Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವೇಶ್ವರ ದೇವಸ್ಥಾನ,...

Kalaburagi | ಶರಣಬಸವೇಶ್ವರ ದೇವಸ್ಥಾನ, ದಾಸೋಹ ಮಹಾಮನೆಯ ಸಮಗ್ರ ಮ್ಯಾಪಿಂಗ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Oct 2026 4:43 PM IST
share
Kalaburagi | ಶರಣಬಸವೇಶ್ವರ ದೇವಸ್ಥಾನ, ದಾಸೋಹ ಮಹಾಮನೆಯ ಸಮಗ್ರ ಮ್ಯಾಪಿಂಗ್‌ಗೆ ಚಾಲನೆ

ಕಲಬುರಗಿ: ವಿಶ್ವ ವಾಸ್ತುಶಿಲ್ಪ ದಿನಾಚರಣೆ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯದ ವಾಸ್ತುಶಿಲ್ಪ ವಿಭಾಗದಿಂದ ನಗರದ ಐತಿಹಾಸಿಕ ಶರಣಬಸವೇಶ್ವರ ದೇವಸ್ಥಾನ ಹಾಗೂ ದಾಸೋಹ ಮಹಾಮನೆಯ ಸಮಗ್ರ ನಕ್ಷೆ ರೂಪಿಸುವ (ಮ್ಯಾಪಿಂಗ್) ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಮ್ಯಾಪಿಂಗ್ ಕಾರ್ಯಕ್ಕೆ ಚಾಲನೆ ನೀಡಿದರು.

ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಹಿರಿಯ ಪ್ರಾಧ್ಯಾಪಕ ಹಾಗೂ ಖ್ಯಾತ ವಾಸ್ತುಶಿಲ್ಪಿ ಪ್ರೊ. ಅಜಯ್ ಚಂದ್ರನ್ ಸಿ.ಕೆ. ಸೇರಿದಂತೆ ಹಿರಿಯ ವಾಸ್ತುಶಿಲ್ಪಿಗಳ ಮಾರ್ಗದರ್ಶನದಲ್ಲಿ ವಾಸ್ತುಶಿಲ್ಪ ವಿಭಾಗದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ದೇವಸ್ಥಾನ ಮತ್ತು ಅದರ ಸಮಗ್ರ ಸಂಕೀರ್ಣದ ವಾಸ್ತುಶಿಲ್ಪ, ವಿನ್ಯಾಸ ಹಾಗೂ ಐತಿಹಾಸಿಕ ವಿವರಗಳನ್ನು ದಾಖಲಿಸುವ ಕಾರ್ಯ ಕೈಗೊಂಡಿದ್ದಾರೆ. ಹಿರಿಯ ವಾಸ್ತುಶಿಲ್ಪಿ ಕಲ್ಯಾಣಿ ಅವರೂ ಈ ಕಾರ್ಯಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಶರಣಬಸವೇಶ್ವರ ದೇವಸ್ಥಾನದೊಂದಿಗೆ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲಿ ಮಹತ್ವದ ಸ್ಥಾನ ಹೊಂದಿರುವ ದಾಸೋಹ ಮಹಾಮನೆಯನ್ನೂ ಮ್ಯಾಪಿಂಗ್ ಕಾರ್ಯದಲ್ಲಿ ಸೇರಿಸಲಾಗಿದೆ. 18ನೇ ಶತಮಾನದ ಸಂತ ಶರಣಬಸವೇಶ್ವರರು ಬಡವರು ಹಾಗೂ ಅಗತ್ಯವಿರುವವರಿಗೆ ಉಚಿತವಾಗಿ ಅನ್ನ ನೀಡುವ ‘ದಾಸೋಹ’ವನ್ನು ಜೀವನ ಪದ್ಧತಿಯಾಗಿ ರೂಪಿಸಿದ್ದರು. ಶರಣಬಸವೇಶ್ವರರು ತಮ್ಮ ಜೀವನದ ಬಹುಭಾಗವನ್ನು ಕಲಬುರಗಿಯಲ್ಲೇ ಕಳೆದಿದ್ದು, ಮಹಾಮನೆಯಲ್ಲಿ ವಾಸವಾಗಿದ್ದರು ಎನ್ನಲಾಗುತ್ತದೆ.

