ಕಲಬುರಗಿ | ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಪುತ್ರ ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕಲಬುರಗಿ: ಇಂಜಿನಿಯರಿಂಗ್ ಪದವೀಧರ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕೃಷ್ಣ ಅಪ್ಪಾರಾವ್ ಮಾಲಿಪಾಟೀಲ್ (25) ಮೃತ ಯುವಕ. ಇವರು ಅಥಣಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಿ.ಎಸ್.ಟಿ ವಿಭಾಗದಲ್ಲಿ ನಿರೀಕ್ಷಕರಾಗಿ (ಸಿಟಿಓ) ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಭಾರತಿ ಮಾಲಿಪಾಟೀಲ್ ಅವರ ಪುತ್ರರಾಗಿದ್ದಾರೆ. ಇಂಜಿನಿಯರಿಂಗ್ ಶಿಕ್ಷಣ ಪೂರೈಸಿದ್ದ ಕೃಷ್ಣ, ಉನ್ನತ ವ್ಯಾಸಂಗಕ್ಕಾಗಿ ‘ಗೇಟ್’ (GATE) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು ಎನ್ನಲಾಗಿದೆ.
ಕೃಷ್ಣ ಕಳೆದ ಕೆಲವು ಸಮಯದಿಂದ ಆನ್‌ಲೈನ್ ಗೇಮಿಂಗ್ ಚಟಕ್ಕೆ ಮುಳುಗಿದ್ದ, ಉತ್ತಮ ವಿದ್ಯಾಭ್ಯಾಸ ಪಡೆದಿದ್ದರೂ ಸೂಕ್ತ ಉದ್ಯೋಗ ಲಭಿಸದೆ ತೀವ್ರವಾಗಿ ಮನನೊಂದಿದ್ದ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




