ಕಲಬುರಗಿ | ಅತಿವೃಷ್ಟಿಯಿಂದ ಬೆಳೆ ಹಾನಿಯಾದ ಸ್ಥಳಗಳಿಗೆ ಜಿಲ್ಲಾಧಿಕಾರಿಗಳಿಂದ ಭೇಟಿ

ಕಲಬುರಗಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಬೆಳೆ ನಾಶವಾಗಿದ್ದು, ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರು ಕಲಬುರಗಿ ಹಾಗೂ ಅಫಜಲಪುರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ ತಾಲೂಕಿನ ಸಾವಳಗಿ ಬಿ, ಹಡಗಿಲ್ ಹಾರುತಿ, ಮೇಳಕುಂದ (ಕೆ), ಮೇಳಕುಂದ (ಬಿ) ಹಾಗೂ ಅಫಜಲಪುರ ತಾಲೂಕಿನ ಚೌಡಾಪುರ ಸೇರಿದಂತೆ ಇತರೆ ಗ್ರಾಮಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳ ಕ್ಷೇತ್ರಗಳನ್ನು ವೀಕ್ಷಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟೆ, ಸ್ಥಳೀಯ ಕಂದಾಯ ಹಾಗೂ ಕೃಷಿ ಅಧಿಕಾರಿಗಳು ಸೇರಿದಂತೆ ರೈತರು, ಮತ್ತಿತರರು ಇದ್ದರು.
Next Story





