Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜನಪರ ಬೇಡಿಕೆಗಳ...

Kalaburagi | ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುದ್ರವಾಡಿಯಲ್ಲಿ ಸಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Aug 2026 6:34 PM IST
share
Kalaburagi | ಜನಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುದ್ರವಾಡಿಯಲ್ಲಿ ಸಿಪಿಐ ಪ್ರತಿಭಟನೆ

ಆಳಂದ: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಷ್ಟ್ರೀಯ ಮಂಡಳಿಯ ಕರೆಯ ಮೇರೆಗೆ ಹಮ್ಮಿಕೊಂಡಿರುವ “ರಾಷ್ಟ್ರ ರಾಜಕೀಯ ಬದಲಾವಣೆ ಅಭಿಯಾನ” ಅಂಗವಾಗಿ ಗುರುವಾರ ರುದ್ರವಾಡಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ ವಿವಿಧ ಜನಪರ ಹಾಗೂ ಸ್ಥಳೀಯ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.

ಅಭಿಯಾನದ ಅಂಗವಾಗಿ ಬಂಗರಗಾ ಗ್ರಾಮದಿಂದ ರುದ್ರವಾಡಿವರೆಗೆ ಸುಮಾರು ಮೂರು ಕಿಲೋಮೀಟರ್ ಪಾದಯಾತ್ರೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಗ್ರಾಮದ ಹಿರಿಯ ಮುಖಂಡ ಚಂದ್ರಕಾಂತ ಖೋಬ್ರೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು, ಗುಣಮಟ್ಟದ ಸಾರ್ವತ್ರಿಕ ಆರೋಗ್ಯ ಹಾಗೂ ಶಿಕ್ಷಣ ವ್ಯವಸ್ಥೆ ಒದಗಿಸಬೇಕು, ಮಹಿಳಾ ಮೀಸಲಾತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಭರವಸೆ ನೀಡಬೇಕು. ದಲಿತರು ಹಾಗೂ ಆದಿವಾಸಿಗಳ ಮೇಲಿನ ದೌರ್ಜನ್ಯ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಮತದಾನ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರವ್ಯಾಪಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಗ್ರಾಮ ಪಂಚಾಯಿತಿ ಮಟ್ಟದವರೆಗೆ ಪಾದಯಾತ್ರೆ ನಡೆಸಲಾಗುತ್ತಿದ್ದು, ಸೆಪ್ಟೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖಂಡರು ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಸರ್ಕಾರಿ ಶಾಲೆಗಳಲ್ಲಿನ ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿ, ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ತಕ್ಷಣ ಬಿಡುಗಡೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಪ್ರಭುದೇವ ಯಳಸಂಗಿ, ಜಿಲ್ಲಾ ಮಂಡಳಿ ಖಜಾಂಚಿ ಭೀಮಾಶಂಕರ ಮಾಡಿಯಾಳ, ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ತಾಲೂಕು ಕಾರ್ಯದರ್ಶಿ ಆಸ್ಪಕ್ ಮುಲ್ಲಾ, ಕಿಸಾನ್ ಸಭಾ ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ, ಗೌರವಾಧ್ಯಕ್ಷ ಚಂದ್ರಕಾಂತ ಖೋಬ್ರೆ, ಉಪಾಧ್ಯಕ್ಷ ಮಹಾದೇವ ಪೂಜಾರಿ ಮಂಟಗಿ, ಸಿಪಿಐ ಕಲಬುರಗಿ ನಗರ ಕಾರ್ಯದರ್ಶಿ ಸಾಜೀದ್ ಅಹ್ಮದ್, ಲಕ್ಷ್ಮೀಬಾಯಿ, ಕಾರ್ಮಿಕ ಸಂಘಟನೆಯ ಕಲ್ಯಾಣಿ ತುಕಾಣಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Tags

protestCPIKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X