Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ʼಪ್ರಜಾ ಸೇವೆʼ ಸಭೆಯ ಅಂತಿಮ‌ ಸಿದ್ದತೆ...

ʼಪ್ರಜಾ ಸೇವೆʼ ಸಭೆಯ ಅಂತಿಮ‌ ಸಿದ್ದತೆ ವೀಕ್ಷಿಸಿದ ಕಲಬುರಗಿ ಡಿಸಿ ಇಕ್ರಮ್ ಶರೀಫ್

ವಾರ್ತಾಭಾರತಿವಾರ್ತಾಭಾರತಿ4 Sept 2026 5:37 PM IST
share
ʼಪ್ರಜಾ ಸೇವೆʼ ಸಭೆಯ ಅಂತಿಮ‌ ಸಿದ್ದತೆ ವೀಕ್ಷಿಸಿದ ಕಲಬುರಗಿ ಡಿಸಿ ಇಕ್ರಮ್ ಶರೀಫ್

ಕಲಬುರಗಿ: ರಾಜ್ಯದ ಜನತೆಯ ಕುಂದುಕೊರತೆಗಳನ್ನು ಮತ್ತು ಅಹವಾಲುಗಳನ್ನು ಆಲಿಸಿ ಸ್ಥಳದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ "ಪ್ರಜಾ ಸೇವೆ" ಆಂದೋಲನಾ ಸಭೆ ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅದ್ಯಕ್ಷತೆಯಲ್ಲಿ ಶನಿವಾರ ನಡೆಯಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಕಮಲಾಪೂರ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ಅಂತಿಮ ಸಿದ್ದತಾ ಕಾರ್ಯ ವೀಕ್ಷಿಸಿದರು.

ಜೆಸ್ಕಾಂ ಅಧ್ಯಕ್ಷ‌ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್,‌ ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಒ ರಾಹುಲ್ ಸಂಕನೂರು ಅವರೊಂದಿಗೆ ವೇದಿಕೆ ಕಾರ್ಯಕ್ರಮ‌ ಸ್ಥಳ, ಪಾರ್ಕಿಂಗ್, ಊಟದ ಸ್ಥಳ ವೀಕ್ಷಿಸಿದ ಅವರು ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರುವಂತೆ ಈಗಾಗಲೆ ವಿವಿಧ ಸಮಿತಿಗಳನ್ನು ರಚಿಸಿದ್ದು, ಆಯಾ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯಂತೆ ಎಲ್ಲಾ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಅಲ್ಲಿಯೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾದಿಕಾರಿಗಳು, ತಾಲೂಕಿನ ವಿವಿದಡೆಯಿಂದ ಆಗಮಿಸುವ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು,‌ ಊಟ, ಮೊಬೈಲ್ ಟಾಯಲೆಟ್ ವ್ಯವಸ್ಥೆ ಮಾಡಬೇಕು. ಅಸನದ ವ್ಯವಸ್ಥೆ, ಶಾಮಿಯಾನ ಹಾಕಬೇಕು. ಗಣ್ಯರ, ಅಧಿಕಾರಿಗಳ, ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಪೊಲೀಸ್ ಭದ್ರತೆ ಕಲ್ಪಿಸಬೇಕು. ಕಾರ್ಯಕ್ರಮಕ್ಕೆ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕೆಂದರಲ್ಲದೆ‌ ಮುಂಜಾಗ್ರತವಾಗಿ ಅಂಬುಲೆನ್ಸ್ ವಾಹನ, ಅಗ್ನಿಶಾಮಕ ವಾಹನ ಸ್ಥಳದಲ್ಲಿ ತೈನಾತಿಸಬೇಕೆಂದು ಡಿ.ಸಿ. ಸೂಚಿಸಿದರು.

ಇನ್ನು ಸಾರ್ವಜನಿಕರ ಊಟಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಜನಸಂಖ್ಯೆ ಅನುಗುಣವಾಗಿ ಕೌಂಟರ್ ಸ್ಥಾಪಿಸಬೇಕು. ಕಾಲೇಜು ಆವರಣ ಸಂಪೂರ್ಣ ಸ್ವಚ್ಛತೆ ಕಾಯ್ದುಕೊಳ್ಳಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.

