ್ರಾಂಡ್” ಮೇಲೆ ಅಳೆಯಲಾಗುತ್ತಿದೆ. ಈ ದೇಶವನ್ನು ನೀವು ಮುಂದೆ ನಡೆಸಬೇಕಿದೆ. ಇಂತಹ ಅಂತೆ-ಕಂತೆ ಸುಳ್ಳಿನಿಂದ ಹೊರಬನ್ನಿ. ಇಂದು ರಾಜಕಾರಣ ಧರ್ಮದ ಮೇಲೆ ಸಾಗಿದ್ದು, ಇದು ತುಂಬಾ ಅಪಾಯಕಾರಿ. ದುಡಿಯುವ ವರ್ಗಕ್ಕೆ ಉದ್ಯೋಗಬೇಕು. ಬಸವಣ್ಣ, ಅಂಬೇಡ್ಕರ, ಗಾಂಧಿ ತತ್ವ ಪಾಲಿಸಿ ಸಂವಿಧಾನ ಪಾಲಿಸಿ ಎಂದು ಪ್ರಕಾಶ ರಾಜ್ ಮಾರ್ಮಿಕವಾಗಿ ನುಡಿದರು.

ಯುವಜನೋತ್ಸವನ್ನು ಆನಂದಿಸಿ :

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಅವರು, ಇಂದಿನಿಂದ ಮೂರು ದಿನಗಳ ಕಾಲ ಜ್ಞಾನಗಂಗಾ ಆವರಣದಲ್ಲಿ ಯುವ ಉತ್ಸವದಲ್ಲಿ ವಿದ್ಯಾರ್ಥಿಗಳ ಸ್ಫರ್ಧಾ ಮನೋಭಾವನೆಯಿಂದ ಭಾಗವಹಿಸುವ ಮೂಲಕ ಯುವ ಜನೋತ್ಸವವನ್ನು ಆನಂದಿಸಬೇಕು. ತಮ್ಮಲಿನ ಅಡಗಿರುವ ಪ್ರತಿಭೆ ಹೊರಹಾಕಲು ಇದು ಉತ್ತಮವಾಗಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರಸ್ಪರ ಕಲೆ, ಅಭಿನಯವನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿ ಯುವ ಜನೋತ್ಸವದಲ್ಲಿ ಭಾಗಿಯಾದ ಸ್ಪರ್ಧಾಳುಗಳಿಗೆ ಶುಭ ಕೋರಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಕೆ. ಸಿದ್ದಪ್ಪ, ಮೌಲ್ಯಮಾಪನ ಕುಲಸಚಿವ ಡಾ. ಎನ್. ಜಿ. ಕಣ್ಣೂರ, ವಿತ್ತಾಧಿಕಾರಿ ಜಯಾಂಬಿಕ ಸೇರಿದಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು, ಅತಿಥಿ ಶಿಕ್ಷಕರು, ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿದ್ದರು. ಕುಲಸಚಿವ ಹಾಗೂ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ರಮೇಶ್ ಲಂಡನಕರ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮ ಮುನ್ನ ಜ್ಞಾನಗಂಗಾ ಆವರಣದಲ್ಲಿ ಪ್ರಾಣಿ ಶಾಸ್ತ್ರ ವಿಭಾಗದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.

ಯುವಜನೋತ್ಸವದ ಮೊದಲನೇ ದಿನವಾದ ಶನಿವಾರ ಡಾ.ಬಿ.ಆರ್. ಅಂಬೇಡ್ಕರ್ ಭವನದ ಮುಖ್ಯ ಸಭಾಂಗಣದಲ್ಲಿ ವೃಂದ ಗಾಯನ (ಭಾರತೀಯ), ವೃಂದಗಾಯನ (ಪಾಶ್ಚಿಮಾತ್ಯ.) ಪಾಶ್ಚಿಮಾತ್ಯ ಇನ್ ಸ್ಟ್ರುಮೆಂಟಲ್ ಸೋಲೋ ಹಾಗೂ ಏಕವ್ಯಕ್ತಿ ಸ್ವರಗಾಯನ (ಪಾಶ್ಚಿಮಾತ್ಯ) ಸ್ಪರ್ಧೆಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಭವನದ ಮೊದಲನೇ ಮಹಡಿಯಲ್ಲಿ ಕಾರ್ಟೂನಿಂಗ್ ಮತ್ತು ಕೋಲಾಜ್ ಸ್ಪರ್ಧೆಗಳು ಯಶಸ್ವಿಯಾಗಿ ಜರುಗಿದವು.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X