Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದಾಸ ಸಾಹಿತ್ಯ ಇಂದಿನ...

Kalaburagi | ದಾಸ ಸಾಹಿತ್ಯ ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕ: ಡಾ.ಸುರೇಶ ಜಾಧವ

ವಾರ್ತಾಭಾರತಿವಾರ್ತಾಭಾರತಿ6 Aug 2026 6:21 PM IST
share
Kalaburagi | ದಾಸ ಸಾಹಿತ್ಯ ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕ: ಡಾ.ಸುರೇಶ ಜಾಧವ

ಕಲಬುರಗಿ : ದಾಸ ಸಾಹಿತ್ಯವು ಅಂತರಾತ್ಮವನ್ನು ಶುದ್ಧಿಗೊಳಿಸಿ ಮೋಕ್ಷದತ್ತ ಕೊಂಡೊಯ್ಯುವ ಆಧ್ಯಾತ್ಮಿಕ ಸಾಹಿತ್ಯವಾಗಿದ್ದು, ಅದರ ನಿಜವಾದ ಸಾರ ಮತ್ತು ಸಂದೇಶ ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿದೆ ಎಂದು ಕಲಬುರಗಿ ವಿಭಾಗದ 4ನೇ ದಾಸ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನಾಧ್ಯಕ್ಷ ಡಾ. ಸುರೇಶ ಎಲ್. ಜಾಧವ ಹೇಳಿದರು.

ನಗರದ ಕನ್ನಡ ಭವನದಲ್ಲಿ ಆಗಸ್ಟ್ 9ರಂದು ನಡೆಯಲಿರುವ 4ನೇ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೀಡಲಾದ ಅಧಿಕೃತ ಆಹ್ವಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.

ದಾಸ ಸಾಹಿತ್ಯವು ಧ್ಯಾನ, ತಪಸ್ಸು ಹಾಗೂ ಜೀವನ ಪರಿಶುದ್ಧತೆಯ ಸಂದೇಶ ಸಾರುವ ಶ್ರೇಷ್ಠ ಆಧ್ಯಾತ್ಮಿಕ ಪರಂಪರೆಯಾಗಿದ್ದು, ಅನೇಕ ದಾಸರು ತಮ್ಮ ಕೀರ್ತನೆಗಳು ಮತ್ತು ಪದಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿ, ಮಾನವೀಯ ಮೌಲ್ಯಗಳು ಹಾಗೂ ಸದಾಚಾರದ ಬದುಕಿಗೆ ಪ್ರೇರಣೆ ನೀಡಿದ್ದಾರೆ. ಇಂತಹ ಸಾಹಿತ್ಯದ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ದಾಸ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಾತ್ಯತೀತ ಮೌಲ್ಯಗಳನ್ನು ಅಳವಡಿಸಿಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಎಲ್ಲರನ್ನು ಒಳಗೊಂಡ ಸಂಘಟನೆಯಾಗಿ ರೂಪಿಸುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕಾರ್ಯವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ದಾಸ ಸಾಹಿತ್ಯವು ಯಾವುದೇ ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಅದು ಸಮಾನತೆ, ಮಾನವೀಯತೆ, ಭಕ್ತಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಸಾರುವ ಜನಪರ ಸಾಹಿತ್ಯವಾಗಿದೆ. ಕನಕದಾಸ, ಪುರಂದರದಾಸ ಸೇರಿದಂತೆ ಹರಿದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಶಾಶ್ವತ ಮೌಲ್ಯಗಳನ್ನು ನೀಡಿದ್ದಾರೆ. ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯದ ಸಾರವನ್ನು ಇಂದಿನ ಸಮಾಜಕ್ಕೆ ತಲುಪಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ನಿರಂತರವಾಗಿ ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ರಮೇಶ ಚಿಚಕೋಟೆ, ಜಿಲ್ಲಾ ಕಸಾಪ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ಸುರೇಖಾ ಎಸ್. ಜಾಧವ, ಕಸಾಪ ದಕ್ಷಿಣ ವಲಯ ಅಧ್ಯಕ್ಷ ರವಿಕುಮಾರ ಶಹಾಪೂರಕರ್, ರೇವಣಸಿದ್ದಪ್ಪ ಬೋಗಶೆಟ್ಟಿ, ಹಣಮಂತರಾವ ನಾಗಶೆಟ್ಟಿ ಪಾಟೀಲ, ಶರಣಗೌಡ ಮಾಲಿಪಾಟೀಲ, ಶಿವಶರಣಪ್ಪ ಬಿರಾದಾರ, ಡಾ. ಲಿಂಗರಾಜ ಸಿರಗಾಪೂರ, ಡಾ. ಶೋಭಾದೇವಿ ಚೆಕ್ಕಿ, ಸೋಮಶೇಖರಯ್ಯ ಹೊಸಮಠ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ಮಲ್ಲಿನಾಥ ಸಂಗಶೆಟ್ಟಿ, ಗಂಗಾಧರ ಬಂಗರಗಿ, ಹಣಮಂತರಾವ ಪೆಂಚನಪಳ್ಳಿ, ಅನೀಲಕುಮಾರ ಪಾಟೀಲ ತೇಗಲತಿಪ್ಪಿ, ಡಾ. ಶಿವಲಿಂಗಪ್ಪ ಪಾಟೀಲ, ಮಧುಸೂಧನ ಚಿಂತನಪಳ್ಳಿ, ಸಂಗಪ್ಪ ಭೀಮಳ್ಳಿ, ಚಂದ್ರಕಾಂತ ಸೂರನ್, ಅಮೃತಪ್ಪ ಅಣೂರ, ಸೋಮಶೇಖರ ನಂದಿಧ್ವಜ, ಮಹಾಲಿಂಗಯ್ಯ ಸ್ವಾಮಿ, ರಾಜಶೇಖರ ಚಿಂಚೋಳಿ, ಪರಮಾನಂದ ಸರಸಂಬಿ, ಮಂಜುನಾಥ ಕಂಬಾಳಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

SocietyKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X