Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನದಾಫ್–ಪಿಂಜಾರ...

Kalaburagi | ನದಾಫ್–ಪಿಂಜಾರ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ವಿತರಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Sept 2026 8:20 PM IST
share
Kalaburagi | ನದಾಫ್–ಪಿಂಜಾರ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ವಿತರಿಸಲು ಒತ್ತಾಯ

ಕಲಬುರಗಿ, ಸೆ.20: ಕರ್ನಾಟಕ ರಾಜ್ಯದಲ್ಲಿ ಜಾರಿಯಲ್ಲಿರುವ ನಿಯಮಗಳಂತೆ ನದಾಫ್/ಪಿಂಜಾರ ಜನಾಂಗದ ಅರ್ಹ ಅಭ್ಯರ್ಥಿಗಳಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಆಳಂದ ತಾಲೂಕು ಘಟಕ ಆಗ್ರಹಿಸಿದೆ.

ಆಳಂದ ತಾಲೂಕಿನ ಮುನ್ನೊಳಿ ಗ್ರಾಮದಲ್ಲಿ ನಡೆದ ಪ್ರಜಾಸೇವೆ ಅಭಿಯಾನದ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ನದಾಫ್/ಪಿಂಜಾರ ಜನಾಂಗದ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ನೀಡುವ ವೇಳೆ ವರ್ಗಾವಣೆ ಪ್ರಮಾಣಪತ್ರದಲ್ಲಿರುವ ಜಾತಿ ವಿವರಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಲಾಗಿದೆ. ಕೆಲವು ಅಭ್ಯರ್ಥಿಗಳ ವರ್ಗಾವಣೆ ಪ್ರಮಾಣಪತ್ರದಲ್ಲಿ ಜಾತಿ ಕಾಲಂನಲ್ಲಿ ಮುಸ್ಲಿಂ ಎಂದು ಹಾಗೂ ಉಪಜಾತಿ ಕಾಲಂನಲ್ಲಿ ನದಾಫ್/ಪಿಂಜಾರ ಎಂದು ನಮೂದಿಸದಿರುವ ಕಾರಣದಿಂದ ಪ್ರಮಾಣಪತ್ರ ಪಡೆಯಲು ತೊಂದರೆ ಉಂಟಾಗುತ್ತಿದೆ ಎಂದು ತಿಳಿಸಲಾಗಿದೆ.

ಇಂತಹ ಪ್ರಕರಣಗಳಲ್ಲಿ ಕೇವಲ ದಾಖಲೆಯಲ್ಲಿನ ನಮೂದಿನ ಆಧಾರದ ಮೇಲೆ ಅರ್ಜಿಗಳನ್ನು ತಿರಸ್ಕರಿಸದೆ, ಅಭ್ಯರ್ಥಿಗಳ ಕುಟುಂಬದ ವಂಶಾವಳಿ ಹಾಗೂ ಜಾತಿಗೆ ಸಂಬಂಧಿಸಿದ ಸ್ಥಳೀಯ ದಾಖಲೆಗಳನ್ನು ಪರಿಶೀಲಿಸಿ ವಾಸ್ತವಾಂಶವನ್ನು ದೃಢಪಡಿಸಿಕೊಂಡು ಜಾತಿ ಮತ್ತು ಆದಾಯ ಪ್ರಮಾಣಪತ್ರ ವಿತರಿಸುವಂತೆ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಂಘ ಮನವಿ ಮಾಡಿದೆ.

ಅರ್ಹ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಪ್ರಮಾಣಪತ್ರ ದೊರೆಯುವಂತೆ ಆಡಳಿತಾತ್ಮಕ ಕ್ರಮ ಕೈಗೊಂಡು, ಪ್ರಮಾಣಪತ್ರ ಪಡೆಯುವ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ಅನಗತ್ಯ ತೊಂದರೆಗಳನ್ನು ನಿವಾರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ತಾಲೂಕು ಅಧ್ಯಕ್ಷ ಫತ್ರುಸಾಬ ನದಾಫ್, ಮೈನೋದ್ದಿನ ನದಾಫ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X