Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೈಗಾರಿಕೆ, ಸಣ್ಣ ಉದ್ಯಮಗಳ...

ಕಲಬುರಗಿ | ಕೈಗಾರಿಕೆ, ಸಣ್ಣ ಉದ್ಯಮಗಳ ಸ್ಥಾಪನೆಗಳಿಗೆ ಸೌಲಭ್ಯ ಒದಗಿಸಲು ಬದ್ಧ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ15 April 2025 10:00 PM IST
share
Photo of Metting

ಕಲಬುರಗಿ : ಕಲಬುರಗಿಯ ಸಮಗ್ರ ಅಭಿವೃದ್ದಿಗೆ ಸ್ಟೇಕ್ ಹೋಲ್ಡರ್ ಅವರ ಪಾತ್ರ ಪ್ರಮುಖವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ‌ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಳೆದ‌ ಲೋಕಸಭಾ ಚುನಾಚಣೆಯ ಸಂದರ್ಭದಲ್ಲಿ ಎಲ್ಲಾ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಜಿಲ್ಲೆಯಲ್ಲಿ ಕೈಗಾರಿಕೆ ಕೃಷಿ ಹಾಗೂ ಔದ್ಯೋಗಿಕ ಅಭಿವೃದ್ದಿಗಾಗಿ ನೀಲ ನಕ್ಷೆ ತಯಾರಿಸುವುದಾಗಿ ಭರವಸೆ ನೀಡಲಾಗಿತ್ತು ಎಂದ ಸಚಿವರು, ಎಲೆಕ್ಟ್ರಾನಿಕ್ ಮ್ಯಾನುಫಾಕ್ಷರಿಂಗ್ ಘಟಕ ಸ್ಥಾಪನೆ, ಉತ್ಪಾದನಾ‌ಘಟಕಗಳ ಸ್ಥಾಪನೆ, ಕೃಷಿ, ಉದ್ಯೋಗ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಸ್ಥಾಪನೆ,‌ ನಗರ ಸೌಂದರ್ಯೀಕರಣ, ಕ್ರೀಡಾ ಕ್ಷೇತ್ರದ ಅಭಿವೃದ್ದಿ, ವೇರ್ ಹೌಸ್ ಹಾಗೂ ಕೋಲ್ಡ್ ಸ್ಟೋರೆಜ್ ಸ್ಥಾಪನೆ, ಕ್ರೀಡಾಂಗಣಗಳ ಸ್ಥಾಪನೆ ಸೇರಿದಂತೆ ಅಭಿವೃದ್ದಿಗೆ ಮುಂದಿನ ಮೇ ತಿಂಗಳ ಮೊದಲ ವಾರದಲ್ಲಿ ಸಭೆ ನಡೆಸಲಾಗುವುದು, ಆಗ ಅಗತ್ಯವಿರುವ ಪ್ರಮುಖ ಸಲಹೆಗಳನ್ನು ನೀಡುವಂತೆ ಸಚಿವರು ಮನವಿ ಮಾಡಿದರು.

ಕಲಬುರಗಿ ನಗರದ ಖರ್ಗೆ ಪೆಟ್ರೋಲ್ ಪಂಪ್ ಬಳಿ ಫ್ಲೈ ಓವರ್, ಕಲಬುರಗಿ ವಿಮಾನ ನಿಲ್ದಾಣದವರೆಗೆ ನಾಲ್ಕು‌ ಪಥಗಳ ರಸ್ತೆ ನಿರ್ಮಾಣ, ನಗರದ ಹೊರವಲಯದಲ್ಲಿ ಎಪಿಎಂಸಿ ಸ್ಥಾಪನೆಗೆ ನೂರು ಎಕರೆ ಜಮೀನು ಮಂಜೂರು, ಸೂಪರ್ ಮಾರ್ಕೆಟ್ ಬಳಿ ವಾಹನ ದಟ್ಟಣೆ ನಿವಾರಣೆಗಾಗಿ ಬಹುಮಹಡಿ ಪಾರ್ಕಿಂಗ್ ಕಟ್ಟಡ ಸ್ಥಾಪನೆ, ಕಲಬುರಗಿಯಿಂದ ದೇಶದ ಪ್ರಮುಖ ನಗರಗಳಿಗೆ ನೇರ ವಿಮಾನ ಸೇವೆ ಪ್ರಾರಂಭ ಸೇರಿದಂತೆ ಪ್ರಮಖ ಬೇಡಿಕೆಗಳನ್ನು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶರಣು‌ ಪಪ್ಪಾ ಸಚಿವರಿಗೆ ಸಲ್ಲಿಸಿದರು.

