Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಉಜನಿ ಜಲಾಶಯದಿಂದ 42,000 ಕ್ಯೂಸೆಕ್ ನೀರು...

ಉಜನಿ ಜಲಾಶಯದಿಂದ 42,000 ಕ್ಯೂಸೆಕ್ ನೀರು ಭೀಮಾ ನದಿಗೆ: ಸೊನ್ನ,ಬೆಣ್ಣೆತೋರಾ ಬ್ಯಾರೇಜ್ ಪಾತ್ರದಲ್ಲಿ ನದಿ ದಂಡೆಗೆ ಹೋಗದಂತೆ ಸಾರ್ವಜನಿಕರಲ್ಲಿ ಡಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ27 July 2025 7:44 PM IST
share
ಉಜನಿ ಜಲಾಶಯದಿಂದ 42,000 ಕ್ಯೂಸೆಕ್ ನೀರು ಭೀಮಾ ನದಿಗೆ: ಸೊನ್ನ,ಬೆಣ್ಣೆತೋರಾ ಬ್ಯಾರೇಜ್ ಪಾತ್ರದಲ್ಲಿ ನದಿ ದಂಡೆಗೆ ಹೋಗದಂತೆ ಸಾರ್ವಜನಿಕರಲ್ಲಿ ಡಿಸಿ ಮನವಿ

ಕಲಬುರಗಿ: ಮಹಾರಾಷ್ಟ್ರ ರಾಜ್ಯದ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 42 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜಿಗೆ ರವಿವಾರ ಸಂಜೆಯೆ ತಲುಪಲಿದೆ. ಇನ್ನು ಉಜ್ಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ನೀರು ಬಂದಲ್ಲಿ ಸೊನ್ನ ಬ್ಯಾರೇಜ್ ಮೂಲಕ ಭೀಮಾ ನದಿಗೆ ಹಾಗೂ ಬೆಣ್ಣೆತೋರಾ ಜಲಾಶಯದ ಮೂಲಕ ಕೆಳ ಪಾತ್ರದ ನದಿಗೆ ನೀರು ಬಿಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನದಿ ದಂಡೆ ಕಡೆ ಹೋಗದಂತೆ ಮತ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಸೊನ್ನ ಬ್ಯಾರೇಜ್‌ನಿಂದ ಈಗಾಗಲೆ 4,000 ಕ್ಯುಸೆಕ್ ನೀರು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ಮಳೆಯ ಮುನ್ಸೂಚನೆ ಇರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾದಂತೆ ಹೊರ ಹರಿವು ಹೆಚ್ಚಲಿದೆ. ಸೊನ್ನ ಮತ್ತು ಬೆಣ್ಣೆತೋರಾ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಕೋರಲಾಗಿದೆ.

ನದಿ, ಹಳ್ಳ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸಬಾರದು. ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ-ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೊ-ಸೆಲ್ಫಿಗಳನ್ನು ತೆಗೆದು ಅಪಾಯಕ್ಕೆ ಸಿಲುಕಬಾರದು. ಪ್ರವಾಹ ಸಂದರ್ಭದಲ್ಲಿ ಮೀನುಗಾರರಿಗೆ ಮೀನು ಹಿಡಿಯಲು ನದಿಯ ಕಡೆ ಹೋಗಬಾರದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

ನಿರಂತರ ಮಳೆಯಿಂದ ಅಪಾಯವಿರುವ ಮನೆ ಗೋಡೆ, ಶಾಲೆ, ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಕುಸಿಯುವ ಸಾಧ್ಯತೆ ಇರುವದರಿಂದ ಅಧಿಕಾರಿಗಳು ಸಾರ್ವಜನಿಕರ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮಗಳನು ತೆಗದುಕೊಳ್ಳಬೇಕು. ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನದಿ, ಹಳ್ಳ, ಕೆರೆ ದಡದಲ್ಲಿರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಗಳಲ್ಲಿ ಪೂಜೆ ಸಲ್ಲಿಸುವವರನ್ನು ಮನವೊಲಿಸಿ ನದಿ ದಡಕ್ಕೆ ತೆರಳದಂತೆ ಸಾರ್ವಜನಿಕರ ಮನವೊಲಿಸಬೇಕು. ಇನ್ನು ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಝಿಯಾ ತರನ್ನುಮ್ ಸೂಚಿಸಿದ್ದಾರೆ.

ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಲು ಸೂಚನೆ:

ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಮತ್ತು ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆಗಳನ್ನು ತೆಗದುಕೊಳ್ಳಬೇಕು. ಸಂಭವನೀಯ ಪ್ರವಾಹ ಎದುರಾದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳನ್ನು ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಡಿ.ಸಿ. ಸೂಚನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X