Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಾರ್ಮಿಕ ಸಂಹಿತೆ,...

Kalaburagi | ಕಾರ್ಮಿಕ ಸಂಹಿತೆ, ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಿಪಿಎಂ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 May 2026 8:13 PM IST
share
Kalaburagi | ಕಾರ್ಮಿಕ ಸಂಹಿತೆ, ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಿಪಿಎಂ ಆಕ್ರೋಶ

ಕಲಬುರಗಿ: ಮೇ 10 ಮತ್ತು 11ರಂದು ನವದೆಹಲಿಯಲ್ಲಿ ನಡೆದ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪೊಲಿಟ್‌ ಬ್ಯೂರೋ ಸಭೆಯಲ್ಲಿ ಕೇಂದ್ರ ಸರ್ಕಾರದ ಹಲವು ನೀತಿಗಳ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇರಳದಲ್ಲಿ ಎಲ್‌ಡಿಎಫ್‌ಗೆ ಹಿನ್ನಡೆ ಉಂಟಾಗಿರುವುದನ್ನು ಪೊಲಿಟ್‌ ಬ್ಯೂರೋ ಒಪ್ಪಿಕೊಂಡಿದ್ದು, ಮೊದಲ ಬಾರಿಗೆ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿರುವುದನ್ನು ಗಂಭೀರ ಬೆಳವಣಿಗೆ ಎಂದು ಹೇಳಿದೆ. ಕಾಂಗ್ರೆಸ್‌ನ ಮೃದು ಕೋಮುವಾದಿ ಧೋರಣೆ ಹಾಗೂ ಸಿಪಿಐ(ಎಂ) ವಿರುದ್ಧದ ಸುಳ್ಳು ಪ್ರಚಾರವೇ ಬಿಜೆಪಿಯ ಬೆಳವಣಿಗೆಗೆ ಕಾರಣವಾಗಿದೆ ಎಂದು ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಗೆಲುವು ಹಣದ ದುರುಪಯೋಗ ಮತ್ತು ಕೇಂದ್ರೀಯ ಸಂಸ್ಥೆಗಳ ಹಸ್ತಕ್ಷೇಪದ ಫಲ ಎಂದು ಟೀಕಿಸಿರುವ ಪಕ್ಷ, ಎಸ್‌ಐಆರ್ ಪ್ರಕ್ರಿಯೆಯಿಂದ ಸುಮಾರು 27 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದೆ.

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಪ್ರಧಾನಿ ನೀಡಿರುವ “ಮಿತವ್ಯಯ” ಕರೆಗೆ ವಿರೋಧ ವ್ಯಕ್ತಪಡಿಸಿರುವ ಸಿಪಿಐ(ಎಂ), ಇರಾನ್ ಮೇಲಿನ ದಾಳಿಗಳನ್ನು ಖಂಡಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ರೈತರಿಗೆ ಅಗತ್ಯ ರಸಗೊಬ್ಬರ ಒದಗಿಸದಿದ್ದರೆ ಆಹಾರ ಉತ್ಪಾದನೆ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಸಿದೆ.

ಕಾರ್ಮಿಕ ಸಂಹಿತೆಗಳನ್ನು ಚುನಾವಣೆ ಬಳಿಕ ಜಾರಿಗೆ ತಂದಿರುವುದನ್ನು “ವಂಚಕ ರಾಜಕೀಯ” ಎಂದು ಆರೋಪಿಸಿರುವ ಪಕ್ಷ, ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾದ ನೀತಿಗಳನ್ನು ಸರ್ಕಾರ ಅನುಸರಿಸುತ್ತಿದೆ ಎಂದು ಹೇಳಿದೆ.

ಕ್ಷೇತ್ರ ಮರುವಿಂಗಡಣೆಯೊಂದಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸುವ ಮೂಲಕ ಬಿಜೆಪಿ ಚುನಾವಣಾ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿರುವ ಸಿಪಿಐ(ಎಂ), ಮುಂದಿನ ಚುನಾವಣೆಯಿಂದಲೇ ಮಹಿಳಾ ಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿದೆ.

ಕ್ಯೂಬಾ ವಿರುದ್ಧ ಅಮೆರಿಕದ ನಿರ್ಬಂಧಗಳನ್ನು ಖಂಡಿಸಿರುವ ಪೊಲಿಟ್‌ ಬ್ಯೂರೋ, ಭಾರತದ ವಿದೇಶಾಂಗ ನೀತಿ ಅಮೆರಿಕ ಪರವಾಗಿದೆ ಎಂದು ಟೀಕಿಸಿದೆ.

Tags

protestCPMKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X