Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಿಲ್ಲಾ ಮಟ್ಟದ ಜಾನಪದ...

Kalaburagi | ಜಿಲ್ಲಾ ಮಟ್ಟದ ಜಾನಪದ ನೃತ್ಯ, ಪಾತ್ರಾಭಿನಯ ಸ್ಪರ್ಧೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ6 Nov 2026 3:20 PM IST
share
Kalaburagi | ಜಿಲ್ಲಾ ಮಟ್ಟದ ಜಾನಪದ ನೃತ್ಯ, ಪಾತ್ರಾಭಿನಯ ಸ್ಪರ್ಧೆ ಯಶಸ್ವಿ

ಕಲಬುರಗಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅರಿವು, ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಹಾಗೂ ಜೀವನ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಕಲಬುರಗಿ ಇವರ ಜಂಟಿ ಆಶ್ರಯದಲ್ಲಿ 2026–27ನೇ ಸಾಲಿನ ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ (ಎನ್‌ಪಿಇಪಿ) ಅಡಿಯಲ್ಲಿ ಜಿಲ್ಲಾ ಮಟ್ಟದ ಜಾನಪದ ನೃತ್ಯ ಮತ್ತು ಪಾತ್ರಾಭಿನಯ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಶಿಕ್ಷಕಿಯರ ಕಾಲೇಜಿನ (ಟಿ.ಟಿ.ಐ) ಪ್ರಾಚಾರ್ಯರಾದ ವಿಜಯಲಕ್ಷ್ಮಿ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕ ಚಂದ್ರಕಾಂತ ಕೊಣ್ಣೂರ ಹಾಗೂ ಉಪನ್ಯಾಸಕ ಮಹಿಬೂಬ್ ಐಸಾಕಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಮೀರಾ ಪಟೇಲ್ ಮತ್ತು ಪಂಚಶೀಲಾ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಉಪನ್ಯಾಸಕ ಮಲಕಣ್ಣ ಹಚ್ಚಡದ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಸಂಯೋಜಕ ಚಂದ್ರಕಾಂತ ಕೊಣ್ಣೂರ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳ ಸ್ವರೂಪ, ನಿಯಮಾವಳಿಗಳು, ಮೌಲ್ಯಮಾಪನದ ಮಾನದಂಡಗಳು ಹಾಗೂ ಅವುಗಳನ್ನು ಪಾಲಿಸುವ ಮಹತ್ವದ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ಶಿಸ್ತು, ಸೃಜನಶೀಲತೆ ಮತ್ತು ತಂಡದ ಸಹಕಾರದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿ ಮೀರಾ ಪಟೇಲ್ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಜನಸಂಖ್ಯಾ ಶಿಕ್ಷಣದ ಮಹತ್ವ ಮತ್ತು ಅದರ ಅನಿವಾರ್ಯತೆಯನ್ನು ವಿವರಿಸಿದರು. ಜನಸಂಖ್ಯಾ ಬೆಳವಣಿಗೆ, ಆರೋಗ್ಯ, ಪರಿಸರ, ಕುಟುಂಬ ಜೀವನ, ಲಿಂಗ ಸಮಾನತೆ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ವಿಷಯಗಳ ಕುರಿತು ವಿದ್ಯಾರ್ಥಿಗಳಲ್ಲಿ ಸೂಕ್ತ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಇಂತಹ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಜೀವನದ ವಾಸ್ತವಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳುವ ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳುವ ಸಾಮರ್ಥ್ಯವನ್ನು ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷೀಯ ಭಾಷಣ ಮಾಡಿದ ಸರ್ಕಾರಿ ಶಿಕ್ಷಕಿಯರ ಕಾಲೇಜಿನ ಪ್ರಾಚಾರ್ಯೆ ವಿಜಯಲಕ್ಷ್ಮಿ ಅವರು, ಸ್ಪರ್ಧೆಗಳ ಮೌಲ್ಯಮಾಪನ ಸಂಪೂರ್ಣ ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತಿಭೆಗೂ ಸೂಕ್ತ ಗೌರವ ಮತ್ತು ಪ್ರೋತ್ಸಾಹ ದೊರೆಯಬೇಕು. ವಿಜೇತರ ಆಯ್ಕೆಯಲ್ಲಿ ಯಾವುದೇ ಪೂರ್ವಾಗ್ರಹಗಳಿಗೆ ಅವಕಾಶ ನೀಡದೆ ನ್ಯಾಯಯುತ ತೀರ್ಪು ನೀಡುವುದು ಅತ್ಯಂತ ಮುಖ್ಯ ಎಂದರು.

ಜಿಲ್ಲಾ ಮಟ್ಟದಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ರಾಷ್ಟ್ರಮಟ್ಟದವರೆಗೂ ಮುನ್ನಡೆಯುವ ಮೂಲಕ ಕಲಬುರಗಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಬೆಳೆಸಲು ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು ಜಾನಪದ ನೃತ್ಯ ಮತ್ತು ಪಾತ್ರಾಭಿನಯ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕಲಾತ್ಮಕ ಪ್ರತಿಭೆ, ಅಭಿವ್ಯಕ್ತಿ ಸಾಮರ್ಥ್ಯ ಹಾಗೂ ಸೃಜನಶೀಲತೆಯನ್ನು ಅನಾವರಣಗೊಳಿಸಿದರು. ಜಾನಪದ ಕಲೆಯ ಮೂಲಕ ಸಾಮಾಜಿಕ ಸಂದೇಶಗಳನ್ನು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿದರೆ, ಪಾತ್ರಾಭಿನಯದ ಮೂಲಕ ವಿವಿಧ ಸಾಮಾಜಿಕ ವಿಷಯಗಳನ್ನು ಮನಮುಟ್ಟುವಂತೆ ಅಭಿವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಶಿಕ್ಷಣ ತಜ್ಞರು, ವಿವಿಧ ಶಾಲೆಗಳ ಶಿಕ್ಷಕರು, ಸರ್ಕಾರಿ ಶಿಕ್ಷಕಿಯರ ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದು, ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.

Tags

Folk DanceKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X