Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕನ್ಹೇರಿ ಮಠದ ಕಾಡಸಿದ್ದೇಶ್ವರ...

ಕಲಬುರಗಿ | ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಶಾಶ್ವತ ಗಡಿಪಾರಿಗೆ ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Sept 2026 6:36 PM IST
share
ಕಲಬುರಗಿ | ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಶಾಶ್ವತ ಗಡಿಪಾರಿಗೆ ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ಆಗ್ರಹ

ಕಲಬುರಗಿ: ಬಸವಾದಿ ಶರಣರ ತತ್ವ ಹಾಗೂ ವಚನ ಸಾಹಿತ್ಯವನ್ನು ತಿರುಚಿ ಹಿಂದುತ್ವದೊಂದಿಗೆ ಬೆಸೆಯುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಂಡು ಅವರನ್ನು ಕರ್ನಾಟಕದಿಂದ ಶಾಶ್ವತವಾಗಿ ಗಡಿಪಾರು ಮಾಡಬೇಕು ಎಂದು ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ.

ನಗರದ ಜಗತ್ ವೃತ್ತದ ಸಮೀಪ ಶುಕ್ರವಾರ ಬಸವ ತತ್ವ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬಸವಾದಿ ಶಿವಶರಣರನ್ನು ಹಿಂದುತ್ವದೊಂದಿಗೆ ಸೇರಿಸುವುದನ್ನು ಖಂಡಿಸಿ ನಡೆದ ಪ್ರತಿಭಟನೆ ಹಾಗೂ ಬಹಿರಂಗ ಸಭೆಯಲ್ಲಿ 7 ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಮಿತಿಯ ಪರವಾಗಿ ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು ನಿರ್ಣಯಗಳನ್ನು ಮಂಡಿಸಿದರು. ಬಸವಾದಿ ಶಿವಶರಣರ ಹೆಸರುಗಳನ್ನು ಹಿಂದುತ್ವದೊಂದಿಗೆ ಜೋಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಶರಣರ ಇತಿಹಾಸವನ್ನು ತಿರುಚುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವಚನಗಳ ಮೂಲ ಆಶಯವನ್ನು ತಪ್ಪಾಗಿ ವ್ಯಾಖ್ಯಾನಿಸುವ ಪ್ರಯತ್ನಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

12ನೇ ಶತಮಾನದಲ್ಲಿ ಬಸವಣ್ಣ ಹಾಗೂ ಶಿವಶರಣರು ವೈದಿಕ ಆಚರಣೆಗಳ ವಿರುದ್ಧ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ರಾಂತಿ ನಡೆಸಿದ್ದರು. ಅವರ ತತ್ವಗಳನ್ನು ಉದ್ದೇಶಪೂರ್ವಕವಾಗಿ ವೈದಿಕತೆಯೊಂದಿಗೆ ಬೆಸೆಯುವ ಮೂಲಕ ಶರಣ ಸಿದ್ಧಾಂತವನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಸಭೆಯಲ್ಲಿ ಆರೋಪಿಸಲಾಯಿತು. ಇಂತಹ ಪ್ರಯತ್ನಗಳು ಧಾರ್ಮಿಕ ಸ್ವಾಯತ್ತತೆಗೆ ಧಕ್ಕೆ ಉಂಟುಮಾಡುತ್ತವೆ ಎಂದು ಮುಖಂಡರು ಹೇಳಿದರು.

ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾಗುವ ಯಾವುದೇ ಬೆಳವಣಿಗೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಸರಕಾರವನ್ನು ಒತ್ತಾಯಿಸಲಾಯಿತು. ಇದಲ್ಲದೆ, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ಹಾಗೂ ಬಸವ ತತ್ವಗಳನ್ನು ಸಂರಕ್ಷಿಸಬೇಕು ಎಂದು ಆಗ್ರಹಿಸಲಾಯಿತು.

ಸಭೆಯಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತೂ ಆಕ್ಷೇಪ ವ್ಯಕ್ತವಾಯಿತು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ನಿರ್ಣಯಿಸಿತು. ಚುನಾವಣಾ ಆಯೋಗದ ಸಿಬ್ಬಂದಿಯಲ್ಲಿ ರಾಜಕೀಯ ಸಿದ್ಧಾಂತದ ಪ್ರಭಾವವಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಬೀದರ್‌ನ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ಬಸವ ತತ್ವದ ಕುರಿತು ಭಿನ್ನ ನಿಲುವು ಹೊಂದಿರುವವರ ವಿರುದ್ಧ ಸೈದ್ಧಾಂತಿಕವಾಗಿ ಹೋರಾಟ ನಡೆಸಬೇಕು. ಇದು ವ್ಯಕ್ತಿ ವಿರೋಧದ ಹೋರಾಟವಲ್ಲ, ಸೈದ್ಧಾಂತಿಕ ಹೋರಾಟ ಎಂದು ಹೇಳಿದರು.

