Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ನೇಮಕಾತಿ ಪರೀಕ್ಷೆ...

Kalaburagi | ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Sept 2026 8:33 PM IST
share
Kalaburagi | ನೇಮಕಾತಿ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭೂಮಾಪಕರ ಹುದ್ದೆ ನೇಮಕಾತಿಗೆ ಅ.2ರಂದು ಹಾಗೂ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಅ.4ರಂದು ಕಲಬುರಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಯಾವುದೇ ಅಕ್ರಮಕ್ಕೆ ಅವಕಾಶ ನೀಡದೆ ಶಾಂತಿಯುತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕೆಂದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಖಡಕ್ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅ.2ರಂದು ಭೂಮಾಪಕರ ನೇಮಕಾತಿಗೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಅವಧಿಯಲ್ಲಿ ಕಲಬುರಗಿ ನಗರದ ಸುಮಾರು 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 4,856 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದೇ ರೀತಿ ಅ.4ರಂದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಗೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ಎರಡು ಅವಧಿಯಲ್ಲಿ ನಗರದ ಸುಮಾರು 55 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 20,781 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎರಡೂ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.

ಅ.2ರ ಪರೀಕ್ಷೆಗೆ ತಲಾ 9 ಮಂದಿ ರೂಟ್ ಅಧಿಕಾರಿಗಳು, ವಸ್ತುಸಂಹಿತೆ ಅಧಿಕಾರಿಗಳು ಹಾಗೂ ವೀಕ್ಷಕರನ್ನು ನಿಯೋಜಿಸಲಾಗಿದೆ. ಇದರ ಜೊತೆಗೆ ಎರಡು ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ರಚಿಸಲಾಗಿದೆ. ಅ.4ರ ಪರೀಕ್ಷೆಗೆ 48 ಮಂದಿ ರೂಟ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ವಸ್ತುಸಂಹಿತೆ ಅಧಿಕಾರಿ ಹಾಗೂ ವೀಕ್ಷಕರು ಇರಲಿದ್ದಾರೆ. ಇದರ ಜೊತೆಗೆ 11 ಫ್ಲೈಯಿಂಗ್ ಸ್ಕ್ವಾಡ್‌ಗಳು ನಕಲು ತಡೆಗೆ ಗಸ್ತು ತಿರುಗಲಿವೆ ಎಂದು ಡಿಸಿ ತಿಳಿಸಿದರು.

ಪರೀಕ್ಷೆಗೆ ಮುನ್ನವೇ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಕೇಂದ್ರಗಳಿಗೆ ಭೇಟಿ ನೀಡಿ ಕೊಠಡಿಗಳಲ್ಲಿ ಗಾಳಿ, ಬೆಳಕು, ವಿದ್ಯುತ್, ಮೇಜು, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಯಾವುದೇ ರೀತಿಯ ಅನಾನುಕೂಲವಿಲ್ಲದೆ ಪರೀಕ್ಷೆ ಬರೆಯುವಂತಾಗಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನ ನಿಷೇಧ :

ಮೊಬೈಲ್, ಬ್ಲೂಟೂತ್, ಮೈಕ್ರೋಚಿಪ್, ಗಡಿಯಾರ, ಇಯರ್‌ಫೋನ್, ಪೇಜರ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಪಠ್ಯ ಸಾಮಗ್ರಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೆ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ಡಿಸಿ ಇಕ್ರಮ್ ಶರೀಫ್ ತಿಳಿಸಿದರು.

ವೆಬ್‌ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ :

ಪರೀಕ್ಷೆಯ ಯಾವುದೇ ಹಂತದಲ್ಲೂ ನಕಲು ಹಾಗೂ ಅಕ್ರಮಕ್ಕೆ ಅವಕಾಶ ನೀಡಬಾರದು. ಪ್ರಶ್ನೆಪತ್ರಿಕೆ ತೆರೆಯುವುದರಿಂದ ಪರೀಕ್ಷಾ ಪ್ರಕ್ರಿಯೆ ಸಂಪೂರ್ಣ ಮುಗಿಯುವವರೆಗೆ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಬೇಕು. ವೆಬ್‌ಕಾಸ್ಟಿಂಗ್ ಮೂಲಕ ಪ್ರತಿ ಕೇಂದ್ರದ ಮೇಲೆ ನಿಗಾ ವಹಿಸಲಾಗುವುದು. ಯಾವುದೇ ಅಹಿತಕರ ಘಟನೆ ನಡೆದರೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರೇ ಹೊಣೆಗಾರರಾಗಲಿದ್ದಾರೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಡಿಸಿ ಎಚ್ಚರಿಸಿದರು.

ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಫ್ರಿಸ್ಕಿಂಗ್ :

ಯಾವುದೇ ಅಭ್ಯರ್ಥಿಯ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಪೊಲೀಸ್ ಸಿಬ್ಬಂದಿ ಫ್ರಿಸ್ಕಿಂಗ್ ನಡೆಸಬೇಕು. ಪ್ರವೇಶ ಪತ್ರದಲ್ಲಿ ನೀಡಿರುವ ವಸ್ತುಸಂಹಿತೆ ಸೇರಿದಂತೆ ಎಲ್ಲ ಸೂಚನೆಗಳನ್ನು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿ ಸೂಚಿಸಿದರು.

ಸಭೆಯಲ್ಲಿ ಡಿಸಿಪಿ ಶಾಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಶಾಲಾ ಶಿಕ್ಷಣ (ಪದವಿಪೂರ್ವ) ಉಪನಿರ್ದೇಶಕ ದೇವನಗೌಡ ಪಾಟೀಲ, ಸಹಾಯಕ ಆಯುಕ್ತರಾದ ರಿತಿಕಾ ವರ್ಮಾ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X