Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆರೆಸ್ಸೆಸ್ ನಿಷೇಧಿಸಲು...

ಕಲಬುರಗಿ | ಆರೆಸ್ಸೆಸ್ ನಿಷೇಧಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Oct 2025 8:47 PM IST
share
ಕಲಬುರಗಿ | ಆರೆಸ್ಸೆಸ್ ನಿಷೇಧಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ಕಲಬುರಗಿ: ಭಾರತದ ಏಳಿಗೆಗಾಗಿ ದೇಶದ ಪ್ರಜಾ ಪ್ರಭುತ್ವವನ್ನು ಉಳಿಸಲು ಈ ದೇಶದಲ್ಲಿ ಕೋಮುವಾದದ ವಿಷ ಬೀಜ ಬಿತ್ತುವ ಆರೆಸ್ಸೆಸ್ ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧಿಸುವುದರ ಮುಖಾಂತರ ಭಾರತದಲ್ಲಿ ಪ್ರಜಾ ಪ್ರಭುತ್ವವನ್ನು ಉಳಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ತಾಲೂಕು ಘಟಕ ಆಗ್ರಹಿಸಿದೆ.

ಜೇವರ್ಗಿ ಪಟ್ಟಣದ ಮಿನಿ ವಿಧಾನ ಸೌಧ ಆವರಣದಲ್ಲಿ ಪ್ರತಿಭಟನೆಕಾರರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮುಖಾಂತರ ಜೀವ ಬೆದರಿಕೆ ಹಾಕುತ್ತಿರುವ ಕಿಡಿಗೇಡಿಗಳನ್ನು ಬಂಧಿಸಬೇಕು, ಆರೆಸ್ಸೆಸ್ ನಿಷೇಧಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ತಾಲೂಕು ಆಡಳಿತದ ವತಿಯಿಂದ ಮನವಿ ಸಲ್ಲಿಸಿ ಆಗ್ರಹಿಸಿದರು.

ಈ ದೇಶದಲ್ಲಿ ಬುದ್ಧರ, ಬಸವಣ್ಣನವರ, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಿದ್ದಾಂತಗಳ ಮೇಲೆ ಬದುಕುತ್ತಿರುವ ಹಾಗೂ ಜಾತಿ ರಹಿತ, ವರ್ಗ ರಹಿತ, ಶೋಷಣೆ ರಹಿತ, ಸಮಾಜ ಕಟ್ಟುವಲ್ಲಿ ಅತ್ಯಂತ ಪ್ರಭಾವಿ ನಾಯಕರಾದ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆಯವರನ್ನ ದೂರವಾಣಿ ಮುಖಾಂತರ ಜೀವ ಬೆದರಿಕೆ ಹಾಕಿದ ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕು. ದೇಶದಲ್ಲಿ ಯುವ ಸಮುದಾಯದ ಹಾದಿಯನ್ನು ತಪ್ಪಿಸಿ ಈ ದೇಶದಲ್ಲಿ ಕೋಮುಗಲಬೆಯನ್ನು ಸೃಷ್ಟಿಸುವ ಕಾರ್ಯವನ್ನು ಮಾಡುತ್ತಿರುವ ಆರೆಸ್ಸೆಸ್ ಗೆ ಸರಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ನೀಡಬಾರದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸದ ಮುಖಂಡರುಗಳಾದ ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ಶ್ರೀಹರಿ ಕರಕಳ್ಳಿ, ಸಿದ್ರಾಮ ಕಟ್ಟಿ, ವಿಶ್ವರಾಧ್ಯ ಗಂವ್ಹಾರ, ದವಲಪ್ಪ ಮದನ್, ರವಿ ಕುಳಗೇರಿ, ಸಿದ್ದು ಕೇರೂರ, ಮಾಪಣ್ಣ ಕಟ್ಟಿ, ಮಲ್ಲಿಕಾರ್ಜುನ ಕಟ್ಟಿ, ಮಹೇಶ ಕೋಕಿಲೆ, ಶಿವಶರಣ ಮಾರಡಗಿ, ಗುಂಡಪ್ಪ ಜಡಗಿ, ಶಿವಶರಣಪ್ಪ ಮಂದೆವಾಲ, ಪರಮಾನಂದ ಯಲಗೋಡ, ಯಶವಂತ ಬಡಿಗೇರ, ಶ್ರೀಮಂತ ಕಿಲ್ಲೆದಾರ, ಭಾಗಣ್ಣ ಸಿದ್ನಾಳ, ಗುರುಲಿಂಗಪ್ಪ ಗುಡೂರ, ಶರಣಬಸಪ್ಪ ರೇವನೂರ, ಸಿದ್ದು ಶರ್ಮಾ, ಭೀಮರಾಐ ಬಳಬಟ್ಟಿ, ವಿಶ್ವರಾಧ್ಯ ಗೋಪಾಲ್ಕರ್, ಭಾಗಣ್ಣ ಕಟ್ಟಿ, ಸುಭಾಷ ಕುಮ್ಮನಶಿರಸಗಿ, ಮರೆಪ್ಪ ಜನಿವಾರ, ಅಬ್ದುಲ್ ಗನಿ, ಸಮಾಜದ ಹಿರಿಯರಾದ ಚಂದ್ರಶೇಖರ ಹರನಾಳ, ಶಾಂತಪ್ಪ ಕುಡಲಗಿ, ಶಾಂತಪ್ಪ ಯಲಗೋಡ, ಪುಂಡಲಿಕ ಗಾಯಕ್ವಾಡ, ಮಲ್ಲಮ್ಮ ಕೊಬ್ಬಿನ್, ಭೆಣ್ಣೆಪ್ಪ ಕೊಂಬಿನ್, ರಾಜಶೇಖರ ಶೀಲ್ಪಿ, ಪ್ರಭಾಕರ್ ಸಾಗರ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X