ಪಂಚಾಯತಿವಾರು ಸ್ಟಾಲ್‌ ಸ್ಥಾಪಿಸಿ:

ತಾಲೂಕಿನ 19 ಗ್ರಾಮ ಪಂಚಾಯತಿವಾರು ಕೌಂಟರ್ ಸ್ಥಾಪಿಸಬೇಕು. ಇದಲ್ಲದೆ ಪ್ರಮುಖವಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ, ಪಟ್ಟಣ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಲೀಡ್ ಬ್ಯಾಂಕ್,‌ ಎಸ್.ಐ.ಆರ್., ವಿಬಿ-ಜಿ-ರಾಮ್ ಜಿ, ಭಾರತ ಜೋಡೊ ಯುವ ಸಂಘ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ, ಆಹಾರ, ಜೆಸ್ಕಾಂ, ಯುವ ನಿಧಿ, ಸಹಕಾರ ಸೇರಿದಂತೆ ಹೀಗೆ 20 ಪ್ರಮುಖ ಇಲಾಖೆಗಳು ಸಹ ಸ್ಟಾಲ್ ಹಾಕಿ ಇಲಾಖೆ ಯೋಜನೆಗಳ ಕುರಿತು ಅರಿವು ಮೂಡಿಸುವ‌ ಕೆಲಸ ಮಾಡಬೇಕು. ಸಹಾಯವಾಣಿ ಸ್ಟಾಲ್ ಸಹ ಸ್ಥಾಪಿಸುವುದು. ಇನ್ನು ಪ್ರತಿ ಸ್ಟಾಲ್ ನಲ್ಲಿ ಕಂಪ್ಯೂಟರ್ ಅಪರೇಟರ್, ಸಿಬ್ಬಂದಿ ನಿಯೋಜಿಸಬೇಕು. ಇಂಟರನೆಟ್, ವಿದ್ಯುತ್ ವ್ಯವಸ್ಥೆ ಇರುವಂತೆಯೂ ನೋಡಿಕೊಳ್ಳಬೇಕೆಂದರು.

ಪ್ರಜಾ ಸೇವೆ ಸಭೆಯಲ್ಲಿ ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ದೂರು, ಅರ್ಜಿ ತೆಗೆದುಕೊಂಡು ಸಚಿವರ ಮುಂದೆ ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಮಲಾಪುರ ತಾಲೂಕಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಯಲ್ಲಿ ಹಾಜರಿರಬೇಕು.‌ ಸಚಿವರು ಏನೇ ಪ್ರಶ್ನೆ ಕೇಳಿದರೆ ಸ್ಥಳದಲ್ಲಿಯೆ ಉತ್ತರ ನೀಡಬೇಕು. ಉತ್ತರ ನೀಡಲು ತಡಬಡಾಯಿಸಿ ಸರ್ಕಾರಕ್ಕೆ ಮುಜುಗರವಾಗುವಂತೆ ನಡೆದುಕೊಂಡಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಡಿ.ಸಿ. ಎಚ್ಚರಿಕೆ ನೀಡಿದರು.

ಈ‌ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ, ಕಮಲಾಪೂರ ತಹಶೀಲ್ದಾರ ಮೊಹಮ್ಮದ ಮೋಹಸೀನ್, ತಾಲೂಕಾ‌ ಪಂಚಾಯತ್ ಇ.ಓ. ರಮೇಶ ಪಾಟೀಲ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅನೇಕ ಅಧಿಕಾರಿಗಳು ಮತ್ತು ಕಾರ್ಯಕ್ರಮಕ್ಕೆ ನಿಯೋಜಿಸಿದ ಅಧಿಕಾರಿಗಳಿದ್ದರು.

Tags

KalaburagiPraja Seva
share
ವಾರ್ತಾಭಾರತಿ
ವಾರ್ತಾಭಾರತಿ
Next Story
X