ಸುಮಾರು 250 ವರ್ಷಗಳ ಹಿಂದೆ ಶರಣಬಸವೇಶ್ವರರು ಬೆಳಗಿಸಿದ ‘ನಂದಾದೀಪ’ ಇಂದಿಗೂ ಮಹಾಮನೆಯಲ್ಲಿ ನಿರಂತರವಾಗಿ ಬೆಳಗುತ್ತಿರುವುದು ಈ ಸ್ಥಳದ ಐತಿಹಾಸಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.

ಇದೇ ಮಹಾಮನೆಗೆ 1927ರ ಫೆಬ್ರವರಿ 26ರಂದು ಮಹಾತ್ಮ ಗಾಂಧೀಜಿ ಭೇಟಿ ನೀಡಿ, ಸಂಸ್ಥಾನದ 7ನೇ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ದೊಡ್ಡಪ್ಪ ಅಪ್ಪಾಜಿಯವರನ್ನು ಭೇಟಿಯಾಗಿದ್ದರು. ಶರಣಬಸವೇಶ್ವರ ದೇವಸ್ಥಾನದ ಮೇಲೆ ರಜಾಕಾರರು ನಡೆಸಿದ ದಾಳಿಯನ್ನು ಖಂಡಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸುವ ಉದ್ದೇಶದಿಂದ ಗಾಂಧೀಜಿ ಅವರು ಮಹಾಮನೆಗೆ ಭೇಟಿ ನೀಡಿದ್ದರು ಎಂದು ತಿಳಿಸಲಾಯಿತು.

ಐತಿಹಾಸಿಕ ಕಟ್ಟಡಗಳು ಮತ್ತು ಪರಂಪರೆಯ ತಾಣಗಳ ವಾಸ್ತುಶಿಲ್ಪ, ವಿನ್ಯಾಸ ಹಾಗೂ ಸಾಂಸ್ಕೃತಿಕ ಮಹತ್ವವನ್ನು ವೈಜ್ಞಾನಿಕವಾಗಿ ದಾಖಲಿಸುವ ಉದ್ದೇಶದಿಂದ ಕೈಗೊಂಡಿರುವ ಈ ಮ್ಯಾಪಿಂಗ್ ಕಾರ್ಯವು ಮುಂದಿನ ಪೀಳಿಗೆಗೆ ಕಲಬುರಗಿಯ ಶ್ರೀಮಂತ ಪರಂಪರೆಯನ್ನು ಪರಿಚಯಿಸುವಲ್ಲಿ ಮಹತ್ವದ ಹೆಜ್ಜೆಯಾಗಲಿದೆ.

ಈ ಸಂದರ್ಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರೊ. ಅಜಯ್ ಚಂದ್ರನ್, ವಾಸ್ತುಶಿಲ್ಪ ವಿಭಾಗದ ಡೀನ್ ಪ್ರೊ. ವೈಭವಕುಮಾರ ನವಣಿ, ವಿಭಾಗದ ಮುಖ್ಯಸ್ಥೆ ಪ್ರೊ. ಪಲ್ಲವಿ ಪಾಟೀಲ, ಪ್ರೊ. ಗೌತಮ್, ಸಂಯೋಜಕ ಪ್ರೊ. ಸಿದ್ದಲಿಂಗ ಮಂಠಾಳೆ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಬಸವರಾಜ ದೇಶಮುಖ ಅವರು ವಾಸ್ತುಶಿಲ್ಪ ವಿಭಾಗದ ವಿವಿಧ ಚಟುವಟಿಕೆಗಳ ವಿವರಗಳನ್ನು ಒಳಗೊಂಡ ‘ಆರ್ಕಿಟೆಕ್ಚರ್ ಮ್ಯಾಗಜಿನ್ 2025–26’ ಅನ್ನು ಬಿಡುಗಡೆ ಮಾಡಿದರು.

Tags

templeSharanabasaveshwara TempleKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X