Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಸ್‌ಸಿಎಸ್‌ಪಿ-ಟಿಎಸ್‌ಪಿ...

Kalaburagi | ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Sept 2026 8:35 PM IST
share
Kalaburagi | ಎಸ್‌ಸಿಎಸ್‌ಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಇಲಾಖಾವಾರು ಕ್ರಿಯಾ ಯೋಜನೆಗಳ ಅನುಷ್ಠಾನ ಹಾಗೂ ಅನುದಾನದ ಸಮರ್ಪಕ ಬಳಕೆಗೆ ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಜಿಲ್ಲಾ ಮಟ್ಟದ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಗದಿತ ಅವಧಿಯೊಳಗೆ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಅನುದಾನ ಬಳಕೆಯಾಗದೆ ಮುಂದಿನ ತ್ರೈಮಾಸಿಕಕ್ಕೆ ಬಾಕಿ ಉಳಿಯದಂತೆ ಎಚ್ಚರಿಕೆ ವಹಿಸಬೇಕು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ಅನುದಾನದ ಬಳಕೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಯೋಜನೆಯಡಿ (ಎಸ್‌ಸಿಎಸ್‌ಪಿ/ಟಿಎಸ್‌ಪಿ) ಜಿಲ್ಲಾ ಹಾಗೂ ರಾಜ್ಯ ವಲಯಗಳಿಗೆ ಹಂಚಿಕೆಯಾಗಿರುವ ಅನುದಾನ ಮತ್ತು ಅದರ ಬಳಕೆಯ ಕುರಿತು ಸುದೀರ್ಘವಾಗಿ ಪರಿಶೀಲಿಸಲಾಯಿತು.

ಒಟ್ಟು 9,794.41 ಲಕ್ಷ ರೂ. ಅನುದಾನ ಹಂಚಿಕೆಯಾಗಿದ್ದು, ರಾಜ್ಯ ವಲಯಕ್ಕೆ 8,051.17 ಲಕ್ಷ ರೂ. ಹಾಗೂ ಜಿಲ್ಲಾ ವಲಯಕ್ಕೆ 1,743.24 ಲಕ್ಷ ರೂ. ಹಂಚಿಕೆ ಮಾಡಲಾಗಿದೆ. ಬಿಡುಗಡೆಯಾದ 11,922.13 ಲಕ್ಷ ರೂ. ಮೊತ್ತದಲ್ಲಿ 10,709.43 ಲಕ್ಷ ರೂ. ಅನುದಾನ ಬಳಕೆಯಾಗಿರುವ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಪ್ರತಿ ಇಲಾಖೆಯ ಅಧಿಕಾರಿಗಳು ತಮ್ಮ ಕ್ರಿಯಾ ಯೋಜನೆಗಳಿಗೆ ಸಂಬಂಧಿಸಿದಂತೆ ಅಗತ್ಯ ಅನುಮೋದನೆಗಳನ್ನು ಪಡೆದುಕೊಂಡಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ನಿಗದಿತ ಸಮಯದೊಳಗೆ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿ, ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ರೇಷ್ಮೆ ಹಾಗೂ ಮೀನುಗಾರಿಕೆ ಇಲಾಖೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮತ್ತು ಅನುದಾನ ಬಳಕೆಯ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಮುಂದಿನ ಸಭೆಯೊಳಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸಬೇಕು. ಜೊತೆಗೆ ಅನುದಾನ ಬಳಕೆಯಲ್ಲಿಯೂ ನಿರೀಕ್ಷಿತ ಪ್ರಗತಿ ಸಾಧಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರಾಮೀಣ ಕೈಗಾರಿಕೆಗಳು, ಸಣ್ಣ ನೀರಾವರಿ, ವೈದ್ಯಕೀಯ ಶಿಕ್ಷಣ, ಶಾಲಾ ಅನುದಾನ, ವಾಹನ ಸೌಲಭ್ಯ ಯೋಜನೆಗಳು, ವಿದ್ಯಾ ವಿಕಾಸ ಯೋಜನೆ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅನ್ನಭಾಗ್ಯ ಯೋಜನೆಯ ಅನುಷ್ಠಾನ ಮತ್ತು ಸದುಪಯೋಗದ ಬಗ್ಗೆಯೂ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಅನುಮೋದನೆಗೊಂಡ ಯೋಜನೆಗಳ ಅನುಷ್ಠಾನ ಹಾಗೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು. ಬ್ಯಾಂಕ್‌ಗಳ ಮೂಲಕ ಫಲಾನುಭವಿಗಳಿಗೆ ಅಗತ್ಯ ಅನುದಾನ ನೇರವಾಗಿ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಇಲಾಖೆಗಳ ನಡುವೆ ಸಮನ್ವಯದ ಕೊರತೆ ಕಂಡುಬಂದಲ್ಲಿ ಸಹಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಎಚ್ಚರಿಸಿದರು. ಪ್ರತಿಯೊಂದು ಇಲಾಖೆಯ ಪ್ರಗತಿಯೂ ಮತ್ತೊಂದು ಇಲಾಖೆಯ ಕಾರ್ಯಚಟುವಟಿಕೆಗೆ ಪೂರಕವಾಗಿರಬೇಕು. ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ್, ಡಿಯುಡಿಸಿ ಜಿಲ್ಲಾ ಯೋಜನಾ ನಿರ್ದೇಶಕ ಮುನ್ನಾವರ್ ದೌಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಧುಮತಿ, ಯೋಜನಾ ನಿರ್ದೇಶಕ ಜಗದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ್ ರಾಠೋಡ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಬೇಬಿಮುಗೇರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X