Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಂಧಿತ ರೈತ ಮುಖಂಡರ...

Kalaburagi | ಬಂಧಿತ ರೈತ ಮುಖಂಡರ ಬಿಡುಗಡೆಗೆ ಸಿಪಿಎಂ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Sept 2026 10:11 PM IST
share
Kalaburagi | ಬಂಧಿತ ರೈತ ಮುಖಂಡರ ಬಿಡುಗಡೆಗೆ ಸಿಪಿಎಂ ಒತ್ತಾಯ

ಕಲಬುರಗಿ: ನೈಸ್‌ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಜಾರಿಗೊಳಿಸಿ, ರೈತರಿಗೆ ಭೂಮಿಯನ್ನು ವಾಪಸ್ ನೀಡಬೇಕು ಹಾಗೂ ನೈಸ್‌ ಸಂಸ್ಥೆಯ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, 2026ರ ಜುಲೈ 29ರಂದು ಕರ್ನಾಟಕ ಹೈಕೋರ್ಟ್ ನೈಸ್‌ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಕುರಿತು ಮಹತ್ವದ ತೀರ್ಪು ನೀಡಿದ್ದು, ಭೂಸ್ವಾಧೀನ, ಪರಿಹಾರ ಪಾವತಿ ಹಾಗೂ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಹಲವು ಅಂಶಗಳ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ಹೇಳಿದರು.

ಹೈಕೋರ್ಟ್ ತೀರ್ಪು ಹೊರಬಂದು ಹಲವು ದಿನಗಳು ಕಳೆದರೂ ರಾಜ್ಯ ಸರ್ಕಾರ ಅದನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ತೀರ್ಪಿನ ಅನುಷ್ಠಾನಕ್ಕೆ ಆಗ್ರಹಿಸಿ ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಬಂಧಿಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಯು. ಬಸವರಾಜ, ಮುಖಂಡರಾದ ಎನ್. ವೆಂಕಟಾಚಲಯ್ಯ, ಶಿವಣ್ಣ, ಚಂದ್ರಣ್ಣ ಹಾಗೂ ಕಾರ್ಮಿಕ ಮುಖಂಡ ಮಹಾಂತೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ನೈಸ್‌ ಯೋಜನೆಗಾಗಿ ವಶಪಡಿಸಿಕೊಂಡಿರುವ ಭೂಮಿಯನ್ನು ರೈತರಿಗೆ ವಾಪಸ್ ನೀಡುವುದು, ಟೋಲ್ ಸಂಗ್ರಹವನ್ನು ನಿಲ್ಲಿಸುವುದು ಹಾಗೂ ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಗೆ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸುಧಾಮ ಧನ್ನಿ, ಭೀಮಶೆಟ್ಟಿ ಯಂಪಳ್ಳಿ, ಲವಿತ್ರ ವಸ್ತ್ರದ್, ಇಮಾಮ್ ನದಾಫ್, ಚಂದಮ್ಮ, ಸುಜಾತಾ ವೈ. ಹಾಗೂ ಸರ್ವೇಶ್ ಮಾವಿನಕರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X