ಕಲಬುರಗಿ | ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತಂತೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಕಲಬುರಗಿ : ಜಿಲ್ಲೆಯ ಚಿಂಚೋಳಿ ವನ್ಯಜೀವಿ ಪ್ರದೇಶದಲ್ಲಿರುವ ಶೆರಿಭೀಕನಳ್ಳಿ ತಾಂಡಾ ಪುನರ್ವಸತಿ ಕುರಿತಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಶೆರಿಭೀಕನಳ್ಳಿ ತಾಂಡಾ ನಿವಾಸಿಗಳನ್ನು ಸ್ಥಾಳಾಂತರಿಸುವ ಸಂಬಂಧ ಸುದೀರ್ಘವಾಗಿ ಚರ್ಚಿಸಲಾಯಿತು. ಇದಲ್ಲದೆ ಮಾಡಬೂಳ ಬಳಿ ಅರಣ್ಯ ಇಲಾಖೆಯಿಂದ ಸ್ಥಾಪಿಸಲಾಗುತ್ತಿರುವ ಮೃಗಾಲಯ ಕಾಮಗಾರಿ ಕುರಿತು ಸಹ ಡಿ.ಸಿ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಡಿ.ಡಿ.ಎಲ್.ಆರ್. ಶರಣಬಸ್ಸು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.
Next Story







