Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಹಾಲು, ಮೊಸರು, ಬಸ್...

Kalaburagi | ಹಾಲು, ಮೊಸರು, ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:43 PM IST
share
Kalaburagi | ಹಾಲು, ಮೊಸರು, ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಲಬುರಗಿ: ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಮತ್ತು ಸರ್ಕಾರಿ ಶಾಲಾ-ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಕ್ರಮ ಕೈಬಿಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಜನರು ಕೋಮುವಾದಿ ರಾಜಕಾರಣ ಮತ್ತು ನವ ಉದಾರವಾದಿ ಆರ್ಥಿಕ ನೀತಿಗಳ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆದರೆ ರಾಜ್ಯ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸದೆ ಮೃದು ಹಿಂದುತ್ವದ ಧೋರಣೆ ಹಾಗೂ ನವ ಉದಾರವಾದಿ ನೀತಿಗಳನ್ನು ಮುಂದುವರಿಸುತ್ತಿದೆ. ಇಂತಹ ನೀತಿಗಳು ಜನರನ್ನು ಮತ್ತಷ್ಟು ಬಡತನಕ್ಕೆ ತಳ್ಳುವುದಲ್ಲದೆ, ಕೋಮು ವಿಭಜನೆಗೂ ಅವಕಾಶ ಕಲ್ಪಿಸುತ್ತವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ಸಾಮಾನ್ಯ ಜನರು ದಿನನಿತ್ಯ ಬಳಸುವ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹಾಗೂ ಮೊಸರಿನ ದರವನ್ನು 14 ರೂ. ಹೆಚ್ಚಿಸಿರುವುದು ಗ್ರಾಹಕರಿಗೆ ಹೊರೆಯಾಗಲಿದೆ. ಗ್ರಾಹಕರಿಗೆ ಹೊರೆಯಾಗದಂತೆ ರೈತರಿಗೆ ಹೆಚ್ಚಿನ ಸಬ್ಸಿಡಿ ನೀಡುವ ಮೂಲಕ ಅವರ ಹಿತವನ್ನೂ ಕಾಪಾಡಬಹುದಿತ್ತು. ಬರಗಾಲದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗದಂತೆ ತಡೆಯುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಅಗತ್ಯ ವಸ್ತುಗಳ ಜೊತೆಗೆ ಪ್ರಯಾಣ ದರವನ್ನೂ ಹೆಚ್ಚಿಸಿರುವುದು ಜನವಿರೋಧಿ ಕ್ರಮವಾಗಿದೆ. ಕೂಡಲೇ ಈ ಬೆಲೆ ಏರಿಕೆ ನಿರ್ಧಾರಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಸ್ ಪ್ರಯಾಣ ದರವನ್ನು ಶೇ.23ರಷ್ಟು ಹಾಗೂ ಬಿಎಂಟಿಸಿ ಪ್ರಯಾಣ ದರವನ್ನು ಶೇ.35ರಷ್ಟು ಹೆಚ್ಚಿಸಿರುವುದು ಸಾಮಾನ್ಯ ಜನರಿಗೆ ತೀವ್ರ ಆರ್ಥಿಕ ಹೊರೆಯಾಗಿದೆ. ಬಹುತೇಕ ಜನರು ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸಿದ್ದಾರೆ. ಶಕ್ತಿ ಯೋಜನೆಯನ್ನು ದರ ಏರಿಕೆಗೆ ಸಮರ್ಥನೆಯಾಗಿ ಬಳಸಬಾರದು. ಹೆಚ್ಚಿಸಿರುವ ಪ್ರಯಾಣ ದರವನ್ನು ಕೂಡಲೇ ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಸಾವಿರಾರು ಸರ್ಕಾರಿ ಶಾಲಾ-ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಕ್ರಮ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಲಿದೆ. ಕಳೆದ ಹತ್ತು ವರ್ಷಗಳಲ್ಲಿ ಖಾಸಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.29ರಷ್ಟು ಹೆಚ್ಚಳವಾಗಿದ್ದರೆ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಶೇ.19ಕ್ಕೂ ಹೆಚ್ಚು ಕುಸಿದಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಹಾಲು, ಮೊಸರು ಮತ್ತು ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು. ಸರ್ಕಾರಿ ಶಾಲಾ-ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಕ್ರಮ ಕೈಬಿಟ್ಟು, ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಶಿಕ್ಷಣ ಇಲಾಖೆಯಲ್ಲಿರುವ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ರೈತರಿಗೆ ಹೆಚ್ಚಿನ ಸಬ್ಸಿಡಿ ಒದಗಿಸಿ, ಸರ್ಕಾರದ ಸಂಪನ್ಮೂಲಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಹಿತಕ್ಕಿಂತ ರೈತರು ಮತ್ತು ಸಾಮಾನ್ಯ ಜನರ ಕಲ್ಯಾಣಕ್ಕೆ ಬಳಸಬೇಕು ಎಂದು ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ಭೀಮಶೆಟ್ಟಿ ಯಂಪಳ್ಳಿ, ಸುಧಾಮ ಧನ್ನಿ, ಶ್ರೀಮಂತ ಬಿರಾದಾರ, ಶಾಂತಾ ಘಂಟಿ, ಗುರು ಚಾಂದಕವಠೆ, ಲವಿತ್ರ ವಸ್ತ್ರದ್, ನಾಗಪ್ಪ ರಾಯಚೂರಕರ, ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

ProtestsCPMKalaburagi
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X