ಚಿಂತಕಿ ಮೀನಾಕ್ಷಿ ಬಾಳಿ ಮಾತನಾಡಿ, ಶರಣರ ಹೆಸರುಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಸವ ತತ್ವದ ಅನುಯಾಯಿಗಳಲ್ಲಿ ಕೆಲವರು ವೈದಿಕ ಸಂಸ್ಕೃತಿಯತ್ತ ಒಲವು ತೋರುತ್ತಿದ್ದಾರೆ. ಬಸವ ತತ್ವವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳಬಾರದು. ವಚನ ಸಾಹಿತ್ಯ ವೇದಗಳ ಮುಂದುವರಿದ ಭಾಗ ಎಂಬ ವಾದದ ಕುರಿತು ಮುಕ್ತ ಚರ್ಚೆಗೆ ಸಿದ್ಧವಿರುವುದಾಗಿ ಅವರು ಹೇಳಿದರು.

ರುದ್ರಪ್ಪ ಪಿ.ರಾಯಚೂರು ಮಾತನಾಡಿ, ಬಸವಣ್ಣನವರ ವಿಚಾರಧಾರೆಗೆ ಪರದೆ ಹಾಕುವ ಪ್ರಯತ್ನ ನಡೆಯುತ್ತಿದೆ. ಬಸವ ತತ್ವಕ್ಕೆ ಅಪಚಾರವಾಗುತ್ತಿದೆ ಎಂದು ಕಂಡುಬಂದಲ್ಲಿ ಜನರು ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತಬೇಕು, ಅದರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕು ಎಂದು ಹೇಳಿದರು.

ಶಿವಶರಣಪ್ಪ ಹುಗ್ಗಿ ಪಾಟೀಲ್ ಮಾತನಾಡಿ, ಬಿಜೆಪಿ ನಾಯಕರಾದ ಮುರಳಿ ಮನೋಹರ ಜೋಶಿ, ಲಾಲ್ ಕೃಷ್ಣ ಅಡ್ವಾಣಿ ಹಾಗೂ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಹಲವು ನಾಯಕರು ಮುಸ್ಲಿಂ ಸಮುದಾಯದವರೊಂದಿಗೆ ವಿವಿಧ ರೀತಿಯ ಸಾಮಾಜಿಕ ಹಾಗೂ ರಾಜಕೀಯ ಸಂಬಂಧಗಳನ್ನು ಹೊಂದಿದ್ದ ಉದಾಹರಣೆಗಳಿವೆ. ಆದರೆ, ಇದೇ ರಾಜಕೀಯ ವಲಯದಿಂದ ನಮ್ಮ ಮಧ್ಯೆ ಇದೀಗ ‘ಲವ್ ಜಿಹಾದ್’ ಕುರಿತು ಚರ್ಚೆ ಹುಟ್ಟುಹಾಕಲಾಗುತ್ತಿದೆ ಎಂದು ಆರೋಪಿಸಿದರು..

ಕಾರ್ಯಕ್ರಮದಲ್ಲಿ ಪ್ರಭುತಾಯಿ, ಮರಿಯಪ್ಪ ಹಳ್ಳಿ, ಅರ್ಜುನ್ ಭದ್ರೆ, ಆರ್.ಜಿ. ಶೆಟಕಾರ್, ರವೀಂದ್ರ ಶ್ಯಾಬಾದಿ, ಲಚ್ಚಪ್ಪ ಜಮಾದಾರ್, ಪಿಡ್ಡಪ್ಪ ಜಾಲಗಾರ, ಅಪ್ಪಾರಾವ ಅಕ್ಕೋಣೆ, ಗಣೇಶ್ ಚಿನ್ನಾಕರ್, ಶಿವಲಿಂಗಪ್ಪ ಗೌಳಿ, ಅಶೋಕ್ ಗೂಳಿ, ರವೀಂದ್ರ ಕೊಳಕೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

KalaburagiConstitutionProtection Committee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X