Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರದಲ್ಲಿ ನ.16ರಂದು ಆರೆಸ್ಸೆಸ್‌...

ಚಿತ್ತಾಪುರದಲ್ಲಿ ನ.16ರಂದು ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ; ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ13 Nov 2025 3:06 PM IST
share
ಚಿತ್ತಾಪುರದಲ್ಲಿ ನ.16ರಂದು ಆರೆಸ್ಸೆಸ್‌ ಪಥಸಂಚಲನಕ್ಕೆ ಅನುಮತಿ; ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು/ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್‌) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರೆಸ್ಸೆಸ್‌ ಪಥಸಂಚಲನಕ್ಕೆ ಸರ್ಕಾರ ನೀಡಿರುವ ಷರತ್ತುಬದ್ಧ ಅನುಮತಿಯನ್ನು ಪರಿಗಣಿಸಿದ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರೆಸ್ಸೆಸ್‌ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ (ಕಲಬುರಗಿ) ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ನ್ಯಾಯಾಲಯದ ಸಲಹೆಯಂತೆ ಶಾಂತಿ ಸಭೆ ನಡೆಸಿದ ಬಳಿಕ, ಅರ್ಜಿದಾರರಿಗೆ ನವೆಂಬರ್ 16ರಂದು ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ನೀಡಿರುವ ಅನುಮತಿಯನ್ನು ಪರಿಗಣಿಸಿದ ನ್ಯಾಯಪೀಠ, 300 ಆರೆಸ್ಸೆಸ್‌ ಸದಸ್ಯರು ಹಾಗೂ 50 ವಾದ್ಯಗಾರರೊಂದಿಗೆ (ಬ್ಯಾಂಡ್) ಪಥಸಂಚಲನ ನಡೆಸಲು ಅನುಮತಿಸಿತು.

ಸದಸ್ಯರ ಸಂಖ್ಯೆ ಹೆಚ್ಚಳಕ್ಕೆ ಮನವಿ:

ಇದಕ್ಕೂ ಮುನ್ನ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಪಥಸಂಚಲನಕ್ಕೆ ಅನುಮತಿ ನೀಡಿರುವುದಕ್ಕಾಗಿ ಅಧಿಕಾರಿಗಳಿಗೆ ಅರ್ಜಿದಾರರು ಕೃತಜ್ಞರಾಗಿದ್ದಾರೆ. ಅದಾಗ್ಯೂ, ಪಥಸಂಚಲನದಲ್ಲಿ 300 ಸದಸ್ಯರು ಹಾಗೂ 25 ವಾದ್ಯಗಾರರು ಭಾಗವಹಿಸುವಂತೆ ವಿಧಿಸಲಾಗಿರುವ ಷರತ್ತು ಮಾರ್ಪಡಿಸಿ, 600 ಸದಸ್ಯರು ಹಾಗೂ 50 ವಾದ್ಯಗಾರರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪಥಸಂಚಲನ ನಡೆಸಲು ಉದ್ದೇಶಿಸಲಾಗಿರುವ ಸ್ಥಳದ ಹತ್ತಿರದ ಪ್ರದೇಶಗಳಲ್ಲಿ ಅರ್ಜಿದಾರರು ಈ ಹಿಂದೆ ನಡೆಸಿದ್ದ ಸಭೆಗಳಲ್ಲಿ ಭಾಗವಹಿಸಿದವರ ಸಂಖ್ಯೆ ಪರಿಗಣಿಸಿದ ನಂತರವೇ 300 ಸದಸ್ಯರು ಹಾಗೂ 25 ವಾದ್ಯಗಾರರ ಸಂಖ್ಯೆ ನಿಗದಿಪಡಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ವಾದ ಮುಂದುವರಿಸಿದ ಅರುಣ್ ಶ್ಯಾಮ್, ಸಂಘಟನೆಯು 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪಥಸಂಚಲನ ಹಾಗೂ ಸಭೆ ನಡೆಸಲಾಗುತ್ತಿದೆ. ಹತ್ತಿರದ ಜನರ ಭಾವನೆಗಳ ಬಗ್ಗೆ ನಮಗೆ ಕಾಳಜಿ ಇದೆ. 100 ವರ್ಷಗಳ ಆಚರಣೆಯ ವಿಶೇಷ ಸಂದರ್ಭವಾಗಿರುವ ಕಾರಣಕ್ಕಾಗಿಯೇ ಒಂದು ಬಾರಿಯ ಕ್ರಮವಾಗಿ ಈ ಮನವಿ ಮಾಡಲಾಗುತ್ತಿದೆ ಎಂದರಲ್ಲದೆ, ಬ್ಯಾಂಡ್ ಸದಸ್ಯರ ಸಂಖ್ಯೆಯನ್ನು 25ರಿಂದ 50ಕ್ಕೆ ಹೆಚ್ಚಿಸುವಂತೆ ಕೋರಿದರು.

