Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಮುಸ್ಲಿಂ ಸಮುದಾಯದ ವಿರುದ್ಧ...

ಕಲಬುರಗಿ| ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ : ಶಾಸಕ ಯತ್ನಾಳ್‌ ವಿರುದ್ಧ ಚಿಂಚೋಳಿಯಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 Aug 2025 9:24 PM IST
share
ಕಲಬುರಗಿ| ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ : ಶಾಸಕ ಯತ್ನಾಳ್‌ ವಿರುದ್ಧ ಚಿಂಚೋಳಿಯಲ್ಲಿ ಪ್ರತಿಭಟನೆ

ಕಲಬುರಗಿ: ಮುಸ್ಲಿಂ ಧರ್ಮದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮತ್ತು ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆ ನೀಡುತ್ತಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಅವರನ್ನು ಬಂಧಿಸಿ, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಚಿಂಚೋಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ತಾಲೂಕು ಮುಸ್ಲಿಂ ಅಭಿವೃದ್ಧಿ ಸಮಿತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಪ್ರತಿಯೊಂದು ಧರ್ಮ, ಜಾತಿ, ಮತ, ಪಂಥಗಳನ್ನು ಅವರವರ ಧರ್ಮ ಜಾತಿಗಳಿಗೆ ಅನುಗುಣವಾಗಿ ಸಂವಿಧಾನದ ಅಡಿಯಲ್ಲಿ ಬದುಕಿ ಬಾಳಲು ಅವಕಾಶ ಇದೆ. ಯಾವುದೇ ಧರ್ಮ ಜಾತಿಗೆ ಕಿಳು ಮಾತನಾಡಲು ಅವಕಾಶವಿಲ್ಲ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತಹ ಹೇಳಿಕೆ ನೀಡುವ ಯಾವುದೇ ವ್ಯಕ್ತಿ ಇರಲಿ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೇಶ ಮತ್ತು ರಾಜ್ಯದ ಗ್ರಾಮೀಣ ಭಾಗದ ಜನರು ಜಾತಿ ಭೇದವನ್ನು ಮರೆತು ಅಣ್ಣ ತಮ್ಮಂದಿರಂತೆ, ಅಕ್ಕ ತಂಗಿಯರಂತೆ ಹಿಂದು-ಮುಸ್ಲಿಂ ಧರ್ಮದ ಜನಾಂಗ ಅವರದೇ ಧರ್ಮದ ಆಚರಣೆಗಳನ್ನು ಮೈಗೂಡಿಸಿಕೊಂಡು ಸೌಹಾರ್ದತೆಯಿಂದ ಜೀವನ ಕಟ್ಟಿಕೊಂಡು ಮಕ್ಕಳಿಗೆ ವಿದ್ಯಾಭ್ಯಾಸದ ಶಿಕ್ಷಣ ಕೊಡಿಸುವುದರ ಜೊತೆಗೆ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಆದರೆ ಕೆಲವರು ಹಿಂದು-ಮುಸ್ಲಿಂ ಧರ್ಮಗಳ ಸೌಹಾರ್ದತೆ ಮತ್ತು ಏಕತೆಯಿಂದ ಜೀವನ ನಡೆಸುವುದನ್ನು ಸಹಿಸದೇ ಮತ್ತು ತಮ್ಮ ರಾಜಕೀಯ ಬೇಳೆ ಬೆಳೆಸಿಕೊಳ್ಳಲು ವಿನಃ ಕಾರಣ ಶಾಂತಿ ಕದಡುವಂತಹ ಹೇಳಿಕೆಗಳು ನೀಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ವಿಜಯಪುರದ ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಮುಸ್ಲಿಂ ಧರ್ಮದ ಯುವತಿಯರನ್ನು ಹಿಂದು ಧರ್ಮದ ಯುವಕರು ಮದುವೆ ಮಾಡಿಕೊಂಡು ಬಂದರೆ ಅವರಿಗೆ ನನ್ನ ಕಡೆಯಿಂದ 5 ಲಕ್ಷ (ಐದು ಲಕ್ಷ ರೂಪಾಯಿ) ಗಳು ಉಚಿತವಾಗಿ ಜೋಡಿಗೆ ನೀಡುತ್ತೇನೆಂದು ಹೇಳಿರುವ ಹೇಳಿಕೆಯ ತುಣಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಂತಹ ಹೇಳಿಕೆಗಳು ಸಮಾಜದಲ್ಲಿ ಶಾಂತಿ ಕದಡುವ ಮತ್ತು ಕೊಮು ಗಲಭೆ ಸೃಷ್ಟಿಸುವಂತಹ ಹೇಳಿಕೆಗಳು ಪದೇ ಪದೇ ಮರುಕಳುಹಿಸುತ್ತಿದ್ದು, ಭಾರತ ಸಂವಿಧಾನ ಪರಿಪಾಲನೆ ಮತ್ತು ಶಾಂತಿ ಕಾಪಾಡಲು ಅಂಥವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆ ನಡೆಸಿದ ಬಳಿಕ ಮುಖಂಡರು, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್‌ ಬಾಸೀದ್, ಪುರಸಭೆ ಅಧ್ಯಕ್ಷ ಆನಂದಕಮಾರ ಟೈಗರ್, ಶರಣು ಪಾಟೀಲ ಮೋತಕಪಳ್ಳಿ, ಮತೀನ ಸೌಧಗರ್, ಶಬ್ಬೀರ ಅಹ್ಮದ, ಎಮ್ ಕೆ. ಲಕ್ಷ್ಮಣ, ಅನ್ವರ್ ಖತೀಬ್, ಅಲ್ಲಾವುದ್ದಿನ ಅನ್ಸಾರಿ, ಆರ್.ಗಣಪತಿರಾವ್, ನಾಗೇಶ ಗುಣಾಜಿ , ಹುಸೇನ ಹಶ್ಮಿ, ಸಂತೋಷ ಗುತ್ತೇದಾರ್ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X