ಆಗ ಉತ್ತರಿಸಿದ ಸಚಿವರು ಫ್ಲೈ ಓವರ್ ನಿರ್ಮಾಣಕ್ಕೆ ಈಗಾಗಲೇ ಕ್ರಮವಹಿಸಲಾಗಿದೆ. ಈ ಹಿಂದೆ ನಿರ್ಣಯ ಸಿದ್ದ ಫ್ಲೈಓವರ್ ಸ್ಥಾಪನೆ ಅವೈಜ್ಞಾನಿಕತೆಯಿಂದ ಕೂಡಿದ್ದರಿಂದ ಹೊಸ ಮಾದರಿಯ ಫೈ ಓವರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದರು.

ಗ್ರೇನ್ ಅಂಡ್ ಸೀಡ್ಸ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಅವರು ಮಾತನಾಡಿ, ಕಲಬುರಗಿ ಎಲ್ಲಾ ಉದ್ಯಮಿದಾರರ ಬಗ್ಗೆ ಮಾಹಿತಿ ಒದಗಿಸುವ ಆ್ಯಪ್ ಸ್ಥಾಪನೆಗೆ ಒತ್ತಾಯಿಸಿದರು. ಪಿಪಿಪಿ ಮಾದರಿಯಲ್ಲಿ ಕನಿಷ್ಟ ನಾಲ್ಕು ಯೂನಿಫಾರಂ ಉದ್ಯಮಗಳ ಘಟಕ ಸ್ಥಾಪನೆ ಮಾಡುವಂತೆಯೂ ಕೂಡಾ ಮನವಿ ಮಾಡಿದರು.

ನಗರದ ಎಲ್ಲ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಮೇ ತಿಂಗಳಲ್ಲಿ ಸಭೆ ನಡೆಸುವ ಉದ್ದೇಶ ಹೊಂದಿದ್ದು, ನಿಮ್ಮ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ನಮ್ಮ ಚರ್ಚೆಯ ಮೂಲಕ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿ ಎಂದು ಸಚಿವರು ಪುನರುಚ್ಚರಿಸಿದರು.

ಹೈದರಾಬಾದ್ ಕರ್ನಾಟಕ ಚೆಂಬರ್ಸ್ ಆಪ್ ಕಾಮರ್ಸ್ ಇಂಡಸ್ಟ್ರೀಸ್, ಗ್ರೇನ್ ಅಂಡ್ ಸೀಡ್ಸ್ ಮರ್ಚೆಂಟ್ಸ್ ಅಸೋಸಿಯೇಷನ್, ಕಿರಾಣ ವ್ಯಾಪಾರಿ ಸಂಘ ಕಿರಾಣಾ ಬಜಾರ, ಕಲಬುರಗಿ ಅಗ್ರೋ ಇನ್ ಪುಟ್ ಡೀಲರ್ ಅಸೋಸಿಯೇಷನ್, ಕಪನೂರು ಇಂಡಸ್ಟ್ರಿಯಲ್ ಮ್ಯಾನುಫ್ಯಾಕ್ಷರಿಂಗ್ ಅಸೋಸಿಯೇಷನ್, ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ವೇಲ್ ಫೇರ್ಸ್ ಅಸೋಸಿಯೇಷನ್, ಹೈದರಾಬಾದ್ ಕರ್ನಾಟಕ ಮಷೀನರಿ, ಎಲೆಕ್ಟ್ರೀಕಲ್ ಗೂಡ್ಸ್ ಅಸೋಸಿಯೇಷನ್, ಕ್ಲಾಥ್ ಮರ್ಚೆಂಟ್ಸ್ ಅಸೋಸಿಯೇಷನ್ ಸೇರಿದಂತೆ ಸುಮಾರು 31 ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಪನೂರು ಇಂಡಸ್ಟ್ರೀಯಲ್ ಮ್ಯಾನುಫಾಕ್ಷರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಮುಕ್ಕಾ, ಕ್ರೀಡಾ ಅಸೋಸಿಯೇಷನ್ ಅಧ್ಯಕ್ಷ ಜೈಭೀಮ್ ದರ್ಗಿ ಮಾತನಾಡಿದರು.

ವೇದಿಕೆಯ ಮೇಲೆ ಎಂ ಎಲ್ ಸಿ ಜಗದೇವ ಗುತ್ತೇದಾರ, ಕುಡಾ ಅಧ್ಯಕ್ಷ ಮಹಜರ್ ಅಲಂ‌ಖಾನ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಕಮೀಷನರ್ ಅವಿನಾಶ್ ಶಿಂಧೆ, ಡಾ.ಕಿರಣ್ ದೇಶ ಮುಖ್‌ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X