Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿದ್ಯುತ್ ತಂತಿ ಬೇಲಿ...

Kalaburagi | ವಿದ್ಯುತ್ ತಂತಿ ಬೇಲಿ ಹಾಕಿ ವನ್ಯಜೀವಿ ಬೇಟೆಗೆ ಸಂಚು : ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ22 May 2026 4:04 PM IST
share
Kalaburagi | ವಿದ್ಯುತ್ ತಂತಿ ಬೇಲಿ ಹಾಕಿ ವನ್ಯಜೀವಿ ಬೇಟೆಗೆ ಸಂಚು : ಇಬ್ಬರ ಬಂಧನ

ಚಿಂಚೋಳಿ : ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿ ವನ್ಯಜೀವಿಗಳ ಬೇಟೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಹಾಗೂ ಜೆಸ್ಕಾಂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ತಾಲೂಕಿನ ಕುಂಚಾವರಂ ಅರಣ್ಯ ವಲಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಂಗಾಪೂರ ಗ್ರಾಮದ ಮಾಣಿಕ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ಧರ್ಮು ರಾಠೋಡ (30) ಬಂಧಿತರಾಗಿದ್ದಾರೆ.

ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಸಂಗಾಪೂರ ಅರಣ್ಯ ಪ್ರದೇಶದ ಸರ್ವೇ ನಂ. 3ರಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಆರೋಪಿಗಳು ಸುಮಾರು ಎರಡು ಕಿಲೋಮೀಟರ್ ಉದ್ದದ ಜಿಐ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿರುವುದನ್ನು ಪತ್ತೆಹಚ್ಚಿದರು.

ವನ್ಯಜೀವಿಗಳನ್ನು ಬೇಟೆಯಾಡುವ ಉದ್ದೇಶದಿಂದ ಈ ಮಾರಕ ಬಲೆ ನಿರ್ಮಿಸಲಾಗಿತ್ತು ಎಂದು ಕುಂಚಾವರಂ ವಲಯ ಅರಣ್ಯಾಧಿಕಾರಿ ಸಂಜೀವ ಕುಮಾರ ಚವ್ಹಾಣ ತಿಳಿಸಿದ್ದಾರೆ.

ವಿದ್ಯುತ್ ತಂತಿಗೆ ಸಿಲುಕಿ ಒಂದು ಮೊಲ ಹಾಗೂ ಎರಡು ಟಿಟ್ಟಿಭ (ಲ್ಯಾಪ್‌ವಿಂಗ್) ಪಕ್ಷಿಗಳು ಸಾವನ್ನಪ್ಪಿರುವುದು ಸ್ಥಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.

ದಾಳಿ ವೇಳೆ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ ಅಧಿಕಾರಿಗಳು, ಮೃತ ವನ್ಯಜೀವಿಗಳು ಹಾಗೂ ಬೇಟೆಗೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಪ್ರದೇಶಕ್ಕೆ ಅಕ್ರಮ ಪ್ರವೇಶಿಸಿ ವಿದ್ಯುತ್ ಪ್ರವಹಿಸಿ ವನ್ಯಜೀವಿಗಳ ಬೇಟೆಯಾಡುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಗಂಭೀರ ಅಪರಾಧವಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸ್ಥಳ ಮಹಜರು ಪೂರ್ಣಗೊಳಿಸಿದ ಬಳಿಕ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕುಂಚಾವರಂ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗೂ ಜೆಸ್ಕಾಂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಅಧಿಕಾರಿಗಳ ಸಮಯಪ್ರಜ್ಞೆ ಹಾಗೂ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X