ಕಲಬುರಗಿ | ಜಿಲ್ಲಾಮಟ್ಟದ 2025ರ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025 ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ಅವರು ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸೋಮಶೇಖರ್ ವೈ., ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ- ಅಧಿಕಾರಿ ಸಂಗಮೇಶ, ಮುಂಜಾಮ್ಮಿಲ್ ಆರ್.ಕೆಂಭಾವಿ, ಪ್ರವೀಣ್ ಪುಣೆ, ಸಂಜಯ್ ಬಾಣದ ಸೇರಿದಂತೆ ಮತ್ತಿತರರು ಇದ್ದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬ್ಯಾಂಡ್ಮಿಂಟನ್ ಕ್ರೀಡಾಪಟು ಸಿದ್ದಣ್ಣ ಎಸ್.ಸಾಹುಕರ್, ರಾಷ್ಟ್ರಿಯ ಬಾಸ್ಕೆಟ್ ಬಾಲ್ ಕ್ರೀಡಾಪಟುಗಳಾದ ಸೀರಾಜುದ್ದಿನ್ ಅವರಿಗೆ ವಿಶೇಷ ಸನ್ಮಾನಿಸಲಾಯಿತು.
Next Story







