ಕಲಬುರಗಿ | ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿಯಾಗಿ ದಾಖಲೆ : ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮಹಾಂತೇಶ್ ಎಸ್. ಕೌಲಗಿ ಅವರ ನೇತೃತ್ವದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಇದಕ್ಕೂ ಮೊದಲು ನಗರದ ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ನಂತರ ವಿಶೇಷವಾಗಿ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವಪೂರ್ವಕ ಅಭಿನಂದನೆಗಳು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಬಸಯ್ಯ ಗುತ್ತೇದಾರ್, ಭೀಮಯ್ಯ ಖನ್ನಾ, ಮಲ್ಲಿಕಾರ್ಜುನ್ ಪೂಜಾರಿ, ಸಾಯಬಣ್ಣ ಹೇಳವರ್, ಚಂದ್ರಶೇಖರ್ ಗೊಂದಳಿ, ಚಂದು ಪವಾರ್, ಕುಮಾರ್ ಯಾದವ್, ಲಕ್ಷ್ಮಣ್ ಪೂಜಾರಿ, ಅರುಣಕುಮಾರ್ ಕಟಬು, ಸ್ವಾಮಿ ಬುರುಗುರೆ, ಈರಣ್ಣ ಬಡಿಗೇರ್, ಕೆ. ಪ್ರಧಾನಿ, ಅಂಬಾರಿಯ ಪೂಜಾರಿ, ಅಂಬಾರಿಯ ಬೋಳೆವಾಡ, ನಾಗಣ್ಣ ಕೆಸರಟಗಿ, ಅನುಪಮಾ ಸುಳೇಕರ್, ಸಾವಿತ್ರಿ ಕೊರಳಿ, ಮಹಾನಗರ ಪಾಲಿಕೆ ಸದಸ್ಯರಾದ ನಿಂಗಮ್ಮ ಕಟ್ಟಿಮನಿ, ಅಮೋಘಸಿದ್ಧ, ಶ್ರೀಮಂತ, ಶರಣಪ್ಪ, ವಿಜಯಕುಮಾರ್, ಶರಣಪ್ಪ ಕೆಸರಟಗಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿ, ಸಿಹಿ ಹಂಚಿಕೊಂಡು ಸಂಭ್ರಮಿಸಿದರು.







