ಕಲಬುರಗಿ | ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ; ಆಂದೋಲಾಶ್ರೀಗೆ ಸಿಐಡಿಯಿಂದ ನೋಟಿಸ್

ಕಲಬುರಗಿ : ಬೀದರ್ ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವ ಅಧ್ಯಕ್ಷರಾದ ಆಂದೋಲಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಸಿಐಡಿ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣದ ಕುರಿತು ಜ.29 ಅಥವಾ ಜ.30 ರಂದು ಒಂದು ದಿನ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನಲ್ಲಿ ಪೊಲೀಸರು ತಿಳಿಸಿದ್ದಾರೆ.
ಸಿಐಡಿ ಪೊಲೀಸರು ಈಗಾಗಲೇ ಆರೋಪಿ ರಾಜು ಕಪನೂರ್ ಸೇರಿದಂತೆ ಇತರ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಚಿನ್ ಬರೆದಿಟ್ಟ ಡೆತ್ ನೋಟ್ ನಲ್ಲಿ ಆಂದೋಲಾಶ್ರೀ, ಚಿತ್ತಾಪುರದ ಮಣಿಕಂಠ ರಾಠೋಡ್, ಶಾಸಕ ಬಸವರಾಜ್ ಮತ್ತಿಮಡು, ಚಂದು ಪಾಟೀಲ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಇದೀಗ ಆಂದೋಲಾಶ್ರೀ ಸ್ವಾಮೀಜಿಯವರನ್ನು ವಿಚಾರಣೆಗೆ ಕರೆದು ಪ್ರಕರಣ ಕುರಿತಾಗಿ ಮತ್ತಷ್ಟು ಮಾಹಿತಿ ಕಲೆ ಹಾಕಲು ಸಿಐಡಿ ಯೋಜಿಸಿದೆ.
Next Story





