Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಗೃಹ ಬಳಕೆಯ ಎಲ್‌ಪಿಜಿ...

Kalaburagi | ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಶೇ.50ರಷ್ಟು ಸಹಾಯಧನ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Jun 2026 4:20 PM IST
share
Kalaburagi | ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಶೇ.50ರಷ್ಟು ಸಹಾಯಧನ ನೀಡಲು ಆಗ್ರಹ

ಕಲಬುರಗಿ: ಗೃಹ ಬಳಕೆಯ ಎಲ್‌ಪಿಜಿ (LPG) ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಶೇ.50ರಷ್ಟು ಸಹಾಯಧನ ನೀಡುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಲಬುರಗಿ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನರು, ವಿಶೇಷವಾಗಿ ಬಡವರು, ಕಾರ್ಮಿಕ ವರ್ಗ ಹಾಗೂ ಮಧ್ಯಮ ವರ್ಗದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಇದರ ಪರಿಣಾಮವಾಗಿ ಗೃಹ ಬಳಕೆಯ LPG ಸಿಲಿಂಡರ್‌ಗಳ ಬೆಲೆ ಹೆಚ್ಚಳವಾಗಿದ್ದು, ಜನಸಾಮಾನ್ಯರ ಕೈಗೆಟುಕದಂತಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಶೇಖರ್ ಸಿಂಗ್ ಕಳವಳ ವ್ಯಕ್ತಪಡಿಸಿದರು.

ಅಡುಗೆ ಅನಿಲವು ಪ್ರತಿಯೊಂದು ಕುಟುಂಬದ ಅವಿಭಾಜ್ಯ ಅಗತ್ಯ ವಸ್ತುವಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ LPG ಸಿಲಿಂಡರ್‌ಗಳಿಗೆ ಒಟ್ಟು ಶೇ.50ರಷ್ಟು ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.

ಈ ಸಹಾಯಧನದಲ್ಲಿ ಕೇಂದ್ರ ಸರ್ಕಾರ ಶೇ.40 ಹಾಗೂ ರಾಜ್ಯ ಸರ್ಕಾರ ಶೇ.10ರಷ್ಟು ಪಾಲನ್ನು ಭರಿಸುವಂತೆ ಯೋಜನೆ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇಂತಹ ಯೋಜನೆ ಜಾರಿಗೆ ಬಂದರೆ ದೇಶ ಹಾಗೂ ರಾಜ್ಯದ ಕೋಟ್ಯಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗಲಿದ್ದು, ಮಹಿಳೆಯರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುವುದರೊಂದಿಗೆ ಕುಟುಂಬಗಳ ಜೀವನಮಟ್ಟ ಸುಧಾರಣೆಯಾಗಲಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯಪಟ್ಟರು.

ಜನಹಿತದ ದೃಷ್ಟಿಯಿಂದ ಸರ್ಕಾರವು ಈ ಯೋಜನೆಯನ್ನು ತ್ವರಿತವಾಗಿ ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಒತ್ತಾಯಿಸಿದರು.

ರಾಜ್ಯ ಕಾರ್ಯದರ್ಶಿ ಶೇಖರ್ ಸಿಂಗ್ ನೇತೃತ್ವದಲ್ಲಿ ಬಂಡು ಪಟನಾಯಕ, ಶಿವಮೂರ್ತಿ ಮಠಪತಿ, ಆನಂದರಾಯ ಬಿಳಗುಂದಿ, ಮಲ್ಲಿನಾಥ ಹಳ್ಳನಕರ್, ಅನೀಲ ಚವ್ಹಾಣ್, ಬಸವರಾಜ ಸಿಂಧೆ, ಶರಣಗೌಡ ಹಾಗೂ ಮೋನಪ್ಪ ನೂಲಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

LPG cylinderKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X