Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಿಯುಕೆ ಪ್ರಾಧ್ಯಾಪಕ ಡಾ. ಪಿ....

ಕಲಬುರಗಿ | ಸಿಯುಕೆ ಪ್ರಾಧ್ಯಾಪಕ ಡಾ. ಪಿ. ಕುಮಾರ್ ಮಂಗಲಗೆ ಸ್ಪೇನ್ ಸರಕಾರದ ಪ್ರತಿಷ್ಠಿತ ‘ಹಿಸ್ಪಾನೆಕ್ಸ್’ ಅಂತಾರಾಷ್ಟ್ರೀಯ ಸಂಶೋಧನಾ ಅನುದಾನ

ವಾರ್ತಾಭಾರತಿವಾರ್ತಾಭಾರತಿ3 July 2026 9:24 PM IST
share
ಕಲಬುರಗಿ | ಸಿಯುಕೆ ಪ್ರಾಧ್ಯಾಪಕ ಡಾ. ಪಿ. ಕುಮಾರ್ ಮಂಗಲಗೆ ಸ್ಪೇನ್ ಸರಕಾರದ ಪ್ರತಿಷ್ಠಿತ ‘ಹಿಸ್ಪಾನೆಕ್ಸ್’ ಅಂತಾರಾಷ್ಟ್ರೀಯ ಸಂಶೋಧನಾ ಅನುದಾನ

ಆಳಂದ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ), ಕಡಗಂಚಿ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸ್ಪ್ಯಾನಿಷ್ ಭಾಷೆಯ ಸಹಾಯಕ ಪ್ರಾಧ್ಯಾಪಕ ಡಾ. ಪಿ. ಕುಮಾರ್ ಮಂಗಲ ಅವರಿಗೆ 2026–27ನೇ ಶೈಕ್ಷಣಿಕ ವರ್ಷದ ಸ್ಪೇನ್ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ನೀಡಲಾಗುವ ಪ್ರತಿಷ್ಠಿತ ‘ಹಿಸ್ಪಾನೆಕ್ಸ್’ ಅಂತರರಾಷ್ಟ್ರೀಯ ಸಂಶೋಧನಾ ಅನುದಾನ ಲಭಿಸಿದೆ.

ಸ್ಪ್ಯಾನಿಷ್ ಭಾಷೆ, ಸಾಹಿತ್ಯ ಹಾಗೂ ಹಿಸ್ಪಾನಿಕ್ ಅಧ್ಯಯನಗಳ ಉತ್ತೇಜನಕ್ಕಾಗಿ ನೀಡಲಾಗುವ ಈ ಅನುದಾನವು ಅತ್ಯಂತ ಸ್ಪರ್ಧಾತ್ಮಕ ಸಂಶೋಧನಾ ಯೋಜನೆಗಳಲ್ಲಿ ಒಂದಾಗಿದ್ದು, ಈ ಬಾರಿ ವಿಶ್ವದ ವಿವಿಧ ದೇಶಗಳಿಂದ ಬಂದ ಅನೇಕ ಅರ್ಜಿಗಳ ಪೈಕಿ ಕೇವಲ 15 ಯೋಜನೆಗಳು ಮಾತ್ರ ಆಯ್ಕೆಯಾಗಿವೆ. ಅವುಗಳಲ್ಲಿ ಭಾರತದಿಂದ ಆಯ್ಕೆಯಾದ ಎರಡು ಯೋಜನೆಗಳಲ್ಲಿ ಡಾ. ಕುಮಾರ್ ಮಂಗಲ ಅವರ ಯೋಜನೆಯೂ ಒಂದಾಗಿದೆ ಎಂಬುದು ವಿಶೇಷವಾಗಿದೆ.

ಈ ಸಾಧನೆಯು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ಕ್ಷೇತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹತ್ವದ ಗುರುತನ್ನು ತಂದುಕೊಟ್ಟಿದೆ.

ಡಾ. ಕುಮಾರ್ ಮಂಗಲ ಅವರ ಸಂಶೋಧನಾ ಯೋಜನೆಯು ಕನ್ನಡದ 12ನೇ ಶತಮಾನದ ಶರಣೆ ಅಕ್ಕ ಮಹಾದೇವಿ ಸೇರಿದಂತೆ ವಚನಕಾರರ ಸಾಹಿತ್ಯ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಮಧ್ಯಕಾಲೀನ ಸ್ಪೇನ್‌ನ ಪ್ರಸಿದ್ಧ ಸಂತ–ಕವಯತ್ರಿ ಸಾಂತಾ ತೆರೇಸಾ ಡಿ ಅವಿಲಾ ಅವರ ಸಾಹಿತ್ಯ ಹಾಗೂ ಆಧ್ಯಾತ್ಮಿಕ ವಿಚಾರಗಳೊಂದಿಗೆ ತುಲನಾತ್ಮಕವಾಗಿ ಅಧ್ಯಯನ ಮಾಡುವುದನ್ನು ಒಳಗೊಂಡಿದೆ.

ಈ ಸಂಶೋಧನೆಯು ಭಾರತ ಮತ್ತು ಸ್ಪೇನ್ ದೇಶಗಳ ಸಾಹಿತ್ಯ ಹಾಗೂ ಆಧ್ಯಾತ್ಮಿಕ ಪರಂಪರೆಗಳ ನಡುವೆ ಹೊಸ ಸಾಂಸ್ಕೃತಿಕ ಸಂವಾದವನ್ನು ನಿರ್ಮಿಸುವ ನಿರೀಕ್ಷೆಯಿದ್ದು, ಜಾಗತಿಕ ವಿದ್ವತ್ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಲಿದೆ.

ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್, ಮಾನವಿಕ ಮತ್ತು ಭಾಷಾ ವಿಭಾಗದ ಡೀನ್ ಪ್ರೊ. ವಿಕ್ರಮ್ ವಿಸಾಜಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಮುಖ್ಯಸ್ಥ ಪ್ರೊ. ಬಸವರಾಜ ಪಿ. ಡೋಣೂರ, ಬಸವ ಪೀಠದ ಸಂಯೋಜಕ ಡಾ. ಗಣಪತಿ ಸಿನ್ನೂರ್ ಹಾಗೂ ಬಸವ ಸಮಿತಿಯ ಶ್ರೀ ಅರವಿಂದ್ ಜತ್ತಿ ಸೇರಿದಂತೆ ಹಲವರು ಪ್ರಾಧ್ಯಾಪಕರ ಸಾಧನೆಯನ್ನು ಅಭಿನಂದಿಸಿದ್ದಾರೆ.

Tags

KalaburagiProfessorDr. P. Kumar Mangala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X