ಕಲಬುರಗಿ | ನ.1ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಭುವನೇಶ್ವರಿ ಪೂಜೆ, ರಾಜ್ಯೋತ್ಸವದ ಧ್ವಜಾರೋಹಣ

ಕಲಬುರಗಿ: ಕಲಬುರಗಿಯ ನೆಹರು ಗಂಜಿನ ಶ್ರೀ ನಗರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ದಿನವಾದ ನ.1ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಾಡದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸುವರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿವಹಿಸುವರು. ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ.ಅವಿನಾಶ ಉಮೇಶ ಜಾಧವ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ.ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಮ್. ವೈ.ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯದ್ ಮೆಹಮೂದ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರು ಅತಿಥಿಗಳಾಗಿ ಉಪಸ್ಥಿತರಿರುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಅವಿನಾಶ ಶಿಂಧೆ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.







