Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಐಆರ್ ಸ್ಥಗಿತಗೊಳಿಸಿ,...

Kalaburagi | ಎಸ್‌ಐಆರ್ ಸ್ಥಗಿತಗೊಳಿಸಿ, ಮತದಾರರ ಹಕ್ಕು ಮರುಸ್ಥಾಪಿಸಲು ಸಿಪಿಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ26 Sept 2026 6:02 PM IST
share
Kalaburagi | ಎಸ್‌ಐಆರ್ ಸ್ಥಗಿತಗೊಳಿಸಿ, ಮತದಾರರ ಹಕ್ಕು ಮರುಸ್ಥಾಪಿಸಲು ಸಿಪಿಐ ಆಗ್ರಹ

ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ತಪ್ಪಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಹೇಳಲಾಗುತ್ತಿರುವ ಅರ್ಹ ಮತದಾರರ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದಲ್ಲಿ ಪ್ರತಿಭಟನೆ ನಡೆಸಿದ ಸಿಪಿಐ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಮರುಸ್ಥಾಪಿಸಲು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗದ ಮೂವರು ಆಯುಕ್ತರಲ್ಲಿ ಇಬ್ಬರು ವಿವಿಧ ಸಂದರ್ಭಗಳಲ್ಲಿ ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ, ಮರುಸ್ಥಾಪನೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಕೆಲವು ನಿರ್ಧಾರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಸಿಪಿಐ ಮುಖಂಡರು ಹೇಳಿದರು. ಈ ಬೆಳವಣಿಗೆಗಳು ಚುನಾವಣಾ ಆಯೋಗದ ನಿರ್ಧಾರ ಪ್ರಕ್ರಿಯೆ, ಪಾರದರ್ಶಕತೆ ಹಾಗೂ ಮತದಾರರ ದತ್ತಾಂಶ ನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಅವರು ಆರೋಪಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಬೇಕು. ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ತಪ್ಪಾಗಿ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ಪ್ರಜೆಯ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಅದನ್ನು ಅಪಾರದರ್ಶಕ ಅಥವಾ ಕೇಂದ್ರೀಕೃತ ಪ್ರಕ್ರಿಯೆಗಳ ಮೂಲಕ ನಿರ್ಬಂಧಿಸಬಾರದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ಸ್ವಾತಂತ್ರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಆಯ್ಕೆ ಸಮಿತಿಯ ಮೂಲಕ ಚುನಾವಣಾ ಆಯುಕ್ತರ ನೇಮಕಾತಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಿಪಿಐ ಜಿಲ್ಲಾ ಘಟಕ ಮನವಿಯಲ್ಲಿ ಒತ್ತಾಯಿಸಿದೆ.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಡಾ.ಮಹೇಶಕುಮಾರ ರಾಠೋಡ, ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಜಿಲ್ಲಾ ಖಜಾಂಚಿ ಭೀಮಾಶಂಕರ ಮಾಡಿಯಾಳ, ನಗರ ಕಾರ್ಯದರ್ಶಿ ಸಾಜೀದ್ ಅಹಮದ್, ಮಹಮ್ಮದ್ ಚೌದರಿ, ಮಲ್ಲಿಕಾರ್ಜುನ ಕೆಲ್ಲೂರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

SIRCPIKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X