Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಾನಪದದಿಂದ ದೇಶದ ಸಂಸ್ಕೃತಿ,...

ಕಲಬುರಗಿ | ಜಾನಪದದಿಂದ ದೇಶದ ಸಂಸ್ಕೃತಿ, ಪರಂಪರೆ ಶ್ರೀಮಂತ : ಎಂ.ಬಿ.ನಿಂಗಪ್ಪ

ವಾರ್ತಾಭಾರತಿವಾರ್ತಾಭಾರತಿ16 Feb 2025 5:49 PM IST
share
Photo of Program

ಕಲಬುರಗಿ : ಜಾನಪದ ದೇಶದ ಮೂಲ ಸಂಸ್ಕೃತಿಯಾಗಿದೆ. ಇದಕ್ಕೆ ಗ್ರಾಮೀಣ ಜನರ ಕೊಡುಗೆ ಅಪಾರವಾಗಿದೆ. ಇದನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕಾಗಿದೆ. ಕಲಾವಿದರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಬಿ.ನಿಂಗಪ್ಪ ಹೇಳಿದರು.

ಇಲ್ಲಿನ ಗೌಡನಹಳ್ಳಿಯ ಶ್ರೀ ಭೋಜಲಿಂಗೇಶ್ವರ ಮಠದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ , ಸೇಡಂ ತಾಲೂಕು ಘಟಕ ಹಾಗೂ ಶ್ರೀ ಭೋಜಲಿಂಗೇಶ್ವರ ಮಠದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 'ಜಾನಪದ ಜಾತ್ರೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ಜನಪದರ ಹಾಡು-ಪಾಡು' ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದ ಡಾ.ಜಗನ್ನಾಥ ಎಲ್.ತರನಳ್ಳಿ, ಹಾಡು,ನೃತ್ಯ, ಸಂಗೀತ,ಸಾಹಿತ್ಯ, ಮೌಲ್ಯಗಳು ಒಳಗೊಂಡ ಜಾನಪದ ದೇಶದ ಜೀವಳವಾಗಿದೆ. ಟಿವಿ, ಎಲೆಕ್ಟ್ರಾನಿಕ್ಸ್ ಮಾಧ್ಯಮಗಳಲ್ಲಿದ ಕಾಲದಲ್ಲಿಯೇ ಇದು ಜನರಿಗೆ ಮನರಂಜನೆ ನೀಡಿದೆ. ಜಾನಪದದಲ್ಲಿನ ಅನೇಕ ನೀತಿ ಕಥೆಗಳು ಹಿರಿಯರು ತಮ್ಮ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದರು.

ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಶರಣಪ್ಪ ಸೈದಾಪುರ ಮಾತನಾಡಿ, ಜಾಗತೀಕರಣದ ಸವಾಲುಗಳಿಗೆ ಜಾನಪದ ಮಾತ್ರ ಸವಾಲೊಡ್ಡಬಲ್ಲದು ಎಂದರು.

ಸಂಶೋಧಕ-ಸಾಹಿತಿ ಮಡುಬಿ ಗುಂಡೇರಾವ ಮಾತನಾಡಿ, ಜನಪದ ಉಳಿಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾಗಬೇಕು. ಮತ್ತೆ ಪುನಃ ಜಾನಪದ ಸಂಸ್ಕೃತಿಗೆ ಮೊರೆಹೋಗುವುದು ಇಂದಿನ ಅಗತ್ಯವಾಗಿದೆ ಎಂದು ನುಡಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಪೂಜ್ಯ ಪ್ರಕಾಶ ತಾತಾ ವಹಿಸಿದ್ದರು. ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ.ಪಾಟೀಲ್, ಸೇಡಂ ತಾಲೂಕು ಕಜಾಪ ಅಧ್ಯಕ್ಷ ಶಿವರಾವ ಭೋವಿ, ಕಾರ್ಯದರ್ಶಿ ಶಿವರೆಡ್ಡಿ ಗೌಡನಳ್ಳಿ, ಪ್ರಮುಖರಾದ ಡಾ.ಸಾಬಣ್ಣ ಭೋವಿ, ರಾಘವೇಂದ್ರ ರೆಡ್ಡಿ,ಬಾಬು ಶೆಟ್ಟಿ, ಶರಣು ಮಡಿವಾಳ, ಅಶೋಕ ದೊಡ್ಡಮನಿ, ಅವಿನಾಶ ಭೋವಿ, ಉಮೇಶ ದೊಡ್ಡಮನಿ, ಶರಣಪ್ಪ ಕೋಡ್ಲಾ ಹಾಗೂ ಗ್ರಾಮಸ್ಥರು, ಭಕ್ತಾದಿಗಳು, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳಿಂದ ಆಕರ್ಷಕ ಜಾನಪದ ನೃತ್ಯ ಜರುಗಿತು. ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X