Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಹಿಂದುಳಿದ ವರ್ಗಗಳ...

Kalaburagi | ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯ: ರಘು ಕೌಟಿಲ್ಯ

ವಾರ್ತಾಭಾರತಿವಾರ್ತಾಭಾರತಿ3 Oct 2026 8:13 PM IST
share
Kalaburagi | ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯ: ರಘು ಕೌಟಿಲ್ಯ

ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯಾವುದೇ ಮಹತ್ವದ ಕಾರ್ಯಕ್ರಮಗಳನ್ನು ರೂಪಿಸಿಲ್ಲ. ಇದರಿಂದ ಹಿಂದುಳಿದ ಸಮುದಾಯಗಳು ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಹಿಂದುಳಿಯುವಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಆರೋಪಿಸಿದರು.

ನಗರದ ಕೆಕೆಸಿಸಿಐ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಭಾಗದಲ್ಲಿ ಹಿಂದುಳಿದ ವರ್ಗಗಳ ಸಂಘಟನೆ ಹಾಗೂ ಬಲವರ್ಧನೆಗಾಗಿ ಪ್ರವಾಸ ಕೈಗೊಳ್ಳಲಾಗುತ್ತಿದೆ. ಕಾಯಕ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ದೇವರಾಜ ಅರಸು ನಿಗಮಕ್ಕೆ 129 ಕೋಟಿ ರೂ., ಲಿಂಗಾಯತ ಹಾಗೂ ಒಕ್ಕಲಿಗ ನಿಗಮಗಳಿಗೆ ತಲಾ 82 ಕೋಟಿ ರೂ., ಮರಾಠ ನಿಗಮಕ್ಕೆ 68 ಕೋಟಿ ರೂ., ವಿಶ್ವಕರ್ಮ ನಿಗಮಕ್ಕೆ 17 ಕೋಟಿ ರೂ., ಅಲೆಮಾರಿ ನಿಗಮಕ್ಕೆ 16 ಕೋಟಿ ರೂ., ಉಪ್ಪಾರ ನಿಗಮಕ್ಕೆ 11 ಕೋಟಿ ರೂ., ಸವಿತಾ ಸಮಾಜಕ್ಕೆ 7 ಕೋಟಿ ರೂ., ಅಂಬಿಗರ ನಿಗಮಕ್ಕೆ 6.50 ಕೋಟಿ ರೂ. ಹಾಗೂ ತಿಗಳ, ಕುಂಬಾರ, ಗಣಿಗ ಮತ್ತು ಕೊಡವ ನಿಗಮಗಳಿಗೆ ತಲಾ 2 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಆದರೆ ಹಡಪದ ಸಮುದಾಯಕ್ಕೆ ಅನುದಾನ ನೀಡಿಲ್ಲ ಎಂದು ಅವರು ಆರೋಪಿಸಿದರು.

ಸಾಮಾಜಿಕ ನ್ಯಾಯ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಬಿಜೆಪಿ ನಿರಂತರವಾಗಿ ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಪರಿಕಲ್ಪನೆಯಡಿ 12ನೇ ಶತಮಾನದ ಕಾಯಕ ಶರಣರ ಶ್ರಮ ಸಂಸ್ಕೃತಿಗೆ ಉತ್ತೇಜನ ನೀಡಲಾಗುತ್ತಿದೆ. ಶ್ರಮಿಕ ವರ್ಗದ ಕೊಡುಗೆಯ ಮೂಲಕ ವಿಕಸಿತ ಭಾರತ ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

ಹಲವು ನಿಗಮಗಳಿಗೆ ಅನುದಾನ ಘೋಷಿಸಿದರೂ, ಅದನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ರಘು ಕೌಟಿಲ್ಯ, ರೈತರು, ಕೃಷಿ ಕಾರ್ಮಿಕರು, ನೇಕಾರರು, ಕುಂಬಾರರು, ಕಂಬಾರರು ಸೇರಿದಂತೆ ವಿವಿಧ ಕಾಯಕ ಸಮುದಾಯಗಳ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಡಾ. ಬಿ.ಜಿ. ಪಾಟೀಲ್, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಚಂದು ಪಾಟೀಲ್ ಹಾಗೂ ಅಶೋಕ್ ಬಗಲಿ, ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ರಾಜ್ಯ ಕಾರ್ಯದರ್ಶಿಗಳಾದ ವೆಂಕಟೇಶ್ ಉಪ್ಪಾರ ಹಾಗೂ ಈರಣ್ಣ ಹಡಪದ, ಒಬಿಸಿ ಮೋರ್ಚಾ ಅಧ್ಯಕ್ಷ ದೇವೀಂದ್ರ ದೇಸಾಯಿ ಕಲ್ಲೂರು, ಶರಣಪ್ಪ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

CongressKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X