Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜುಲೈ ಮಾಸಾಂತ್ಯಕ್ಕೆ ಜಿಲ್ಲಾ...

ಕಲಬುರಗಿ | ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ತೇಗಲತಿಪ್ಪಿ

ವಾರ್ತಾಭಾರತಿವಾರ್ತಾಭಾರತಿ7 July 2025 6:55 PM IST
share
ಕಲಬುರಗಿ | ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜುಲೈ ಮಾಸಾಂತ್ಯಕ್ಕೆ ಒಂದು ದಿನದ ಕಲಬುರಗಿ ಜಿಲ್ಲಾ ಎರಡನೇ ಯುವ ಸಾಹಿತ್ಯ ಸಮ್ಮೇಳನ ಏರ್ಪಡಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಬಸವಾದಿ ಶರಣರು, ಸೂಫಿ - ಸಂತರ ನೆಲೆವೀಡಾದ ಕಲಬುರಗಿ ನೆಲದಲ್ಲಿ ನಡೆಸಲುದ್ದೇಶಿಸಿರುವ ಈ ಸಮ್ಮೇಳನ ಬಹು ದಿನಗಳ ಕನಸಾಗಿದೆ. ಈ ಭಾಗದಲ್ಲಿ ಅನೇಕ ಕಲಾವಿದರು, ಉದಯೋನ್ಮುಖ ಪ್ರತಿಭಾವಂತ ಬರಹಗಾರರಿದ್ದು, ಅವರಿಗೆ ಸೂಕ್ತ ವೇದಿಕೆಗಳು ಇಲ್ಲದಂತಾಗಿದೆ. ಅನೇಕ ಯುವ ಲೇಖಕರು ಎಲೆಮರೆ ಕಾಯಿಯಂತೆ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮುಕ್ತ ಅವಕಾಶಗಳಿಲ್ಲದ ಪರಿಣಾಮ ಅವರ ಪ್ರತಿಭೆ ಅನಾವರಣಗೊಳ್ಳುತ್ತಿಲ್ಲವಾದ್ದರಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹತ್ತು ಹಲವು ವಿಶಿಷ್ಟ ಮತ್ತು ವೈವಿಧ್ಯಮಯ ಸಾಹಿತ್ಯ ಸಮ್ಮೇಳನಗಳನ್ನು ಕೈಗೊಂಡು ಕನ್ನಡ ಸಾರಸ್ವತ ಲೋಕಕ್ಕೆ ತನ್ನದೇ ಆದ ಛಾಪು ಮೂಡಿಸಿದ್ದು, ಯುವ ಬರಹಗಾರರನ್ನು ಗುರುತಿಸಿ ಪ್ರೋತ್ಸಾಹಿಸಿದೆ ಎಂದು ಅವರು ವಿವರಿಸಿದ್ದಾರೆ.

ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಸ್ವಾಗತ ಸಮಿತಿಯ ರಚನೆ, ಸಮ್ಮೇಳನಾಧ್ಯಕ್ಷರ ಆಯ್ಕೆ ಶೀಘ್ರದಲ್ಲಿಯೇ ಮಾಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಧರ್ಮಣ್ಣ ಎಚ್.ಧನ್ನಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪ್ರಮುಖರಾದ ಧರ್ಮರಾಜ ಜವಳಿ, ಕಲ್ಯಾಣಕುಮಾರ ಶೀಲವಂತ, ರಮೇಶ ಡಿ ಬಡಿಗೇರ, ರಾಜಶೇಖರ ಚೌದ್ರಿ, ಡಾ.ರೆಹಮಾನ್ ಪಟೇಲ್, ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಶಿವಾನಂದ ಸುರವಸೆ, ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಶಕುಂತಲಾ ಪಾಟೀಲ, ಸಿದ್ಧಲಿಂಗ ಜಿ ಬಾಳಿ, ಸಂದೀಪ ಭರಣಿ, ಸುನೀಲ ಇಟಗಿ, ಶಿವಶರಣ ಬಡದಾಳ, ಎಂ ಎನ್ ಸುಗಂಧಿ, ರೇವನಸಿದ್ದಪ್ಪ ಜೀವನಗಿ, ಸೋಮಶೇಖರಯ್ಯಾ ಹೊಸಮಠ, ಸೈಯ್ಯದ್ ನಜೀರುದ್ದಿನ್ ಮುತ್ತವಲಿ, ಸೋಮಶೇಖರ ನಂದಿಧ್ವಜ, ಬಿ.ಎಂ.ಪಾಟೀಲ ಕಲ್ಲೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X