ಅರ್ಜಿದಾರರ ಮನವಿಗೆ ಅಡ್ವೊಕೇಟ್ ಜನರಲ್ ಅವರು ಆಕ್ಷೇಪ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಆದೇಶದಲ್ಲಿ ವಿಧಿಸಲಾದ ಎರಡನೇ ಷರತ್ತನ್ನು ಮಾರ್ಪಡಿಸಿದ ನ್ಯಾಯಪೀಠ, ಬ್ಯಾಂಡ್‌ನಲ್ಲಿರುವ ಸದಸ್ಯರ ಸಂಖ್ಯೆಯನ್ನು 25ರಿಂದ 50ಕ್ಕೆ ಹೆಚ್ಚಿಸಿತು.

ಹೈಕೋರ್ಟ್ ಆದೇಶವೇನು?

ಅರ್ಜಿದಾರರಿಗೆ ನವೆಂಬರ್ 16ರಂದು ಪಥಸಂಚಲನ ನಡೆಸಲು ಷರತ್ತುಬದ್ಧ ಅನುಮತಿ ನೀಡಿ ನವೆಂಬರ್ 12ರಂದು ತಹಶೀಲ್ದಾರ್ ಕಚೇರಿಯಿಂದ ಹೊರಡಿಸಲಾದ ಆದೇಶ ಪ್ರತಿಯನ್ನು ದಾಖಲಿಸಿಕೊಳ್ಳಲಾಗಿದೆ. ಅನುಮತಿ ನೀಡಲು ರಾಜ್ಯ ಸರ್ಕಾರ ಮಾಡಿದ ಪ್ರಯತ್ನವನ್ನು ಶ್ಲಾಘಿಸಿರುವ ಅರ್ಜಿದಾರರ ಪರ ವಕೀಲರು, ಒಂದು ಬಾರಿಯ ಕ್ರಮವಾಗಿ ಪಥಸಂಚಲನದಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಹೆಚ್ಚಿಸುವಂತೆ ಕೋರಿದ್ದಾರೆ. ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಅವರು, ಹಿಂದಿನ ದತ್ತಾಂಶಗಳನ್ನು ಆಧರಿಸಿಯೇ ಸಂಖ್ಯೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿದಾರರ ಪರ ವಕೀಲರು, ಕಡೆಯ ಪಕ್ಷ ಬ್ಯಾಂಡ್ ಸದಸ್ಯರ ಸಂಖ್ಯೆಯನ್ನು 25ರಿಂದ 50 ಮಂದಿಗೆ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಎಜಿ ಸಮ್ಮತಿ ಸೂಚಿಸಿದ್ದಾರೆ. ಈ ಒಂದು ಬದಲಾವಣೆಯ ಹೊರತಾಗಿ ತಹಶೀಲ್ದಾರ್ ಅವರ ಆದೇಶ ಹಾಗೇ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ ಹೈಕೋರ್ಟ್, ನವೆಂಬರ್ 16ರಂದು 300 ಸದಸ್ಯರು ಹಾಗೂ 50 ವಾದ್ಯಗಾರರೊಂದಿಗೆ ಆರೆಸ್ಸೆಸ್‌ ಪಥಸಂಚಲನ ನಡೆಸಲು ಅನುಮತಿ ನೀಡಿ, ಅರ್ಜಿ ಇತ್ಯರ್ಥಪಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X