Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜುಲೈ ಅಂತ್ಯದೊಳಗೆ ತಂಬಾಕು...

Kalaburagi | ಜುಲೈ ಅಂತ್ಯದೊಳಗೆ ತಂಬಾಕು ಮುಕ್ತ ಗ್ರಾಮ ಘೋಷಿಸಿ : ರಾಯಪ್ಪ ಹುಣಸಗಿ

ವಾರ್ತಾಭಾರತಿವಾರ್ತಾಭಾರತಿ21 May 2026 6:40 PM IST
share
Kalaburagi | ಜುಲೈ ಅಂತ್ಯದೊಳಗೆ ತಂಬಾಕು ಮುಕ್ತ ಗ್ರಾಮ ಘೋಷಿಸಿ : ರಾಯಪ್ಪ ಹುಣಸಗಿ
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆ

ಕಲಬುರಗಿ : ತಂಬಾಕು ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ಒಂದು ಗ್ರಾಮವನ್ನಾದರೂ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.

ಜೂನ್ ಅಂತ್ಯದೊಳಗೆ ಜಿಲ್ಲೆಯ 261 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚಿಸಿ, ಗ್ರಾಮಸಭೆಗಳಲ್ಲಿ ತಂಬಾಕು ಮುಕ್ತ ಗ್ರಾಮ ಕುರಿತು ಚರ್ಚಿಸಬೇಕು ಎಂದು ಸೂಚಿಸಿದರು.

ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಗ್ರಾಮ ಮಟ್ಟದಲ್ಲಿ ಜನಜಾಗೃತಿ ಮೂಡಿಸಬೇಕು. ತಂಬಾಕು ಸೇವನೆ ಮಾಡದ ಸ್ಥಳೀಯ ಪ್ರಮುಖ ವ್ಯಕ್ತಿಗಳು ಅಥವಾ ಧಾರ್ಮಿಕ ಮುಖಂಡರನ್ನು ರಾಯಭಾರಿಗಳಾಗಿ ಆಯ್ಕೆ ಮಾಡಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲೆಯ 3,883 ಶಾಲೆಗಳ ಪೈಕಿ 927 ಶಾಲೆಗಳು ಹಾಗೂ 285 ಪದವಿ ಪೂರ್ವ ಕಾಲೇಜುಗಳ ಪೈಕಿ 79 ಕಾಲೇಜುಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳೆಂದು ಘೋಷಿಸಲ್ಪಟ್ಟಿವೆ. ಉಳಿದ ಶಾಲಾ-ಕಾಲೇಜುಗಳನ್ನೂ ಜೂನ್ 25ರೊಳಗೆ ತಂಬಾಕು ಮುಕ್ತ ಪ್ರದೇಶಗಳೆಂದು ಘೋಷಿಸಿ ವರದಿ ಸಲ್ಲಿಸುವಂತೆ ಡಿಡಿಪಿಐ ಹಾಗೂ ಡಿಡಿಪಿಯು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003ರ ಪ್ರಕಾರ ಶಾಲೆ ಮತ್ತು ಕಾಲೇಜುಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ತಿಳಿಸಿದರು.

ಲೈಸೆನ್ಸ್ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವುದು ನಿಯಮಬಾಹಿರವಾಗಿದ್ದು, ಮಾರಾಟಗಾರರಿಗೆ ಲೈಸೆನ್ಸ್ ನೀಡುವ ಜೊತೆಗೆ ನಿಯಮಗಳ ಕುರಿತು ಅರಿವು ಮೂಡಿಸಬೇಕು ಎಂದರು. ತಂಬಾಕು ಉತ್ಪನ್ನಗಳನ್ನು ಆಹಾರ ಪದಾರ್ಥಗಳೊಂದಿಗೆ ಇರಿಸಬಾರದು. ಕೋಟ್ಪಾ ಕಾಯ್ದೆ-2003 ಉಲ್ಲಂಘಿಸಿದ ಅಂಗಡಿಗಳ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜೂನ್ 2ರಂದು ವಿಶ್ವ ತಂಬಾಕು ದಿನಾಚರಣೆ :

ಜೂನ್ 2ರಂದು ವಿಶ್ವ ತಂಬಾಕು ದಿನಾಚರಣೆ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಅಂಗವಾಗಿ ಚಿತ್ರಕಲಾ ಸ್ಪರ್ಧೆ, ಜಾಗೃತಿ ಜಾಥಾ, ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಂದ ಮೈಮ್ ಸ್ಕಿಟ್ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಮುಂದೆ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸುವವರಿಗೆ ಕನಿಷ್ಠ 1,000 ರೂ. ದಂಡ ವಿಧಿಸಬೇಕು ಹಾಗೂ ಜೂನ್ 4ರಂದು ಜಿಲ್ಲೆಯಾದ್ಯಂತ ವಿಶೇಷ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಭಾಗೀಯ ತಂಬಾಕು ನಿಯಂತ್ರಣ ಕೋಶದ ಸಂಯೋಜಕ ಮಹಾಂತೇಶ್ ಉಳ್ಳಾಗಡ್ಡಿ ಹಾಗೂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಜಾತಾ ಪಾಟೀಲ ಅವರು ಕೋಟ್ಪಾ ಕಾಯ್ದೆ ಜಾರಿಯ ಪ್ರಗತಿ, ದಾಳಿ, ದಂಡ ಹಾಗೂ ತಂಬಾಕು ಮುಕ್ತ ಗ್ರಾಮಗಳ ನಿರ್ಮಾಣ ಕುರಿತು ಮಾಹಿತಿ ನೀಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ಕೆ ಅಪರ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಡಿ.ಎಚ್.ಓ. ಡಾ.ಶರಣಸಬಪ್ಪ ಕ್ಯಾತನಾಳ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ರಾಕೇಶ್ ಕಾಂಬ್ಳೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್, ಕಲಬುರಗಿ ಟಿ.ಎಚ್.ಓ ಡಾ. ಮಾರುತಿ ಕಾಂಬ್ಳೆ, ಅಫಜಲಪೂರ ಟಿ.ಎಚ್.ಓ ಡಾ ಚೇತನ್ ದುಮಾಲೆ, ಸೋಶಿಯಲ್ ವರ್ಕರ್ ಆರತಿ ಧನಶ್ರೀ, ಜಿಲ್ಲಾ ಸೈಕ್ಯಾಟ್ರಿಕ್ ಕೌನ್ಸಿಲರ್ ಮಂಜುನಾಥ ಕಂಬಾಳಿಮಠ, ಡಿ.ಇ.ಓ. ರವಿಕುಮಾರ್ ಪೂಜಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

Tags

tobaccoKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X