Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕನ್ನಡ ನಾಡು-ನುಡಿ,...

Kalaburagi | ಕನ್ನಡ ನಾಡು-ನುಡಿ, ನೆಲ-ಜಲ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ: ಸಂತೋಷಿರಾಣಿ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ23 Aug 2026 7:00 PM IST
share
Kalaburagi | ಕನ್ನಡ ನಾಡು-ನುಡಿ, ನೆಲ-ಜಲ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ: ಸಂತೋಷಿರಾಣಿ ಪಾಟೀಲ

ಕಲಬುರಗಿ: ಕನ್ನಡ ನಾಡು-ನುಡಿ, ನೆಲ-ಜಲವನ್ನು ಪ್ರೀತಿಸುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಬೇಕು. ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಮೂಲಕ ನಮ್ಮ ಸಾಂಸ್ಕೃತಿಕ ಬದುಕನ್ನು ಮತ್ತಷ್ಟು ಶ್ರೀಮಂತಗೊಳಿಸಬಹುದು ಎಂದು ಜಿಲ್ಲಾ ಬಿಜೆಪಿ ಗ್ರಾಮಾಂತರ ಉಪಾಧ್ಯಕ್ಷೆ ಸಂತೋಷಿರಾಣಿ ಪಾಟೀಲ ತೆಲ್ಕೂರ ಹೇಳಿದರು.

ನಗರದ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್, ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ ‘ಕಲಬುರಗಿ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸಾಮಾಜಿಕ ಸಮಸ್ಯೆಗಳಿಗೆ ಸಾಹಿತ್ಯದ ಮೂಲಕ ಪರಿಹಾರದ ಮಾರ್ಗಗಳನ್ನು ಕಂಡುಕೊಳ್ಳಲು ಸಾಧ್ಯವಿದೆ. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ನಮ್ಮ ನೆಲದ ಹಿರಿಮೆಯನ್ನು ಪ್ರತಿಬಿಂಬಿಸುವ ಪ್ರಮುಖ ಅಂಶಗಳಾಗಿವೆ. ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಆಯೋಜಿಸಿರುವ ‘ಕಲಬುರಗಿ ಸಾಹಿತ್ಯ ಸಂಭ್ರಮ’ ಹೊಸ ಸ್ಫೂರ್ತಿ ನೀಡಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿಯ ಬೆಳವಣಿಗೆಯೊಂದಿಗೆ ಹೊಸ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇಂತಹ ಸಾಹಿತ್ಯ ಸಂಭ್ರಮಗಳು ಅಗತ್ಯವಾಗಿವೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಉಳಿವಿನಲ್ಲಿ ಕಲಬುರಗಿ ಜಿಲ್ಲೆಯ ಬರಹಗಾರರ ಕೊಡುಗೆ ಮಹತ್ವದ್ದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಜನಪರ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಾಮಾಜಿಕ ನ್ಯಾಯದ ಆಶಯದೊಂದಿಗೆ ಮುನ್ನಡೆಯುತ್ತಿದೆ ಎಂದರು.

ಸಂಶೋಧಕ ಮುಡುಬಿ ಗುಂಡೇರಾವ ಉಪನ್ಯಾಸ ನೀಡಿ, ಕಲಬುರಗಿ ನೆಲದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕನ್ನಡದ ಕೀರ್ತಿ ಹೆಚ್ಚಿಸಿದ ರಾಷ್ಟ್ರಕೂಟರು ಹಾಗೂ ಚಾಲುಕ್ಯರ ವೈಭವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.

ಕನ್ನಡದ ಪ್ರಥಮ ಕೃತಿ ‘ಕವಿರಾಜಮಾರ್ಗ’ ರಚನೆಯಾದ ಈ ಪುಣ್ಯಭೂಮಿ ಕನ್ನಡಿಗರ ಅಸ್ಮಿತೆಯ ಪ್ರತೀಕವಾಗಿದೆ. ಕಲಬುರಗಿ ನೆಲವು ಕನ್ನಡ ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ್ದು, ಅದರ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಮಂಜುಳಾ ಪಾವಗಡ, ವಿಜಯಪುರದ ಮಕ್ಕಳ ಸಾಹಿತಿ ಪಂಡಿತ್ ಅವಜಿ, ಹಿರಿಯ ಸಾಹಿತಿ ಡಾ. ಸಿದ್ಧಣ್ಣ ಬಾಡಗಿ, ಧನಲಕ್ಷ್ಮೀ, ಶಿವರಾಜ ಅಂಡಗಿ, ಡಾ. ಡಿ. ಪೂಜಾರಿ ಹುಂಡೇಕಲ್, ಭಾಗ್ಯಶ್ರೀ ಬಾಬಣ್ಣ, ನಬಿ ರಸೂಲ್, ಧರ್ಮಣ್ಣ ಎಚ್. ಧನ್ನಿ, ಶರಣರಾಜ ಛಪ್ಪರಬಂದಿ, ಸಿದ್ದಪ್ಪ ತಳ್ಳಳ್ಳಿ ಹಾಗೂ ಸಿದ್ದು ಬಾನರ್ ಸೇರಿದಂತೆ ಹಲವು ಸಾಹಿತಿಗಳು ಮಾತನಾಡಿದರು.

ಇದೇ ಸಂದರ್ಭದಲ್ಲಿ ಲೇಖಕರಾದ ಧನಲಕ್ಷ್ಮೀ ಹಾಗೂ ಶರಣಗೌಡ ಪಾಟೀಲ ಅವರ ‘ಕಣಗಿಲೆ’ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X