ಕಲಬುರಗಿ | ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

ಕಲಬುರಗಿ: ನಗರದಲ್ಲಿರುವ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಆಳಂದ ತಾಲೂಕಿನ ತಂಬಾಕವಾಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ಪಾಟೀಲ್ ಮತ್ತು ಬೋಳಣಿ ಗ್ರಾಮದ ಯುವ ಮುಖಂಡ ರಮೇಶ ಬಿರಾದಾರ ಅವರು ಕಾಂಗ್ರೆಸ್ ತೊರೆದು ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಸಮ್ಮುಖದಲ್ಲಿ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ಮಾಜಿ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಮಾಜಿ ಅಧ್ಯಕ್ಷ ಆನಂದರಾವ್ ಪಾಟೀಲ್, ಜಿಲ್ಲಾ ಮುಖಂಡ ಸಂತೋಷ ಹಾದಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Next Story





