ಮಾದಕದ್ರವ್ಯ ಸಾಗಾಟ ಆರೋಪ; ಮಹಾರಾಷ್ಟ್ರದಲ್ಲಿ ಕಲಬುರಗಿ ಕಾಂಗ್ರೆಸ್ ಮುಖಂಡನ ಬಂಧನ

ಕಲಬುರಗಿ: ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧಿತ ಕಾಂಗ್ರೆಸ್ ಮುಖಂಡ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಲಿಂಗರಾಜ ಕಣ್ಣಿ ಸಿಕ್ಕಿ ಬಿದ್ದಿದ್ದಾರೆ ಎನ್ನಲಾಗಿದೆ. ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎನ್ ಡಿ ಪಿ ಎಸ್ ಕಾಯ್ದೆ ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





