Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಂತ ಶ್ರೀ ಸೇವಾಲಾಲ...

Kalaburagi | ಸಂತ ಶ್ರೀ ಸೇವಾಲಾಲ ಮಹಾರಾಜರ ಮೂರ್ತಿ ತೆರವಿಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ21 July 2026 7:55 PM IST
share
Kalaburagi | ಸಂತ ಶ್ರೀ ಸೇವಾಲಾಲ ಮಹಾರಾಜರ ಮೂರ್ತಿ ತೆರವಿಗೆ ಖಂಡನೆ
ಕಳಪೆ ರಸ್ತೆ ಕಾಮಗಾರಿ ತನಿಖೆಗೆ ಆಗ್ರಹ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

ಕಲಬುರಗಿ: ಕಲಬುರಗಿ ತಾಲೂಕಿನ ನಂದೂರ ಗ್ರಾಮದ ಬಾಪು ನಾಯಕ ಹಾಗೂ ಕಾನು ನಾಯಕ ತಾಂಡಾಕ್ಕೆ ಸಂಪರ್ಕಿಸುವ ರಸ್ತೆಯಲ್ಲಿದ್ದ ಬಂಜಾರ ಸಮುದಾಯದ ಆರಾಧ್ಯ ದೈವ ಹಾಗೂ ಕುಲಗುರು ಸಂತ ಶ್ರೀ ಸೇವಾಲಾಲ ಮಹಾರಾಜರ ಮೂರ್ತಿಯನ್ನು ಯಾವುದೇ ಪೂರ್ವ ಸೂಚನೆ ನೀಡದೆ ಜುಲೈ 6ರಂದು ರಾತ್ರಿ ತೆರವುಗೊಳಿಸಿರುವ ಕ್ರಮವನ್ನು ಖಂಡಿಸಿ, ಬಂಜಾರಾ (ಲಂಬಾಣಿ) ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ರಸ್ತೆ ಕಾಮಗಾರಿಯ ಹೆಸರಿನಲ್ಲಿ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಮೂರ್ತಿಯನ್ನು ತೆರವುಗೊಳಿಸಿರುವುದು ಖಂಡನೀಯ. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.

ಶಹಾಬಾದ್ ಮುಖ್ಯ ರಸ್ತೆಯಿಂದ ಬಾಪು ನಾಯಕ ತಾಂಡಾಕ್ಕೆ ಸಂಪರ್ಕಿಸುವ ಸುಮಾರು ಮೂರು ಕಿಲೋಮೀಟರ್ ರಸ್ತೆ ಕಾಮಗಾರಿಗೆ ಸರ್ಕಾರ ಸುಮಾರು 10 ಕೋಟಿ ರೂ. ಅನುದಾನ ನೀಡಿದ್ದರೂ, ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ ಎಂದು ಮುಖಂಡರು ಆರೋಪಿಸಿದರು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸರ್ಕಾರಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಅನುಮಾನವಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಮೂರ್ತಿ ತೆರವುಗೊಳಿಸಿದವರ ವಿರುದ್ಧ ತಕ್ಷಣ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ರಸ್ತೆ ಕಾಮಗಾರಿ ಗುತ್ತಿಗೆದಾರರ ಪರವಾನಗಿಯನ್ನು ರದ್ದುಪಡಿಸಿ ಕಪ್ಪುಪಟ್ಟಿಗೆ ಸೇರಿಸಬೇಕು. ಕಳಪೆ ಕಾಮಗಾರಿ ಕುರಿತು ತನಿಖಾಧಿಕಾರಿಗಳನ್ನು ನೇಮಿಸಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ರಸ್ತೆ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ರಾಷ್ಟ್ರೀಯ ಗೋರ ಬಂಜಾರ ಮಹಾಸಭಾ ಜಿಲ್ಲಾಧ್ಯಕ್ಷ ಸಂತೋಷ ಆಡ, ಲಂಬಾಣಿ–ಕೊರಚ–ಕೊರಮ–ಭೋವಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಪವಾರ, ಶ್ರೀ ಸೇವಾಲಾಲ ಜಯಂತೋತ್ಸವ ಸಮಿತಿ ಅಧ್ಯಕ್ಷ ರಾಜು ಪವಾರ, ಜಿಲ್ಲಾ ಗೌರವಾಧ್ಯಕ್ಷ ಶ್ರೀಮಂತ ಪವಾರ, ಹಣಮಂತ ಪವಾರ (ಉದನೂರ), ತಾಲೂಕು ಅಧ್ಯಕ್ಷ ಆಕಾಶ ರಾಠೋಡ, ಬಿ.ಬಿ. ನಾಯಕ, ಮಹೇಶ ಚವ್ಹಾಣ, ಆನಂದ ಚವ್ಹಾಣ, ಕೃಷ್ಣ ನಾಯಕ, ಶ್ರೀಧರ ಚವ್ಹಾಣ, ಚಂದು ಜಾಧವ, ಸಂತೋಷ ರಾಠೋಡ, ದತ್ತು ಜಾಧವ, ಸುನೀಲ ರಾಠೋಡ, ಅಮಿತ ರಾಠೋಡ, ಲಾಲಪ್ಪ ರಾಠೋಡ, ಯುವರಾಜ ರಾಠೋಡ, ಶಂಕರ ಜಾಧವ ಸೇರಿದಂತೆ ಬಂಜಾರಾ (ಲಂಬಾಣಿ) ಸಮನ್ವಯ ಸಮಿತಿಯ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Tags

KalaburagiSevalal Maharaj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X