ಕಲಬುರಗಿ ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಅರ್ಜುಣಗಿ ಕಾಲೇಜಿನ ಬಾಲಕಿಯರ ತಂಡ ಆಯ್ಕೆ

ಕಲಬುರಗಿ: 2026ರ ಅಕ್ಟೋಬರ್ 27ರಂದು ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಫಜಲಪುರ ತಾಲೂಕಿನ ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪದವಿ ಪೂರ್ವ ವಿಭಾಗದ ಬಾಲಕಿಯರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ತಂಡದ ಈ ಸಾಧನೆಗೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಹರ್ಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿಯರ ಕ್ರೀಡಾ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್, ತರಬೇತುದಾರ ರಾಜಶೇಖರ ಕುಂಬಾರ, ಕನ್ನಡ ಭಾಷೆಯ ಉಪನ್ಯಾಸಕಿ ಪ್ರತೀಮಾ ಪಾಟೀಲ್ ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕರು, ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
Next Story




